ಬೆಂಗಳೂರಿನ ಯಶವಂತಪುರ ಹಾಗೂ ಬ್ಯಾಟರಾಯನಪುರ ಕ್ಷೇತ್ರಗಳ ವಿವಿಧ ಗ್ರಾಮ, ಬಡಾವಣೆಗಳಲ್ಲಿನ ದುರ್ವಾಸನೆ ನಿವಾರಣೆಗೆ 250 ಕೋಟಿ ರು. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅನುಷ್ಠಾನಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರಿನ ಯಶವಂತಪುರ ಹಾಗೂ ಬ್ಯಾಟರಾಯನಪುರ ಕ್ಷೇತ್ರಗಳ ವಿವಿಧ ಗ್ರಾಮ, ಬಡಾವಣೆಗಳಲ್ಲಿನ ದುರ್ವಾಸನೆ ನಿವಾರಣೆಗೆ 250 ಕೋಟಿ ರು. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅನುಷ್ಠಾನಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಯಶವಂತಪುರ ಕ್ಷೇತ್ರದ ಹೆಮ್ಮಿಗೆಪುರ ಮತ್ತು ವಿವಿಧ ಗ್ರಾಮ, ಬಡಾವಣೆಗಳಲ್ಲಿ ದುರ್ವಾಸನೆ ನಿವಾರಣೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯನ್ನು 90 ಕೋಟಿ ರು. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.
ಪ್ರತ್ಯೇಕ ಯೋಜನೆಯಲ್ಲಿ ಕಗ್ಗಲೀಪುರ, ಕುಂಬಳಗೋಡು ವ್ಯಾಪ್ತಿಯ ಗ್ರಾಮ, ಬಡಾವಣೆಗಳನ್ನು 70 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ದುರ್ವಾಸನೆ ನಿವಾರಿಸಲು ಕ್ರಮ ಕೈಗೊಳ್ಳಬೇಕು. ಜತೆಗೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ, ಬಡಾವಣೆಗಳಲ್ಲಿ 90 ಕೋಟಿ ರು. ವೆಚ್ಚದಲ್ಲಿ ದುರ್ವಾಸನೆ ನಿವಾರಣೆ ಹಾಗೂ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ತೀರ್ಮಾನಿಸಲಾಗಿದೆ.
375 ಕೋಟಿ ರು. ವೆಚ್ಚದಲ್ಲಿ ಆಸ್ಪತ್ರೆ ಅಭಿವೃದ್ಧಿ:
ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಬೆಂಗಳೂರಿನ ಹೆರಿಗೆ ಮತ್ತು ರೆಫರಲ್ ಆಸ್ಪತ್ರೆ ನಿರ್ಮಾಣ, ಆಸ್ಪತ್ರೆಗಳ ಅಭಿವೃದ್ಧಿಗೆ 375 ಕೋಟಿ ರು. ವೆಚ್ಚ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆಸ್ಪತ್ರೆಗಳ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಳು ಹಾಗೂ ವೈದ್ಯಕೀಯ ಉಪಕರಣಗಳ ಖರೀದಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ನಿರ್ಧಾರ ಮಾಡಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.