ಸಾಗರ: ಒನ್ ವರ್ಲ್ಡ್ ಒನ್ ಫ್ಯಾಮಿಲಿ ಸಂಸ್ಥೆಯ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಎಲೆಕ್ಟ್ರಿಕ್ ಬಸ್ಸನ್ನು ಕೊಡುಗೆಯಾಗಿ ನೀಡಿದ್ದಾರೆ. ಬಸ್ ನಿಲ್ದಾಣದಿಂದ ದೇವಸ್ಥಾನಕ್ಕೆ ಬರುವ ವಯೋವೃದ್ಧರು, ಅಂಗವಿಕಲರು ಹಾಗೂ ಭಕ್ತಾದಿಗಳು ಈ ಬಸ್ಸಿನಲ್ಲಿ ಸುಲಭವಾಗಿ ಬಂದು ಹೋಗಬಹುದು. ಶನಿವಾರ ಎಲೆಕ್ಟ್ರಿಕ್ ಬಸ್ಸನ್ನು ದೇವಸ್ಥಾನದ ಧರ್ಮದರ್ಶಿ ಡಾ. ರಾಮಪ್ಪ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಾಯಿ ಸಂಸ್ಥೆಯ ಸಾಯಿ ಶಿವಪ್ರಸಾದ್, ಭರತ್ ನಾಡಿಗ್, ಸಾಯಿ ಧೃವ, ಸಾಯಿ ಪ್ರಮೋದ್, ಸಿಗಂದೂರು ಚೌಡೇಶ್ವರಿ ಪ್ರತಿಷ್ಠಾನದ ಕಾರ್ಯದರ್ಶಿ ರವಿಕುಮಾರ್ ಹಾಜರಿದ್ದರು.