ವಿದ್ಯುತ್ ಶಾರ್ಟ್ ಸರ್ಕ್ಯೂಟ್‌: ಕಾರ್ಖಾನೆಗೆ ಬೆಂಕಿ, ವಸ್ತುಗಳು ಭಸ್ಮ

KannadaprabhaNewsNetwork |  
Published : Dec 01, 2025, 01:15 AM IST
ಫೋಟೋ : 30 ಹೆಚ್‌ಎಸ್‌ಕೆ 6 ಮತ್ತು 76:ಹೊಸಕೋಟೆ ತಾಲೂಕಿನ ಚೊಕ್ಕಹಳ್ಳಿ-ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿದ್ದು ಅಗ್ನಿಶಾಮಕ ಸಿಬ್ಬಂದಿ ನಂದಿಸಿದರು. | Kannada Prabha

ಸಾರಾಂಶ

ಚೊಕ್ಕಹಳ್ಳಿ-ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿರುವ ವಾರ್ಮ್ ಗೇರ್ಸ್ ಕಾರ್ಖಾನೆಯಲ್ಲಿ ಭಾನುವಾರ ಬೆಳಗಿನ ಜಾವ 3 ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಜ್ವಾಲೆ ವ್ಯಾಪಕವಾಗಿ ಹರಡುವ ಮೂಲಕ ಕಾರ್ಖಾನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಯಂತ್ರಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಜ್ವಾಲೆ ವ್ಯಾಪಿಸಿದ ಪರಿಣಾಮವಾಗಿ ಕೈಗಾರಿಕಾ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು.

ಕನ್ನಡಪ್ರಭ ವಾರ್ತೆ ಹೊಸಕೋಟೆ

ತಾಲೂಕಿನ ಚೊಕ್ಕಹಳ್ಳಿ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಲಕ್ಷಾಂತರ ಬೆಲೆಬಾಳುವ ಯಂತ್ರೋಪಕರಣಗಳು ಹಾಗೂ ಕಾರ್ಖಾನೆಯಲ್ಲಿದ್ದ ಹಲವಾರು ವಸ್ತುಗಳು ಸುಟ್ಟು ಕರಕಲಾಗಿರುವಾಗ ಘಟನೆ ನಡೆದಿದೆ.

ಚೊಕ್ಕಹಳ್ಳಿ-ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿರುವ ವಾರ್ಮ್ ಗೇರ್ಸ್ ಕಾರ್ಖಾನೆಯಲ್ಲಿ ಭಾನುವಾರ ಬೆಳಗಿನ ಜಾವ 3 ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಜ್ವಾಲೆ ವ್ಯಾಪಕವಾಗಿ ಹರಡುವ ಮೂಲಕ ಕಾರ್ಖಾನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಯಂತ್ರಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಜ್ವಾಲೆ ವ್ಯಾಪಿಸಿದ ಪರಿಣಾಮವಾಗಿ ಕೈಗಾರಿಕಾ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು.

ಹೊಸಕೋಟೆ ಹಾಗೂ ಮಹದೇವಪುರದ ಅಗ್ನಿಶಾಮಕ ಘಟಕದಿಂದ ಆಗಮಿಸಿ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡುವಲ್ಲಿ ಹರಸಾಹಸ ಪಡುವಂತಾಗಿತ್ತು.

ಇನ್ನು ಈ ಸಂದರ್ಭದಲ್ಲಿ ಚೊಕ್ಕಹಳ್ಳಿ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಕೃಷ್ಣಪ್ಪ ಮಾತನಾಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ಸಂಭವಿಸಿದ್ದು ಬೆಂಕಿಯ ಜ್ವಾಲೆ ವ್ಯಾಪಕವಾಗಿ ಹರಡಿದ ಪರಿಣಾಮವಾಗಿ ಕೈಗಾರಿಕಾ ಪ್ರದೇಶದಲ್ಲಿ ಸಾಕಷ್ಟು ಸಮಸ್ಯೆ ಉಂಟಾಗುತ್ತಿತ್ತು. ಆದ್ದರಿಂದ ಯಾವುದೇ ರೀತಿಯ ಅನಾಹುತ ಸಂಭವಿಸದAತೆ ಬೆಂಕಿ ನಂದಿಸುವ ಕಾರ್ಯವನ್ನು ಮಾಡಲಾಗಿದೆ. ವಿಚಾರ ತಿಳಿದ ತಕ್ಷಣ ಸ್ಥಳಕ್ಕೆ ಬಂದು ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಯಿಸಿ ಬೆಂಕಿ ನಂದಿಸಲಾಗಿದೆ. ಹೊಗೆಯು ವ್ಯಾಪಕವಾಗಿ ಹರಡುತ್ತಿದ್ದ ಪರಿಣಾಮವಾಗಿ ಟಿಪ್ಪರ್ ಲಾರಿಗಳ ಮೂಲಕ ಮಣ್ಣು ಕಾರ್ಖಾನೆ ತ್ಯಾಜ್ಯದ ಮೇಲೆ ಟಿಪ್ಪರ್ ಲಾರಿಗಳ ಮೂಲಕ ಮಣ್ಣು ಸುರಿದು ವಾತಾವರಣ ಕಲುಷಿತ ಆಗುವುದನ್ನು ಸಹ ತಡೆಗಟ್ಟಲಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ
24ರಿಂದ ಎಬಿವಿಪಿ ರಾಜ್ಯಮಟ್ಟದ ಪ್ರಾಂತ ಸಮ್ಮೇಳನ