ನೂತನ ಘಟಕಗಳ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭ
ಕನ್ನಡ ಸಾಹಿತ್ಯ ಪರಿಷತ್ತಿನ ಕಡೂರು ನಗರ ಘಟಕದ ಅಧ್ಯಕ್ಷರಾಗಿ ಕೆ.ಜಿ. ವಸಂತ್ ಕುಮಾರ್ ಆಯ್ಕೆಯಾದರು.
ಪಟ್ಟಣದ ಕನ್ನಡ ಭವನದಲ್ಲಿ ಪರಿಷತ್ತಿನ ನೂತನ ಘಟಕಗಳ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು.ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಕಸಾಪ ಜಿಲ್ಲಾ ಅಧ್ಯಕ್ಷ ಸೂರಿ ಶ್ರೀನಿವಾಸ್ ಕನ್ನಡ ನಾಡು ನುಡಿ ನೆಲ ಜಲ ಸಂಸ್ಕೃತಿಗೆ ಸಂಬಂಧಿಸಿದಂತೆ ವಿನೂತನ ಕಾರ್ಯಕ್ರಮಗಳು ವಿಚಾರ ಸಂಕಿರಣಗಳು, ಕಲಾ ಉತ್ಸವಗಳು ಮಾಡುವ ಮೂಲಕ ಕನ್ನಡ ಸಾಹಿತ್ಯ ಪರಂಪರೆಯನ್ನು ಎಲ್ಲೆಡೆ ಪಸರಿಸಲು ಪ್ರತಿಯೊಬ್ಬರು ತಮ್ಮನ್ನು ಅರ್ಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸಮಾರಂಭದಲ್ಲಿ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಚಿಕ್ಕನಲ್ಲೂರು ಪರಮೇಶ್, ತಾಲೂಕು ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ ಕೋಶಾಧ್ಯಕ್ಷ ಬಿ ಪ್ರಕಾಶ್, ಲತಾ ರಾಜಶೇಖರ್, ಬೀರೂರು ನಗರ ಘಟಕದ ಅಧ್ಯಕ್ಷ ಎನ್.ಡಿ. ಸೀತಾಲಕ್ಷ್ಮೀ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸಿತರಿದ್ದರು.
15ಕೆಕೆೆೆಡಿಯು3.ಪಟ್ಟಣದ ಕನ್ನಡ ಭವನದಲ್ಲಿ ಪರಿಷತ್ತಿನ ನೂತನ ಘಟಕಗಳ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು.