ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ಬೆಂಕಿಗೆ ಆಹುತಿಯಾದ ಮನೆ

KannadaprabhaNewsNetwork |  
Published : Oct 19, 2023, 12:45 AM IST
ಎಲೆಕ್ಟಿಕ್‌ ಬೈಕ್‌ನ ಬ್ಯಾಟರಿ ಸ್ಪೋಟಗೊಂಡು ಸುಟ್ಟಿರುವ ಮನೆ | Kannada Prabha

ಸಾರಾಂಶ

ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದಲ್ಲಿ ಬಸಯ್ಯ ಹಿರೇಮಠ ಎಂಬುವರ ಮನೆಯಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬುಧವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ಕಲಘಟಗಿ

ತಾಲೂಕಿನ ಬಿ.ಗುಡಿಹಾಳ ಗ್ರಾಮದಲ್ಲಿ ಬಸಯ್ಯ ಹಿರೇಮಠ ಎಂಬುವರ ಮನೆಯಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬುಧವಾರ ನಡೆದಿದೆ.

ಮನೆಯಲ್ಲಿ ಎಲೆಕ್ಟ್ರಿಕ್ ಬೈಕ್ ಚಾರ್ಜಗೆ ಇಡಲಾಗಿತ್ತು. ಚಾರ್ಜಿಂಗ್ ವೇಳೆ ಬ್ಯಾಟರಿ ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಮಡಿಗೆ ಮನೆ (ಕಟ್ಟಿಗೆ ಮನೆ) ಸಂಪೂರ್ಣ ಸುಟ್ಟು ಗೋಡೆಗಳು ಬಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಲೇ ಕುಟುಂಬಸ್ಥರು ಹೊರಗೆ ಓಡಿ ಬಂದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿತು. ಸ್ಥಳಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಹಸೀಲ್ದಾರ್ ಯಲ್ಲಪ್ಪ ಗೊನೆನ್ನವರ್ ಹಾಗೂ ಕಲಘಟಗಿ ಸಿಪಿಐ ಶ್ರೀಶೈಲ್ ಕೌಜಲಗಿ ಸೇರಿದಂತೆ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಸಚಿವ ಸಂತೋಷ್ ಲಾಡ್ ಸರಕಾರದಿಂದ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ