ಕನ್ನಡಪ್ರಭ ವಾರ್ತೆ ಯಾದಗಿರಿ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಲಿಂಗ ತಾರತಮ್ಯ, ಲಿಂಗ ಸಮಾನತೆ, ಹೆಣ್ಣು ಮಕ್ಕಳಿಗೆ ಶಿಕ್ಷಣದ ಮಹತ್ವ, ಬಾಲ್ಯ ವಿವಾಹ ಹಾಗೂ ಭ್ರೂಣ ಹತ್ಯೆ ನಿಷೇಧದ ಕುರಿತು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿಯರು, ಶಾಲಾ ಶಿಕ್ಷಕರು ಹಾಗೂ ಆರೋಗ್ಯ ಇಲಾಖೆಯ ಆರೋಗ್ಯ ಸಹಾಯಕಿಯರಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮದದಲ್ಲಿ ಮಗಳನ್ನು ಉಳಿಸಿ, ಮಗಳನ್ನು ಓದಿಸಿ ಭಿತ್ತಿಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಇಂದಿನ ಆಧುನಿಕ ಯುಗದಲ್ಲಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಗಂಡಿಗೆ ಸಮನಾಗಿ ದುಡಿಯುತ್ತಿದ್ದಾಳೆ. ಮಹಿಳೆ ನಾಲ್ಕು ಕೋಣೆಗಳ ಮಧ್ಯದಲ್ಲಿ ಕೂಡವ ಕಾಲ ಇದಲ್ಲ. ಅವಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರಣ್ಣಗೌಡ ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಪ್ರತಿಯೊಂದು ಹಳ್ಳಿಯಲ್ಲಿ ಹೆಣ್ಣು ಮಕ್ಕಳ ಮಹತ್ವದ ಕುರಿತು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗುರುನಾಥ, ಶಹಾಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಶೀಬಾ ಜಲಿಯನ್, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಜಿಲ್ಲಾ ಸಂಯೋಜಕಿ ಯಲ್ಲಪ್ಪ ಕುಂಚಾವರ, ಜೆಂಡರ್ ಸ್ಪೆಷಲಿಸ್ಟ್ ಬಸಲಿಂಗಮ್ಮ ಸೇರಿ ಇತರರಿದ್ದರು.