ಬೀದಿ ನಾಯಿ, ಹಂದಿಗಳ ಕಾಟ ನಿವಾರಿಸಿ: ಟಿ.ಎಂ.ಭೋಜರಾಜ್

KannadaprabhaNewsNetwork |  
Published : Aug 24, 2025, 02:00 AM IST
ತರೀಕೆರೆ ಪುರಸಭೆ ಸರ್ವ ಸದಸ್ಯರ ಸಾಮಾನ್ಯ ಸಭೆ | Kannada Prabha

ಸಾರಾಂಶ

ತರೀಕೆರೆ, ಪಟ್ಟಣದಲ್ಲಿ ಬೀದಿ ನಾಯಿ ಮತ್ತು ಹಂದಿಗಳ ಕಾಟ ವಿಪರೀತವಾಗಿದೆ. ಈ ಬಗ್ಗೆ ನಾಗರಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪುರಸಭೆ ಆರ್ಥಿಕ ಪರಿಸ್ಥಿತಿ ಬೇಜಾರು ತರಿಸುತ್ತಿದೆ. ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸದಸ್ಯ ಟಿ.ಎಂ.ಭೋಜರಾಜ್ ಒತ್ತಾಯಿಸಿದರು.

ತರೀಕೆರೆ ಪುರಸಭೆ ಸರ್ವ ಸದಸ್ಯರ ಸಾಮಾನ್ಯ ಸಭೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಪಟ್ಟಣದಲ್ಲಿ ಬೀದಿ ನಾಯಿ ಮತ್ತು ಹಂದಿಗಳ ಕಾಟ ವಿಪರೀತವಾಗಿದೆ. ಈ ಬಗ್ಗೆ ನಾಗರಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪುರಸಭೆ ಆರ್ಥಿಕ ಪರಿಸ್ಥಿತಿ ಬೇಜಾರು ತರಿಸುತ್ತಿದೆ. ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸದಸ್ಯ ಟಿ.ಎಂ.ಭೋಜರಾಜ್ ಒತ್ತಾಯಿಸಿದರು.

ಪುರಸಭಾ ಸಭಾಂಗಣದಲ್ಲಿ ಅಧ್ಯಕ್ಷ ವಸಂತಕುಮಾರ್ ನೇತೃತ್ವದಲ್ಲಿ ಪುರಸಭೆ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಬಿ.ಎಚ್.ರಸ್ತೆ ಅಭಿವೃದ್ಧಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಕಾಮಗಾರಿ ಶೀಘ್ರ ಗತಿಯಲ್ಲಿ ಆಗಬೇಕು. ರಸ್ತೆಯ ಗುಂಡಿಗಳನ್ನು ಮುಚ್ಚಬೇಕು, ಇದಕ್ಕೆ ಪಿಡಬ್ಯೂಡಿ ಇಲಾಖೆ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು. ಇಂದಿರಾ ಕ್ಯಾಂಟೀನ್ ನಲ್ಲಿ ಆಹಾರದ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಪುರಸಭೆ ಮುಖ್ಯಾಧಿಕಾರಿ ವಿಜಯಕುಮಾರ್ ಮಾತನಾಡಿ ಪುರಸಭೆ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದು ತಿಳಿಸಿದರು.ಸದಸ್ಯ ಟಿ.ದಾದಾಪೀರ್ ಮಾತನಾಡಿ ನೀರು ಸರಬರಾಜು ಕಾಮಗಾರಿ ಕುರಿತು ಲೆಕ್ಕಪತ್ರಗಳನ್ನು ತಂದಿದ್ದೀರಾ, ಲಕ್ಷಾಂತರ ರು. ಗಳನ್ನು ಬಿಲ್ಲು ಮಾಡಿದ್ದೀರಿ ಕಾಮಗಾರಿಗೂ ಬಿಲ್ಲಿಗೂ ವ್ಯತ್ಯಾಸ ಕಂಡುಬರುತ್ತಿದೆ. ಈ ಬಗ್ಗೆ ಅನುಮಾನ ಗಳಿದ್ದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಪೌರಕಾರ್ಮಿಕರ ಆರೋಗ್ಯ ತಪಾಸಣೆ ಮಾಡುವಂತೆ, ನೀರು ಸರಬರಾಜು ಸಿಬ್ಬಂದಿಗೂ ಆರೋಗ್ಯ ತಪಾಸಣೆ ನಡೆಸಲು ಪುರಸಭೆ ನಿಧಿಯಲ್ಲಿ ಹಣ ಕಾಯ್ದಿರಿಸಬೇಕು ಎಂದು ಆಗ್ರಹಿಸಿದರು.ಸದಸ್ಯಟಿ.ಜಿ.ಲೋಕೇಶ್ ಮಾತನಾಡಿ ತರೀಕೆರೆ ಪುರಸಭೆ ಸ್ವಚ್ಛತೆಯಲ್ಲಿ ರಾಜ್ಯದಲ್ಲಿ 4ನೇ ಸ್ಥಾನದಲ್ಲಿದೆ. ಪಟ್ಟಣದಲ್ಲಿ ನಾಯಿ ಗಳನ್ನು ಹಿಡಿದು ಊರಿನಿಂದ ಹೊರಗಡೆ ನಾಯಿಗಳಿಗಾಗಿ ಒಂದು ಕೇಂದ್ರ ಮಾಡಿ, ಆರೈಕೆ ಮಾಡಬಹುದು. ನಾಯಿಗಳಿಂದ ತೊಂದರೆಯಾಗುತ್ತಿದೆ. ಅವುಗಳನ್ನು ನಿಯಂತ್ರಿಸಬೇಕು. ಪಟ್ಟಣದ ಬಿ.ಎಚ್.ರಸ್ತೆಯಲ್ಲಿ ವಿದ್ಯುತ್ ಕಂಬಗಳು ಶಿಫ್ಟ್ ಆಗಿ ವಿದ್ಯುತ್ ದೀಪಗಳು ಇಲ್ಲದೆ ತೊಂದರೆಯಾಗಿದೆ. ಕೂಡಲೇ ವಿದ್ಯುತ್ ಲೈಟುಗಳನ್ನು ಹಾಕಿಸಿಕೊಡಬೇಕು, ಬಿ.ಎಚ್. ರಸ್ತೆಯಲ್ಲಿ ತುಂಬಾ ಧೂಳು ಇದೆ. ರಸ್ತೆಗೆ ನೀರು ಹಾಕಿಸಿಕೊಡಬೇಕು ಎಂದು ಹೇಳಿದರು.ಸದಸ್ಯರಾದ ಪರಮೇಶ್, ಕುಮಾರಪ್ಪ, ಬಸವರಾಜು, ಟಿ.ಜಿ.ಶಶಾಂಕ, ರಂಗನಾಥ್, ನಾಮಿನಿ ಸದಸ್ಯರಾದ ಟಿ.ಜಿ.ಮಂಜುನಾಥ್, ಮಂಜುನಾಥ್, ಪುರಸಭೆ ಸದಸ್ಯರು ವಿವಿಧ ಚರ್ಚೆಗಳಲ್ಲಿ ಭಾಗವಹಿಸಿದ್ದರು. ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಪುರಸಭೆ ಸ್ಥಾಯಿ ಸಮಿತಿ ಅದ್ಯಕ್ಷ ಅನಿಲ್ ಕುಮಾರ್, ಪುರಸಭೆ ಮುಖ್ಯಾಥಿಕಾರಿ ವಿಜಯಕುಮಾರ್, ಕಂದಾಯ ಅಧಿಕಾರಿ ಮಂಜುನಾಥ್, ಸಭೆಯಲ್ಲಿ ಭಾಗವಹಿಸಿದ್ದರು.22ಕೆಟಿಆರ್.ಕೆ.12ಃ

ತರೀಕೆರೆ ಪುರಸಭೆಯಲ್ಲಿ ಅಧ್ಯಕ್ಷ ವಸಂತಕುಮಾರ್ ನೇತೃತ್ವದಲ್ಲಿ ನಡೆದ ಪುರಸಭೆ ಸರ್ವ ಸದಸ್ಯರ ಸಾಮಾನ್ಯ ಸಭೆ ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಪುರಸಭೆ ಸ್ಥಾಯಿ ಸಮಿತಿ ಅದ್ಯಕ್ಷ ಅನಿಲ್ ಕುಮಾರ್, ಪುರಸಭೆ ಮುಖ್ಯಾಥಿಕಾರಿ ವಿಜಯಕುಮಾರ್‌ ಇದ್ದರು.

PREV

Recommended Stories

ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!