ಮತಗಟ್ಟೆ ಪರಿಶೀಲಿಸಿದ ಚಿಕ್ಕೋಡಿ ಕ್ಷೇತ್ರದ ಚುನಾವಣಾಧಿಕಾರಿ

KannadaprabhaNewsNetwork |  
Published : Apr 18, 2024, 02:22 AM IST
ಚಿಕ್ಕೋಡಿ ಹಾಲಟ್ಟಿ ಬಳಿ ಇರುವ  ಚೆಕ್‌ಪೋಸ್ಟ್‌ಗೆ ಚುನಾವಣಾಧಿಕಾರಿ ರಾಹುಲ್‌ ಶಿಂಧೆ ಬೇಟ್ಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಹುಕ್ಕೇರಿ: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಮೇ7ರಂದು ಮತದಾನ ಜರುಗಲಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ವಿಧಾನಸಭೆ ಮತಕ್ಷೇತ್ರದ ವ್ಯಾಪ್ತಿಯ ಸೂಕ್ಷ್ಮ, ಅತೀ ಸೂಕ್ಷ್ಮ, ಸಖಿ ಹಾಗೂ ಮಾದರಿ ಮತಗಟ್ಟೆಗಳಿಗೆ ಬುಧವಾರ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಜಿಪಂ ಸಿಇಒ ರಾಹುಲ್‌ ಶಿಂಧೆ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಮೇ7ರಂದು ಮತದಾನ ಜರುಗಲಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ವಿಧಾನಸಭೆ ಮತಕ್ಷೇತ್ರದ ವ್ಯಾಪ್ತಿಯ ಸೂಕ್ಷ್ಮ, ಅತೀ ಸೂಕ್ಷ್ಮ, ಸಖಿ ಹಾಗೂ ಮಾದರಿ ಮತಗಟ್ಟೆಗಳಿಗೆ ಬುಧವಾರ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಜಿಪಂ ಸಿಇಒ ರಾಹುಲ್‌ ಶಿಂಧೆ ಭೇಟಿ ನೀಡಿ ಪರಿಶೀಲಿಸಿದರು.

ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆಗಳ ವ್ಯಾಪ್ತಿಯಲ್ಲಿನ ಮತದಾರರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಪೊಲೀಸ್ ಪಥ ಸಂಚಲನ ಹಾಗೂ ಸ್ವೀಪ್‌ ಸಮಿತಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.

ಮತದಾನದ ದಿನದಂದು ಮತಗಟ್ಟೆಗೆ ಆಗಮಿಸುವ ಮತದಾರರಿಗೆ ನೆರಳು, ಕುಡಿಯುವ ನೀರು, ಕಾಯುವಿಕೆ ಸ್ಥಳಗಳನ್ನು ಪರಿಶೀಲಿಸಿ, ಮತಗಟ್ಟೆಗಳಿಗೆ ಆಗಮಿಸುವ ವಿಕಲಚೇತನರಿಗೆ ಗಾಲಿ ಕುರ್ಚಿಗಳ ವ್ಯವಸ್ಥೆಗೆ ಕ್ರಮಕೈಗೊಳ್ಳಬೇಕು. ಒಟ್ಟಾರೆಯಾಗಿ ಮತದಾನದ ದಿನದಂದು ಮತಗಟ್ಟೆಗಳಿಗೆ ಆಗಮಿಸುವ ಮತದಾರರಿಗೆ ಯಾವುದೇ ರೀತಿಯ ಅನಾನುಕೂಲತೆಗಳು ಆಗದಂತೆ ನಿಗಾವಹಿಸಲು ಸೂಚನೆ ನೀಡಿದರು.

ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಉಪಸ್ಥಿತರಿದ್ದರು.

ಹಾಲಟ್ಟಿ ಚೆಕ್‌ಪೋಸ್ಟ್ ಗೆ ಭೇಟಿ:

ಚಿಕ್ಕೋಡಿ: ಚುನಾವಣೆ ಅಕ್ರಮ ನಿಯಂತ್ರಿಸುವ ನಿಟ್ಟಿನಲ್ಲಿ ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಚೆಕಪೋಸ್ಟ್ ಸ್ಥಾಪಿಸಲಾಗಿದ್ದು, ಬುಧವಾರ ಹಾಲಟ್ಟಿ ಚೆಕ್‌ ಪೋಸ್ಟ್ ಗೆ ಚಿಕ್ಕೋಡಿ ಮತಕ್ಷೇತ್ರದ ಚುನಾಚಣಾಧಿಕಾರಿ ರಾಹುಲ್‌ ಶಿಂಧೆ ಭೇಟಿ ನೀಡಿ ಪರಿಶೀಲಿಸಿದರು.

ಚೆಕ್‌ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಯಿಂದ ಮಾಹಿತಿ ಪಡೆದ ಅವರು, ಚೆಕಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿ ತಮ್ಮ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ಚುನಾವಣೆ ಕರ್ತವ್ಯ ಅತ್ಯಂತ ಜವಾಬ್ದಾರಿಯ ಕಾರ್ಯವಾಗಿದ್ದು, ಈ ಕಾರ್ಯದಲ್ಲಿ ಉದಾಸೀನ, ಅಜಾಗರೂಕತೆ ಹಾಗೂ ಲೋಪಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಖಡಕ್ ಸೂಚನೆ ನೀಡಿದರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!