94 ಸಿ ಅಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಬೇಕು: ಲಿಲ್ಲಿ ಮಾತುಕುಟ್ಟಿ ಸೂಚನೆ

KannadaprabhaNewsNetwork |  
Published : Nov 11, 2025, 02:00 AM IST
ನರಸಿಂಹರಾಜಪುರ ತಾಲೂಕಿನ ಶೆಟ್ಟಿಕೊಪ್ಪದಲ್ಲಿ ಕಡಹಿನಬೈಲು ಗ್ರಾಮ ಪಂಚಾಯಿತಿಯ 2025-26 ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಿಲ್ಲಿ ಮಾತುಕುಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.ಉಪಾಧ್ಯಕ್ಷ ಸುನೀಲ್ ಕುಮಾರ್, ನೋಡಲ್ ಅಧಿಕಾರಿ ಪುನೀತ್ ಹಾಗೂ ಸದಸ್ಯರು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು 94 ಸಿ ಅಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಹಕ್ಕು ಪತ್ರ ನೀಡಬೇಕು ಎಂದು ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ಲಿಲ್ಲಿ ಮಾತುಕುಟ್ಟಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

- ಶೆಟ್ಟಿಕೊಪ್ಪದಲ್ಲಿ ಕಡಹಿನಬೈಲು ಗ್ರಾಮ ಪಂಚಾಯಿತಿಯ ಗ್ರಾಮ ಸಭೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು 94 ಸಿ ಅಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಹಕ್ಕು ಪತ್ರ ನೀಡಬೇಕು ಎಂದು ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ಲಿಲ್ಲಿ ಮಾತುಕುಟ್ಟಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಶೆಟ್ಟಿಕೊಪ್ಪದಲ್ಲಿ ನಡೆದ ಕಡಹಿನಬೈಲು ಗ್ರಾಮ ಪಂಚಾಯಿತಿಯ ಮೊದಲನೇ ಸುತ್ತಿನ 2025-26 ನೇ ಸಾಲಿನ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಡಹಿನಬೈಲು ಗ್ರಾಮದಲ್ಲಿ ಸ.ನಂ 112 ರಲ್ಲಿ ರೈತರು ಬಗರ್ ಹುಕಂ ಸಾಗುವಳಿ ಮಾಡಿದ್ದು ಮಂಜೂರಾತಿಗೆ ಫಾರಂ ನಂ 53, 52 ರಲ್ಲಿ ಅರ್ಜಿ ಹಾಕಿದ್ದಾರೆ. ಅದರಲ್ಲಿ 11 ಎಕ್ರೆ ಜಾಗ ಮಲ್ಲಂದೂರು ಮೀಸಲು ಅರಣ್ಯಕ್ಕೆ ಸೇರಿದೆ ಎಂದು ಗೊಂದಲ ಉಂಟಾಗಿದೆ.

ಈ ಬಗ್ಗೆ ಅರಣ್ಯ, ಕಂದಾಯ ಇಲಾಖೆ ಜಂಟಿ ಸರ್ವೆ ಮಾಡಿಸಬೇಕು. ಕಂದಾಯ ಭೂಮಿಯಾಗಿದ್ದರೆ ಅರ್ಜಿ ಸಲ್ಲಿಸಿದ ಫಲಾನು ಭವಿಗಳಿಗೆ ತಕ್ಷಣ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸಮಸ್ಯೆ ಬಗೆಹಿರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಗ್ರಾಪಂ ಉಪಾಧ್ಯಕ್ಷ ಸುನೀಲ್ ಕುಮಾರ್ ಮಾತನಾಡಿ, ಕಡಹಿನಬೈಲು ಗ್ರಾಪಂನಲ್ಲಿ ಈ ಹಿಂದೆಯೇ ಮಕ್ಕಳಿಲ್ಲದೆ ಆಲಂದೂರು, ಸೌತಿಕೆರೆ ಸರ್ಕಾರಿ ಶಾಲೆ ಮುಚ್ಚಿದೆ. ಈ ಶಾಲೆಗಳನ್ನು ಮತ್ತೆ ಪುನರ್ ಆರಂಭಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗುಳದ ಮನೆ ಸರ್ಕಾರಿ ಶಾಲೆ ಸಹ ಮಕ್ಕಳಿಲ್ಲದೆ ಮುಚ್ಚುವ ಹಂತಕ್ಕೆ ಬಂದಿತ್ತು. ಅಲ್ಲಿನ ಮುಖ್ಯ ಶಿಕ್ಷಕಿ ಶ್ರಮವಹಿಸಿ ಶಾಲೆಗೆ ಮಕ್ಕಳು ಬರುವಂತೆ ಮಾಡಿದ್ದರಿಂದ ಶಾಲೆ ಮುಚ್ಚಲಿಲ್ಲ. ಇದೇ ರೀತಿ ಆಯಾ ಗ್ರಾಮದ ಗ್ರಾಮಸ್ಥರು ಆಸಕ್ತಿ ವಹಿಸಿದರೆ ಮತ್ತೆ ಶಾಲೆ ಪ್ರಾರಂಭಿಸಬಹುದು ಎಂದರು.

ಸಭೆಯಲ್ಲಿ ಗ್ರಾಪಂ ನೋಡಲ್ ಅಧಿಕಾರಿ ಪುನೀತ್, ಗ್ರಾಮ ಪಂಚಾಯಿತಿ ಸದಸ್ಯರಾದ ಎ.ಬಿ.ಮಂಜುನಾಥ್, ಶೈಲಾ ಮಹೇಶ್, ವಾಣಿನರೇಂದ್ರ, ಪೂರ್ಣಿಮಾ ಸಂತೋಷ್, ರವೀಂದ್ರ ,ಚಂದ್ರಶೇಖರ್, ಪಿಡಿಒ ವಿಂದ್ಯಾ ಇದ್ದರು. ಕಂದಾಯ ಇಲಾಖೆ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇಲಾಖೆಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮಸ್ಥರು ಗ್ರಾಮದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

PREV

Recommended Stories

ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಮೋಸ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಸ್ಪಿ ಕಾರ್ಯಕರ್ತರಿಂದ ಪ್ರತಿಭಟನೆ