ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ನೇತೃತ್ವದಲ್ಲಿ ಕೊಟ್ಟಿಗೆ ಮಾಚೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಪೌಷ್ಠಿಕ ಮಾಸಾಚರಣೆ-2026 ಕಾರ್ಯಕ್ರಮ ನಡೆಯಿತು.
ಶಾಲಾ ಮಕ್ಕಳು ತಮ್ಮ ದಿನನಿತ್ಯದ ಆಹಾರ ಪದ್ಧತಿಯಲ್ಲಿ ಪೌಷ್ಟಿಕಾಂಶಕ್ಕೆ ಆದ್ಯತೆ ನೀಡುವಂತೆ ಪ್ರೋತ್ಸಾಹಿಸಿದ ಅವರು, ಅಪೌಷ್ಠಿಕತೆ ಮತ್ತು ಕಳಪೆ ಆಹಾರ ಪದ್ಧತಿಗಳ ಅಪಾಯಗಳನ್ನು ವಿವರಿಸಿದರು.
ಕೃಷಿ ವಿಸ್ತರಣಾ ವಿಜ್ಞಾನಿ ಡಾ. ಗೋಪಾಲ್, ಕೃಷಿ ವಿಜ್ಞಾನ ಕೇಂದ್ರದ ಧ್ಯೇಯೋದ್ದೇಶಗಳ ಬಗ್ಗೆ ವಿವರಿಸಿ, ಮಕ್ಕಳಲ್ಲಿ ವೈಯುಕ್ತಿಕ ಸ್ವಚ್ಛತೆಯ ಮಹತ್ವ, ಮಾನಸಿಕ ಆರೋಗ್ಯ ಹಾಗೂ ಶಾಲಾ ಆವರಣವನ್ನು ಶುಚಿತ್ವವನ್ನು ಕಾಪಾಡಿ ಕೊಳ್ಳುವುದರ ಬಗ್ಗೆ ತಿಳಿಸಿದರು.ಕೇಂದ್ರದ ಪ್ರಾಧ್ಯಾಪಕ ಡಾ. ಡಿ. ಬಾಲಾಜಿ ನಾಯ್ಕ ಮಾತನಾಡಿ, ಆಹಾರ ಉತ್ಪಾದನೆಯಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸಲು ಮಣ್ಣಿನ ಫಲವತ್ತತೆ ಮತ್ತು ದೊರೆಯುವ ಪೋಷಕಾಂಶಗಳ ಮೇಲೆ ಅವಲಂಭಿತವಾಗಿರುವ ಕಾರಣ ಮಣ್ಣಿಗೆ ಹೆಚ್ಚಿನ ಸಾವಯವ ಗೊಬ್ಬರಗಳು, ಜೈವಿಕ ಗೊಬ್ಬರಗಳು ಮತ್ತು ಹಸಿರೆಲೆ ಗೊಬ್ಬರಗಳು ಹಾಗೂ ಸಮಗ್ರ ಪೋಷಕಾಂಶ ನಿರ್ವಹಣೆಯೊಂದಿಗೆ ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಂಡರೆ ಸ್ವಾಭಾವಿಕವಾಗಿ ಉತ್ಪಾದನೆಯಾದ ಆಹಾರವು ಪೋಷಕಾಂಶ ಭರಿತವಾಗಿರುತ್ತದೆಯೆಂದು ತಿಳಿಸಿದರು.
ಫೋಟೋ-