ಕನ್ನಡಪ್ರಭ ವಾರ್ತೆ ಮೈಸೂರು
ಆದರೆ, ವಿಶ್ರಾಂತಿಯ ನಡುವೆಯೂ ಮೈಸೂರು- ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಚುನಾವಣೆ ಗೆಲುವಿನ ಸಂಬಂಧ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸುವ ಮೂಲಕ ಬಿರುಸಿನ ರಾಜಕೀಯ ಚಟುವಟಿಕೆ ಮೂಲಕ ತಂತ್ರಗಾರಿಕೆಯನ್ನು ರೂಪಿಸುತ್ತಿದ್ದಾರೆ.
ಭಾನುವಾರ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ನಾಯಕರು, ಮುಖಂಡರ ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದ್ದರು. ಬಳಿಕ ಆರೆಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ಅವರು, ತಡರಾತ್ರಿವರೆಗೂ ಸಭೆ ನಡೆಸಿ, ಲೋಕಸಭಾ ಚುನಾವಣೆಯ ಸಾಧಕಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿ, ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ರಣತಂತ್ರ ರೂಪಿಸುತ್ತಿದ್ದಾರೆ.ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಬಗೆಗಿನ ಚುನಾವಣೆ ಸೂಕ್ಷ್ಮತೆಗಳ ಬಗ್ಗೆ ಪಕ್ಷದ ನಾಯಕರು, ಮುಖಂಡರಿಗೆ ತಿಳಿ ಹೇಳಿರುವ ಸಿದ್ದರಾಮಯ್ಯ ಅವರು, ಬೂತ್ ಮಟ್ಟದಲ್ಲಿ ಸಂಘಟನಾತ್ಮಕವಾಗಿ ಚುನಾವಣೆ ನಡೆಸಲು ಸೂಚಿಸಿದ್ದಾರೆ.
ಇನ್ನೂ ಎರಡು ದಿನಗಳ ಕಾಲ ರೆಸಾರ್ಟ್‌ನಲ್ಲೇ ತಂಗಲಿರುವ ಸಿದ್ದರಾಮಯ್ಯ ಅವರು, ವಿಶ್ರಾಂತಿಯ ನೆಪದಲ್ಲಿ ಲೋಕಸಭೆ ಚುನಾವಣಾ ತಂತ್ರಗಾರಿಕೆಯಲ್ಲಿ ನಿರತರಾಗಿದ್ದಾರೆ.