ಯುವ ಪೀಳಿಗೆ ಭವಿಷ್ಯ ನಿರ್ಧರಿಸುವ ಚುನಾವಣೆ: ಸಂದೀಪ್

KannadaprabhaNewsNetwork | Published : Apr 24, 2024 2:18 AM

ಸಾರಾಂಶ

ಇದೇ ಏ. 26ರಂದು ನಡೆಯಲಿರುವ ಲೋಕಸಭಾ ಚುನಾವಣೆ ಯುವ ಪೀಳಿಗೆ ಭವಿಷವನ್ನು ನಿರ್ಧರಿಸುವ ಚುನಾವಣೆಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು.

ಬಿ.ಆರ್‌.ಅಂಬೇಡ್ಕರ್, ಜವಾಹರ್ ಲಾಲ್ ನೆಹರುರನ್ನು ನೆನೆಯಬೇಕು । ಹಿರೇಮಗಳೂರಲ್ಲಿ ನಡೆದ ಚುನಾವಣಾ ಪ್ರಚಾರ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಇದೇ ಏ. 26ರಂದು ನಡೆಯಲಿರುವ ಲೋಕಸಭಾ ಚುನಾವಣೆ ಯುವ ಪೀಳಿಗೆ ಭವಿಷವನ್ನು ನಿರ್ಧರಿಸುವ ಚುನಾವಣೆಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು. ಹಿರೇಮಗಳೂರಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಇಂದು ಮಹಿಳೆಯರು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಸಂವಿಧಾನಬದ್ಧವಾದ ಮತದಾನದ ಹಕ್ಕನ್ನು ಕೊಟ್ಟಿದ್ದು ಭಾರತ ಇದಕ್ಕೆ ಕಾರಣರಾದ ಡಾ ಬಿ.ಆರ್‌.ಅಂಬೇಡ್ಕರ್ ಮತ್ತು ಜವಾಹರ್ ಲಾಲ್ ನೆಹರು ಅವರನ್ನು ನೆನೆಯಬೇಕಾಗಿದೆ ಎಂದರು.ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವ ಡಾ.ಬಿ.ಆರ್‌ಅಂಬೇಡ್ಕರ್‌ರವರನ್ನು ಹಿಯಾಳಿಸುತ್ತಿರುವ ಬಿಜೆಪಿಯನ್ನು ತಿರಸ್ಕರಿಸಿ ಬಡವರ ದೀನ ದಲಿತರ ಬದುಕಿನ ಬಗ್ಗೆ ಚಿಂತಿಸುತ್ತಿರುವ ಕಾಂಗ್ರೆಸ್ ನ್ನು ಬೆಂಬಲಿಸಿ ಹಸ್ತದ ಗುರುತಿಗೆ ಮತ ನೀಡುವ ಮೂಲಕ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವಾಂತರಗಳಿಂದ ದೇಶದಲ್ಲಿ ತಲ್ಲಣ ಉಂಟಾಗಿತ್ತು. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ಗಾಂಧಿ ನೇತೃತ್ವದಲ್ಲಿ ಭಾರತ ಜೋಡೋ ಕಾರ್ಯಕ್ರಮ ನಡೆಸಿ ಜನಜಾಗೃತಿ ಮೂಡಿಸಿದ್ದನ್ನು ಸಹಿಸಿಕೊಳ್ಳದ ಬಿಜೆಪಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.ರಾಜ್ಯ ಸರ್ಕಾರ ಜಾರಿಗೆ ತಂದು ಅನುಷ್ಟಾನ ಮಾಡಿರುವ 5 ಗ್ಯಾರಂಟಿಗಳ ಮಾದರಿಯಲ್ಲಿಯೇ ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಐದು ವಿಶೇಷವಾದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿದ್ದು ಪ್ರತಿಯೊಬ್ಬ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ವಿನಂತಿಸಿದರು.ಕಳೆದ 10 ವರ್ಷಗಳ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಮತ ಹಾಕಿದ ರಾಜ್ಯದ ಜನತೆಗೆ ಚೊಂಬು ನೀಡಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಬಿಜೆಪಿಯನ್ನು ತೊಲಗಿಸಿ ಎಂದು ಕರೆ ನೀಡಿದರು.ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ಬಡವರ ಪರಯೋಚನೆ ಮಾಡುವ ಕಾಂಗ್ರೆಸ್ ಬೆಲೆ ಏರಿಕೆಯಿಂದ ತತ್ತರಿಸಿದ್ದ ಮಹಿಳೆಯರಿಗೆ ಗೃಹಲಕ್ಷ್ಮಿಯೋಜನೆಯಡಿ 2 ಸಾವಿರ ರು. ನೀಡುವ ಮೂಲಕ ಆರ್ಥಿಕ ಸದೃಢರನ್ನಾಗಿಸಿದ್ದು ಉಚಿತ ವಿದ್ಯುತ್, ಉಚಿತ ಬಸ್ ಪ್ರಯಾಣ, ಅನ್ನಭಾಗ್ಯದಡಿ ಉಚಿತ 10 ಕೆಜಿ ಅಕ್ಕಿ ಹಾಗೂ ಯುವನಿಧಿಯಡಿ ನಿರುದ್ಯೋಗಿ ಯುವಕರಿಗೆ 3 ಸಾವಿರ ರೂ. ನೀಡುತ್ತಿದ್ದೇವೆ ಎಂದರು.ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಡಿ ಬಿಜೆಪಿ ಮನೆಯವರು ಕಾಂಗ್ರೆಸ್‌ಗೆ ಮತ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ, ಉಳುವವನೇ ಭೂಮಿ ಒಡೆಯ ಎಂಬ ಕಾನೂನು ಜಾರಿಗೆ ತಂದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರನ್ನು ನೆನೆಯಬೇಕಾದರೆ ಕಾಂಗ್ರೆಸ್‌ಗೆ ಮತ ನೀಡಿ ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಐಸಿಯು ಘಟಕ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಸುಸಜ್ಜಿತವಾದ ಘಟಕವನ್ನು ಕಳೆದ ಒಂದು ತಿಂಗಳ ಹಿಂದೆ ಉದ್ಘಾಟಿಸಿದ್ದು, ಇನ್ನೆರಡು ವರ್ಷದಲ್ಲಿ ಪ್ರಕಾಶ್ ಹೆಗ್ಡೆ ನಾವು ಸೇರಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯನ್ನು ಸಾರ್ವಜನಿಕರಿಗೆ ಸಮರ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಹ್ವಾನಿಸುವುದಾಗಿ ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ವೆಂಕಟೇಶ್‌ ನಾಯ್ಡು, ಜಿಲ್ಲಾ ಕಾರ್ಯದರ್ಶಿ ರಾಮಚಂದ್ರ, ನಗರಾಧ್ಯಕ್ಷ ತನೂಜ್‌ನಾಯ್ಡು, ಗ್ರಾಮಸ್ಥರಾದ ಎಚ್.ಎಸ್‌ಜಗದೀಶ್,ಎಚ್.ಬಿ ಸುರೇಶ್, ಚಂದ್ರಪ್ಪ, ಎಚ್.ಎಸ್ ಸುರೇಶ್, ಗಂಗಾಧರ್, ಹೆಚ್.ವೈ ಮೋಹನ್, ಜಯಣ್ಣ, ಶಿವಣ್ಣ ಉಪಸ್ಥಿತರಿದ್ದರು.

ಪೋಟೋ ಫೈಲ್‌ ನೇಮ್‌ 23 ಕೆಸಿಕೆಎಂ 1ಎಐಸಿಸಿ ಕಾರ್ಯದರ್ಶಿ ಸಂದೀಪ್ ನೇತೃತ್ವದಲ್ಲಿ ಹಿರೇಮಗಳೂರಿನಲ್ಲಿ ಕಾಂಗ್ರೆಸ್‌ ಚುನಾವಣಾ ಪ್ರಚಾರ ನಡೆಯಿತು.

Share this article