ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಕೆರಗೋಡಿನಲ್ಲಿ ನಡೆದ ಪಂಚಲಿಂಗೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಸುದ್ಧಿಗಾರರೊಂದಿಗೆ ಮಾತನಾಡಿ, ಕೇವಲ ಹಣ ಇದ್ದೋರಿಗೆ ಮಾತ್ರ ಟಿಕೆಟ್ ಎನ್ನುವುದು ಸರಿಯಲ್ಲ. ಹಣ ಇರುವವರೆಲ್ಲರೂ ಗೆಲ್ಲಲು ಸಾಧ್ಯವೂ ಇಲ್ಲ. ಜನ ಬೆಂಬಲ ಇದ್ದಾಗ ಮಾತ್ರ ಗೆಲುವು ಕಾಣಲು ಸಾಧ್ಯ ಎಂದು ಡಾ.ಎಚ್.ಎನ್.ರವೀಂದ್ರ ಆರೋಪಕ್ಕೆ ತಿರುಗೇಟು ನೀಡಿದರು.
ಪಕ್ಷದ ಸ್ಥಳೀಯ ನಾಯಕರು, ವರಿಷ್ಠರು ನನ್ನನ್ನು ನಂಬಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ. ಇಷ್ಟು ದಿನ ಸಂಭಾವ್ಯ ಎಂದು ಬಿಂಭಿತವಾಗಿತ್ತು. ಇಂದು ಅಧಿಕೃತವಾಗಿ ಘೋಷಣೆ ಆಗಿದೆ. ನನ್ನ ಶಕ್ತಿ ಮೀರಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ದುಡಿಯುತ್ತೇನೆ. ಸ್ಟಾರ್ ಚಂದ್ರು ಹೆಸರಿನಲ್ಲಿ ಸ್ಟಾರ್ ಇದೆ ಅಂದುಕೊಂಡಿದ್ದೇನೆ. ಎಲ್ಲರೂ ಸಹಕರಿಸಿ ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.ದೇವರಲ್ಲಿ ನನ್ನನ್ನು ಗೆಲ್ಲಿಸು ಎಂದು ಪ್ರಾರ್ಥಿಸಿದ್ದೇನೆ. ಶಿವರಾತ್ರಿ ಹಬ್ಬದಂದೇ ಟಿಕೆಟ್ ಸಿಕ್ಕಿದೆ. ನಾನು ಹಿಂದಿನಿಂದಲೂ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ನನ್ನ ಮನೆಯಲ್ಲಿ ಅಣ್ಣ, ಅಳಿಯ ಹಾಗೂ ಬೀಗರು ಕೂಡ ಶಾಸಕರು, ಸಂಸದರಾಗಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳು ನನ್ನನ್ನು ಗೆಲ್ಲಿಸಲಿದೆ ಎಂಬ ವಿಶ್ವಾಸವೂ ಇದೆ. ಪಕ್ಷದ ಎಲ್ಲರ ಜೊತೆ ಮೊದಲೇ ಮಾತನಾಡಿ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ. ಒಮ್ಮತದಿಂದ ನನ್ನ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿಯಲಿವೆ: ರವಿಕುಮಾರ್
ಜಿಲ್ಲೆಯ ಆರು ಮಂದಿ ಶಾಸಕರೂ ಮನೆ ಮನೆಗೂ ಭೇಟಿ ನೀಡಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಶಾಸಕರಾಗಿ ಏನೆಲ್ಲಾ ಕೆಲಸಗಳನ್ನು ಮಾಡಬೇಕೋ ಅಷ್ಟೂ ಕೆಲಸಗಳನ್ನೂ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿಯುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಾಲಿ ಧನಂಜಯ ಅವರು ಆತ್ಮೀಯರು. ಅವರು ಮತ್ತು ಹರ್ಷಿಕಾ ಪೂಣಚ್ಚ ಅವರನ್ನು ಕಾರ್ಯಕ್ರಮಕ್ಕೆ ಕರೆದಿದ್ದೇವೆ. ಬಂದಿದ್ದಾರೆ. ಮುಂದೆ ಚುನಾವಣೆಗೂ ಅವರನ್ನು ಕರೆಯುತ್ತೇವೆ. ಏನೂ ತೊಂದರೆ ಇಲ್ಲ ಎಂದು ಹೇಳಿದರು.