ಕನ್ನಡಪ್ರಭ ವಾರ್ತೆ ಉಡುಪಿ
ಅವರು ಬುಧವಾರ ನಗರದ ಸೈಂಟ್ ಸಿಸಿಲೀಸ್ ವಿದ್ಯಾ ಸಂಸ್ಥೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆಯೋಜಿಸಲಾದ 2ನೇ ಸುತ್ತಿನ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನ - ಮಾರ್ಗಸೂಚಿಗಳನ್ನು ಪಾಲಿಸಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡದೇ ಮತದಾನ ಪ್ರಕ್ರಿಯೆಯು ಸುಸೂತ್ರವಾಗಿ ನಡೆಯುವಂತೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.ಮತಯಂತ್ರಗಳ ಬಳಕೆಯ ಕುರಿತು ಪ್ರಾಯೋಗಿಕ ತರಬೇತಿಗಳನ್ನು ಸರಿಯಾಗಿ ತಿಳಿದುಕೊಂಡಲ್ಲಿ ಮತದಾನ ದಿನದಂದು ಅವುಗಳ ಬಳಕೆಗೆ ಯಾವುದೇ ಸಮಸ್ಯೆಯಿಲ್ಲದೇ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ತರಬೇತಿಯಲ್ಲಿ ಇವುಗಳ ಬಗ್ಗೆ ತಿಳಿದುಕೊಳ್ಳಲು ಒತ್ತು ನೀಡಬೇಕು ಎಂದು ಹೇಳಿದರು.
ಮತದಾನದ ದಿನದಂದು ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ರೀತಿಯ ತಾಂತ್ರಿಕ ಅಥವಾ ಬೇರೆ ರೀತಿಯ ಗೊಂದಲ, ಸಮಸ್ಯೆಗಳು ಉಂಟಾದಲ್ಲಿ ಹೆದರುವ ಅಗತ್ಯವಿಲ್ಲ. ಎಲ್ಲದಕ್ಕೂ ಚುನಾವಣಾ ಆಯೋಗದಿಂದ ನಿರ್ದೇಶನಗಳಿವೆ ಅದನ್ನು ಪಾಲಿಸಬೇಕು. ಸೆಕ್ಟರ್ ಆಫೀಸರ್, ಹಿರಿಯ ಅಧಿಕಾರಿಗಳ ಸಲಹೆ ಪಡೆದು, ಚುನಾವಣಾ ನಿಯಮಗಳ ಅನುಸಾರ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾ ಅಧಿಕಾರಿ ಶಿವಪ್ರಸಾದ್ ಗಾಂವ್ಕರ್, ಡಿಡಿಪಿಐ ಗಣಪತಿ, ತಹಸೀಲ್ದಾರ್ ಗುರುರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.