ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕ

KannadaprabhaNewsNetwork |  
Published : Aug 30, 2025, 01:00 AM IST
ಬಡವ, ಶ್ರೀಮಂತ ಎನ್ನದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕ | Kannada Prabha

ಸಾರಾಂಶ

ಬಡವ, ಶ್ರೀಮಂತ ಎನ್ನದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕತೆಯಿದ್ದು ಕರ್ನಾಟಕದಲ್ಲಿ ಅದರಲ್ಲೂ ಪಾವಗಡದಲ್ಲಿ ಸೋಲಾರ್‌ ಪಾರ್ಕ್‌ ನಿಮಿಸಿ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದ್ದು ಇದರಿಂದಾಗಿ ಸಾಕಷ್ಟು ಕುಟುಂಬಗಳಲ್ಲಿ ಹೊಸ ಬೆಳಕು ಮೂಡಿದೆ ಎಂದು ಎಂದು ಎಲೆರಾಂಪುರ ಶ್ರೀಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ಬಡವ, ಶ್ರೀಮಂತ ಎನ್ನದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕತೆಯಿದ್ದು ಕರ್ನಾಟಕದಲ್ಲಿ ಅದರಲ್ಲೂ ಪಾವಗಡದಲ್ಲಿ ಸೋಲಾರ್‌ ಪಾರ್ಕ್‌ ನಿಮಿಸಿ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದ್ದು ಇದರಿಂದಾಗಿ ಸಾಕಷ್ಟು ಕುಟುಂಬಗಳಲ್ಲಿ ಹೊಸ ಬೆಳಕು ಮೂಡಿದೆ ಎಂದು ಎಂದು ಎಲೆರಾಂಪುರ ಶ್ರೀಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು.ಪಟ್ಟಣದ ಬೆಸ್ಕಾಂ ಕಚೇರಿ ಪಕ್ಕದಲ್ಲಿನ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಗುತ್ತಿಗೆದಾರರ ನಡುವೆ ಉತ್ತಮ ಬಾಂಧವ್ಯ ಇರಬೇಕು. ಗುತ್ತಿಗೆದಾರರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಬೇಕಿದೆ ಎಂದರು.ರಾಜ್ಯ ಮತ್ತು ಜಿಲ್ಲಾ, ತಾಲೂಕು ಮಟ್ಟದಲ್ಲಿ ವಿದ್ಯುತ್ ಗುತ್ತಿಗೆದಾರರು ಸಂಘಟನೆ ಸ್ಥಾಪನೆ ಮೂಲಕ ಸಾಧಕ ಬಾಧಕಗಳಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಕೂಡ ವಿದ್ಯುತ್ ಗುತ್ತಿಗೆದಾರರ ಬೇಡಿಗಳನ್ನು ಆದಷ್ಟು ಬೇಗ ಈಡೇರಿಸಬೇಕಿದೆ. ಖಾಸಗಿ ಸ್ಥಳದಲ್ಲಿ ಕಚೇರಿ ತಾತ್ಕಾಲಿಕವಾಗಿರಲಿದ್ದು ಶಾಸಕರು ಈ ಬಗ್ಗೆ ಗಮನಹರಿಸಿ ಗುತ್ತಿಗೆದಾರರ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ, ಉದ್ಘಾಟನೆ ಮಾಡಬೇಕಿದೆ ಎಂದು ಒತ್ತಾಯ ಮಾಡಿದರು.ಕೇಂದ್ರ ಸಮಿತಿ ಕಾರ್ಯದರ್ಶಿ ಎಚ್.ವಿ ಚಂದ್ರಬಾಬು ಮಾತನಾಡಿ, ರಾಜ್ಯದ ೩೧ ಜಿಲ್ಲಾ ಸಮಿತಿ, ೨೩೬ ತಾಲೂಕು ಸಮಿತಿಗಳಿದ್ದು ಹಲವು ಸಮಿತಿ ಸ್ವಂತ ಕಟ್ಟಡವನ್ನು ಹೊಂದಿದೆ. ಸಂಘಟನೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ರಾಜ್ಯದಲ್ಲಿ ಅತ್ಯುತ್ತಮವಾಗಿ ತಂತ್ರಜ್ಞಾನ ಬಳಕೆಯಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಅಶೋಕ್‌ಕುಮಾರ್ ಮಾತನಾಡಿ, ವಿದ್ಯುತ್ ಗುತ್ತಿಗೆದಾರರ ಸಂಘದ ಸಹಕಾರದೊಂದಿಗೆ ಇಂದು ಗುತ್ತಿಗೆದಾರರ ನೂತನ ಕಚೇರಿ ಉದ್ಘಾಟನೆಯಾಗಿದೆ. ಕೇಂದ್ರ ಸಮಿತಿ ರಾಜ್ಯದಲ್ಲಿ ೩೧ ಜಿಲ್ಲೆ, ೨೩೬ ತಾಲ್ಲೂಕುಗಳಲ್ಲಿ ಸಂಘಟನೆ ಕಾರ್ಯನಿರ್ವಹಿಸುತ್ತಿದೆ. ತುಮಕೂರು ಜಿಲ್ಲೆಯಲ್ಲಿ ಕೆಲ ತಾಲ್ಲೂಕುಗಳಲ್ಲಿ ಮಾತ್ರ ಕಚೇರಿಯಿದೆ. ಮುಂದಿನ ದಿನಗಳಲ್ಲಿ ಎಲ್ಲಾ ತಾಲೂಕುಗಳಲ್ಲಿ ಕಟ್ಟಡ ಕಟ್ಟುವಂತಹ ಆಶಾ ಮನೋಭಾವನೆ ಹೊಂದಿದ್ದೇವೆ ಎಂದು ಹೇಳಿದರು.ತಾಲೂಕು ಸಮಿತಿಯ ತಾ.ಅಧ್ಯಕ್ಷ ಎಸ್.ಆರ್ ಸೋಮಶೇಖರ್ ಮಾತನಾಡಿ, ಗುತ್ತಿಗೆದಾರ ಸಂಘದಲ್ಲಿ ಸದಸ್ಯರ ಪ್ರೀತಿ ವಿಶ್ವಾಸದಿಂದ ಮೂರನೇ ಬಾರಿ ಅಧ್ಯಕ್ಷನಾಗಿ ಮುಂದುವರೆದಿದ್ದೇನೆ. ಇದೇ ರೀತಿ ತಮ್ಮೆಲ್ಲರಾ ಸಹಕಾರ ನೀಡುವಂತೆ ಕೋರಿದರು.ಈ ಸಂದರ್ಭದಲ್ಲಿ ಗೃಹ ಸಚಿವ ವಿಶೇಷ ಅಧಿಕಾರಿ ಡಾ.ಕೆ.ನಾಗಣ್ಣ, ಬೆಸ್ಕಾಂ ಎಇಇ ಪ್ರಸನ್ನಕುಮಾರ್, ತಾ.ಸಮಿತಿ ಉಪಾಧ್ಯಕ್ಷ ಮೂಡಲಗಿರಿಯಪ್ಪ, ಎ.ಆರ್ ರವಿಕುಮಾರ್, ಬಿ.ಆರ್ ಲಕ್ಷ್ಮೀಕಾಂತಬಾಬು, ಫಾರುಕ್ ಅಹಮದ್, ಪ್ರದೀಪ್‌ಕುಮಾರ್ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ