2 ಶಿಕ್ಷಕರ ಕ್ಷೇತ್ರ, 1 ಪದವೀಧರ ಕ್ಷೇತ್ರ: 9ರಿಂದ ನಾಮಪತ್ರ ಸಲ್ಲಿಕೆ

KannadaprabhaNewsNetwork |  
Published : May 04, 2024, 01:39 AM ISTUpdated : May 04, 2024, 11:10 AM IST
ಕ್ಯಾಪ್ಷನಃ3ಕೆಡಿವಿಜಿ38ಃದಾವಣಗೆರೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ವಿಧಾನ ಪರಿಷತ್ ಚುನಾವಣೆ ಕುರಿತು ಮಾಹಿತಿ ನೀಡುವ ಸಭೆ ನಡೆಯಿತು. | Kannada Prabha

ಸಾರಾಂಶ

ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

 ದಾವಣಗೆರೆ :  ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮತದಾರರ ನೋಂದಣಿಗೆ ಮೇ 6 ಕೊನೆಯ ದಿನ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದರು.

ಶುಕ್ರವಾದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ವಿಧಾನ ಪರಿಷತ್ತು ಚುನಾವಣೆ ಕುರಿತು ಮಾಹಿತಿ ನೀಡುವ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮೂರು ವಿಧಾನಸಭಾ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಆಯನೂರು ಮಂಜುನಾಥ್ ನೈರುತ್ಯ ಪದವೀಧರರ ಕ್ಷೇತ್ರದ ಸದಸ್ಯರಾಗಿದ್ದು, ಏ.19ರಂದು ರಾಜಿನಾಮೆ ನೀಡಿದ್ದರು. ಎಸ್.ಎಲ್.ಭೋಜೆಗೌಡ ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಸದಸ್ಯರಾಗಿದ್ದು, ಇವರ ಅವಧಿ ಜೂನ್ 21ಕ್ಕೆ ಮುಕ್ತಾಯಗೊಳ್ಳುವುದರಿಂದ ಈ ಮೂರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಂದರು.

ಮೇ 9ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಮೇ 16 ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆ ದಿನವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ, ಮೇ 20ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನ. ಜೂನ್ 3ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 6 ರಂದು ನಡೆಯಲಿದ್ದು, ಜೂನ್ 12 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ. ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳು. ನೈರುತ್ಯ ಶಿಕ್ಷಕರ, ಪದವೀಧರ ಕ್ಷೇತ್ರಕ್ಕೆ ಮೈಸೂರು ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು, ಜಿಲ್ಲಾಧಿಕಾರಿ ಸಹಾಯಕ ಚುನಾವಣಾಧಿಕಾರಿ ಆಗಿರುವರು ಎಂದರು.

ಮತದಾರರ ನೋಂದಣಾಧಿಕಾರಿಗಳು:  ಆಯಾ ವಿಭಾಗದ ಉಪವಿಭಾಗಾಧಿಕಾರಿಗಳು, ತಹಸೀಲ್ದಾರರು ಸಹಾಯಕ ಮತದಾರರ ನೋಂದಣಾಧಿಕಾರಿಗಳಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಯೋಜಿತ ಅಧಿಕಾರಿಗಳು. ಮತದಾರರ ನೋಂದಣಿ ವೇಳೆ ಒಬ್ಬರಿಂದ ಗರಿಷ್ಠ 5 ಅರ್ಜಿಗಳನ್ನು ಮಾತ್ರ ಮತದಾರರ ನೋಂದಣಿಗೆ ಸ್ವೀಕರಿಸಲಾಗುತ್ತದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

 2023ರ ಡಿಸೆಂಬರ್ ಅಂತ್ಯಕ್ಕೆ ಮತದಾರರ ವಿವರ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲೂಕುಗಳು ಸೇರಲಿದ್ದು ಗಂಡು 2564, ಮಹಿಳೆ 1384 ಸೇರಿ 3948 ಮತದಾರರಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಚನ್ನಗಿರಿ ತಾ. ಬಸವಪಟ್ಟಣ-1 ಮತ್ತು 2 ನೇ ಹೋಬಳಿ, ಸಂತೆಬೆನ್ನೂರು-1 ಮತ್ತು 2 ನೇ ಹೋಬಳಿ, ಚನ್ನಗಿರಿ ತಾ; ಕಸಬಾ, ಉಬ್ರಾಣಿ ಹೋಬಳಿ, ದೇವರಹಳ್ಳಿ ಸೇರಿ ಒಟ್ಟು ಗಂಡು 688, ಹೆಣ್ಣು 246 ಸೇರಿ ಒಟ್ಟು 934, ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನ್ಯಾಮತಿ, ಹೊನ್ನಾಳಿ, ಚನ್ನಗಿರಿ ತಾ; ಬಸವಪ್ಟಣ-1 ಮತ್ತು 2 ಹೋಬಳಿ, ಸಂತೆಬೆನ್ನೂರು 1 ಮತ್ತು 2, ಚನ್ನಗಿರಿ ತಾ; ಕಸಬಾ, ಉಬ್ರಾಣಿ ಹೋಬಳಿ, ದೇವರಹಳ್ಳಿ ಗ್ರಾಮ ಒಳಗೊಂಡಂತೆ 3900 ಗಂಡು, 2096 ಹೆಣ್ಣು ಸೇರಿ 6296 ಮತದಾರರಿದ್ದಾರೆ. 

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ