ಕನ್ನಡಪ್ರಭ ವಾರ್ತೆ ಮುಧೋಳಚುನಾವಣೆ ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣೆ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.
ಕನ್ನಡಪ್ರಭ ವಾರ್ತೆ ಮುಧೋಳ
ಚುನಾವಣೆ ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣೆ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.
ಜಮಖಂಡಿ ತಾಲೂಕಿನ ಬಿದರಿ ಗ್ರಾಮದ ತೋಟದ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಗೋವಿಂದಪ್ಪ ಸಿದ್ದಾಪುರ (47) ಮೃತ ಶಿಕ್ಷಕ. ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಚುನಾವಣೆ ಕರ್ತವ್ಯಕ್ಕೆ ಜಮಖಂಡಿಗೆ ತೆರಳಲು ಮುಧೋಳ ನಗರದಿಂದ ಬಸ್ ಹತ್ತಲು ನಿಲ್ದಾಣಕ್ಕೆ ಬಂದ ವೇಳೆ ಗೇಟ್ ಬಳಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರಿಗೆ ಪತ್ನಿ ಮೂವರು ಪುತ್ರಿಯರು ಇದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.