-ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ । ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಸೂಚನೆ
-----ಕನ್ನಡಪ್ರಭ ವಾರ್ತೆ, ಚಿತ್ರದುರ್ಗ
ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಲಾಭ ತಲುಪಿಸಲು ಪ್ರಯತ್ನಿಸುವಂತೆ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಸಾವಿರಾರು ಕೋಟಿ ರು. ಖರ್ಚು ಮಾಡುತ್ತಿದೆ. ಈ ಕುರಿತು ಸಾರ್ವಜನರಿಗೆ ಹೆಚ್ಚಿನ ಮಾಹಿತಿ ದೊರಕುವಂತಾಗಬೇಕು ಎಂದರು.
ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳ ಮೂಲಕ ಜಿಲ್ಲೆಯ ಲಕ್ಷಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದೆ. ಈ ಯೋಜನೆಗಳ ಅಡಿ ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ಜಮೆ ಮಾಡಿದ ಹಣ, ಫಲಾನುಭವಿಗಳ ಸಂಖ್ಯೆಗಳ ಸಂಕ್ಷಿಪ್ತ ಪ್ರಗತಿ ವಿವರನ್ನು ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ನ್ಯಾಯಬೆಲೆ ಅಂಗಡಿಗಳ ಮುಂದಿನ ಫಲಕಗಳಲ್ಲಿ ಬರೆದು ಪ್ರದರ್ಶಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.ಪ್ರತಿ ತಿಂಗಳು ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಯಾಣಿಸಿದ ಮಹಿಳಾ ಫಲಾನುಭವಿಗಳು ಹಾಗೂ ಸರ್ಕಾರದಿಂದ ಪಾವತಿಸಿದ ಮೊತ್ತದ ವಿವರಗಳನ್ನು ಕ್ರೂಢಿಕರಿಸಿ ಕೆಎಸ್ಆರ್ ಟಿಸಿ ಅಧಿಕಾರಿಗಳು ದಿನಪತ್ರಿಕೆಗಳಲ್ಲಿ ಪ್ರಚುರ ಪಡಿಸಬೇಕು. ಗ್ಯಾರಂಟಿ ಯೋಜನೆಗಳ ಕುರಿತು ಬಸ್ ನಿಲ್ದಾಣಗಳಲ್ಲಿ ಆಡಿಯೋ ಹಾಗೂ ವಿಡಿಯೋ ಜಿಂಗಲ್ಸ್ ಗಳನ್ನು ಪ್ರದರ್ಶಿಸಲು ಕ್ರಮಕೈಗೊಳ್ಳಬೇಕು.
ಗೃಹಜ್ಯೋತಿ ಯೋಜನೆ ಫಲಾನುಭವಿಗಳ ವಿವರ ಹಾಗೂ ಯೋಜನೆಯಡಿ ಇದುವರೆಗೂ ಸರ್ಕಾರದಿಂದ ಭರಿಸಿರುವ ಒಟ್ಟು ಮೊತ್ತದ ವಿವರಗಳನ್ನು ಪ್ರತಿ ಬೆಸ್ಕಾಂ ಕಚೇರಿಗಳ ಸೂಚನಾ ಫಲಕಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪ್ರಕಟಿಸಬೇಕು. ಇದರೊಂದಿಗೆ ಬೆಸ್ಕಾಂ ಮಾಹಿತಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಕೂಡ ಯೋಜನೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಕಚೇರಿಗಳನ್ನು ಶೀಘ್ರ ಸ್ಥಾಪಿಸಿ, ನೋಡಲ್ ಅಧಿಕಾರಿಗಳನ್ನು ನೇಮಿಸುವುದಾಗಿ ಜಿಲ್ಲಾ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಸಭೆಯಲ್ಲಿ ತಿಳಿಸಿದರು.ಜಿಲ್ಲಾ ಮಟ್ಟದ ಅಧಿಕಾರಿಗಳೂ ಗ್ಯಾರಂಟಿ ಯೋಜನೆಗಳ ಸ್ಥಿತಿಗತಿ ಕುರಿತು ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದರು.
-----...ಬಾಕ್ಸ್....1
ಗೃಹಲಕ್ಷ್ಮೀ ಯೋಜನೆಗೆ783 ಕೋಟಿ ಜಮೆಚಿತ್ರದುರ್ಗ ಜಿಲ್ಲೆಯಲ್ಲಿ 4,05,282 ಪಡಿತರ ಚೀಟಿಗಳು ಇದ್ದು, ಇದರಲ್ಲಿ 3,83,537 ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯಡಿ ನೊಂದಣಿಯಾಗಿರುತ್ತಾರೆ. ಇದುವರೆಗೂ ಜಿಲ್ಲೆಯ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ರೂ.783,27,70,000 ಜಮೆ ಮಾಡಲಾಗಿದೆ.
ಇ-ಕೆವೈಸಿ ಹಾಗೂ ಎನ್ ಪಿಸಿಐ ಮ್ಯಾಪಿಂಗ್ ವಿಫಲತೆ ಕಾರಣ 2,552 ಫಲಾನುಭವಿಗಳು ಹಾಗೂ 426 ಫಲಾನುಭವಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡ ಕಾರಣ ಇವರ ಖಾತೆಗಳಿಗೆ ಹಣ ಜಮೆಯಾಗಿರುವುದಿಲ್ಲ.---
...ಬಾಕ್ಸ್....2ಯುವನಿಧಿ ಯೋಜನೆಯಡಿ 3.85 ಕೋಟಿ
ಯುವನಿಧಿ ಯೋಜನೆ ಜಾರಿಯಾದ 2024ರ ಜನವರಿಯಿಂದ ಆಗಸ್ಟ್ ತಿಂಗಳವರೆಗೆ ಜಿಲ್ಲೆಯ 3977 ಫಲಾನುಭವಿಗಳ ಖಾತೆಗೆ ಒಟ್ಟು ರು. 3,85,35000 ನಿರುದ್ಯೋಗಿ ಭತ್ಯೆ ಪಾವತಿಸಲಾಗಿದೆ ಎಂದು ಉದ್ಯೋಗ ವಿನಿಮಯ ಕಚೇರಿಯ ರವಿಕುಮಾರ್ ಸಭೆಗೆ ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ಪದವಿ ಪೂರ್ಣಗೊಳಿಸಿದ 1817 ಪುರುಷರು, 2110 ಮಹಿಳೆಯರು ಸೇರಿದಂತೆ ಒಟ್ಟು 3927 ಫಲಾನುಭವಿಗಳು ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿದ 23 ಪುರುಷರು, 27 ಮಹಿಳೆಯರು ಸೇರಿದಂತೆ 50 ಫಲಾನುಭವಿಗಳು ಸೇರಿದಂತೆ ಒಟ್ಟು 3977 ಫಲಾನುಭವಿಗಳು ಇದ್ದಾರೆ. ಯುವನಿಧಿ ಯೋಜನೆಯ ಜಿಲ್ಲೆಯ ಫಲಾನುಭವಿಗಳು ಹೆಚ್ಚಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಧಾರವಾಡ, ಬೆಂಗಳೂರು, ಮೈಸೂರು, ಮಂಗಳೂರು ಜಿಲ್ಲೆಗಳಿಗೆ ತರಬೇತಿ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.----
...ಬಾಕ್ಸ್....3ಗೃಹಜ್ಯೋತಿಗೆ ಪ್ರತಿ ತಿಂಗಳು 13 ಕೋಟಿ
ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿ ತಿಂಗಳು 13 ಕೋಟಿ ಹೊಂದಾಣಿಕೆ ಮೊತ್ತ ಪಾವತಿ ಮಾಡಲಾಗುತ್ತಿದೆ. ಇಲ್ಲಿಯವರೆಗೂ 175.82 ಕೋಟಿ ಗೃಹಜ್ಯೋತಿ ಯೋಜನೆಯಡಿ ವೆಚ್ಚ ಭರಿಸಲಾಗಿದೆ ಎಂದು ಬೆಸ್ಕಾಂ ಇಂಜಿನಿಯರ್ ನಾಗರಾಜ್ ತಿಳಿಸಿದರು.ಜಿಲ್ಲೆಯಲ್ಲಿ ಒಟ್ಟು 4,16,215 ವಿದ್ಯುತ್ ಬಳಕೆದಾರರು ಇದ್ದು, ಇದರಲ್ಲಿ 3,73,754 ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳಾಗಿದ್ದಾರೆ ಎಂದು ತಿಳಿಸಿದರು.ವಿದ್ಯುತ್ ಬಳಕೆಗೆ ಸಂಬಂಧಪಟ್ಟಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಅಧ್ಯಕ್ಷ ಶಿವಣ್ಣ ಸೂಚನೆ ನೀಡಿದರು.----
...ಬಾಕ್ಸ್....42.93 ಕೋಟಿ ನಾರಿಯರು ಉಚಿತ ಪ್ರಯಾಣ
ಶಕ್ತಿ ಯೋಜನೆಯಡಿ 2024ರ ಸೆಪ್ಟೆಂಬರ್ ಅಂತ್ಯಕ್ಕೆ ಜಿಲ್ಲೆಯಲ್ಲಿ 2,93,93,157 ನಾರಿಯರು ಉಚಿತ ಪ್ರಯಾಣ ಬೆಳೆಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗಕ್ಕೆ ಮಹಿಳೆಯರಿಗೆ ನೀಡಿರುವ ಶೂನ್ಯ ದರದ ಟಿಕೆಟ್ ಮೂಲಕ 114.83 ಕೋಟಿ ರು. ಆದಾಯ ಲಭಿಸಿದೆ ಎಂದು ಕೆಎಸ್‍ಆರ್ ಟಿಸಿಯ ಸಂಚಾರ ನಿಯಂತ್ರಕ ಡಿ.ಟಿ.ಸುರೇಶ್ ಹೇಳಿದರು.----
ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ 3,65,783 ಫಲಾನುಭವಿಗಳಿಗೆ ಹಣ ಪಾವತಿಯಾಗಿದೆ. ಪ್ರತಿ ಮಾಹೆ ಜಿಲ್ಲೆಯಲ್ಲಿ ಸರಾಸರಿ ರು.20 ಕೋಟಿಗೂ ಅಧಿಕ ಮೊತ್ತವನ್ನು ಪಾವತಿ ಮಾಡಲಾಗುತ್ತಿದ್ದು, ಇದುವರೆಗೂ 248.90 ಕೋಟಿ ರು. ಪಾವತಿ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಹೇಳಿದರು.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ನಾಗೇಶ್ ರೆಡ್ಡಿ, ನಿರಂಜನ್ ಇದ್ದರು.
----------------ಪೋಟೋ:
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಮಾತನಾಡಿದರು.--------
ಪೋಟೋ ಫೈಲ್ ನೇಮ್- 8 ಸಿಟಿಡಿ5