ಹುಸಣೆಪಾಳ್ಯ ಬಳಿ ಘಟನೆ, ಮೂವರು ವಾಚರ್‌ಗಳಿಗೆ ಗಾಯಕನ್ನಡಪ್ರಭ ವಾರ್ತೆ ಹನೂರು
ಬಿಆರ್ ಟಿ ಸುರಕ್ಷಿತ ಪ್ರದೇಶದ ಪಿ.ಜಿ.ಪಾಳ್ಯ ವಲಯದ ಹೊರಗುತ್ತಿಗೆ ವಾಚರ್ ಗಳಾದ ಮುನಿಯಪ್ಪ (33), ಜಡೇಸ್ವಾಮಿ(27) ಹಾಗೂ ನಾಗರಾಜು(36) ಎಂಬುವರು ಗಾಯಗೊಂಡವರು.
ತಾಲೂಕಿನ ಪಿ.ಜಿ.ಪಾಳ್ಯ ಸಮೀಪದ ಹುಸಣೆಪಾಳ್ಯಬಳಿ ರಾತ್ರಿ ಪಾಳಿಯದಲ್ಲಿ ಒಂಬತ್ತು ಗಂಟೆ ಸಮಯದಲ್ಲಿ ಗುರುವಾರ ತಡರಾತ್ರಿ ಜಮೀನುಗಳಿಗೆ ಆನೆ ನುಗ್ಗುವುದನ್ನು ತಪ್ಪಿಸಲು ಗಸ್ತಿಗೆ ತೆರಳಿದ್ದ ವೇಳೆ ಆನೆ ಅರಣ್ಯ ಇಲಾಖೆಯ ಮೂವರು ವಾಚರ್ ಗಳ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ.ಮಲೆ ಮಹದೇಶ್ವರ ವನ್ಯಜೀವಿಧಾಮದಿಂದ ಆಹಾರ ಅರಸಿ ಜಮೀನುಗಳತ್ತ ನುಗ್ಗುವ ಆನೆಗಳನ್ನು ಕಾಡಿಗೆ ಓಡಿಸಲು ಇವರು ತೆರಳಿದ್ದ ವೇಳೆ ಏಕಾಏಕಿ ಆನೆ ದಾಳಿ ನಡೆಸಿದೆ. ಮುನಿಯಪ್ಪ ಮೇಲೆ ದಾಳಿ ಮಾಡಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಜಡೆಸ್ವಾಮಿಯನ್ನು ಓಡಿಸಿಕೊಂಡು ಹೋದ ವೇಳೆ ಗುಂಡಿಯೊಳಕ್ಕೆ ಬಿದ್ದು ಕಾಲು ಮುರಿದಿದೆ. ಮಂಡಿ ಚಿಪ್ಪು ಸಹ ತೀವ್ರವಾಗಿ ಗಾಯಗೊಂಡು ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ, ನಾಗರಾಜು ಎಂಬವರಿಗೆ ಎಡಗೈ ಗಾಯವಾಗಿದೆ.ಮೂವರಿಗೂ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭಯದ ವಾತಾವರಣದಲ್ಲಿರುವ ನಿವಾಸಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮದೊಂದಿಗೆ ಕಾಡುಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಲು ಶಾಶ್ವತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಕಾಡಾನೆ ದಾಳಿಯಿಂದ ಮೂವರು ಅರಣ್ಯ ಇಲಾಖೆ ಸಿಬ್ಬಂದಿ ಗಾಯಗೊಂಡು ಚಿಕಿತ್ಸೆ ನೀಡಲು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಣಾಯಾಪದಿಂದ ಅರಣ್ಯ ಇಲಾಖೆ ಸಿಬ್ಬಂದಿ ಪಾರಾಗಿದ್ದಾರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.