ನಗರದ ವಿವಿಧೆಡೆ ಬಾಂಬ್‌ ಇರಿಸಿರುವುದು ಇ–ಮೇಲ್‌ ಬೆದರಿಕೆ; ಪರಿಶೀಲನೆ ಬಳಿಕ ಹುಸಿ ಬೆದರಿಕೆ ಎಂಬುದು ಸಾಬೀತು

KannadaprabhaNewsNetwork |  
Published : May 03, 2025, 12:16 AM IST
11 | Kannada Prabha

ಸಾರಾಂಶ

ನಗರದ ವಿವಿಧೆಡೆ ಬಾಂಬ್ ಇರಿಸಿದ್ದು, 24 ಗಂಟೆಗಳಲ್ಲಿ ಸ್ಫೋಟಿಸಲಿದೆ ಎಂದು ನಗರ ಪೊಲೀಸ್ ಆಯುಕ್ತರ ಅಧಿಕೃತ ಇಮೇಲ್ ಐಡಿಗೆ ಬೆದರಿಕೆ ಸಂದೇಶವು ಮಧ್ಯರಾತ್ರಿ ಬಂದಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ನಗರಾದ್ಯಂತ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರು

ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಸ್ಥಳಗಳಲ್ಲಿ ಬಾಂಬ್ ಇರಿಸಿರುವುದು ಅನಾಮಧೇಯ ವ್ಯಕ್ತಿಯು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ.ಮುನ್ನೆಚ್ಚರಿಕೆ ಕ್ರಮವಾಗಿ ಅನಾಮಧೇಯ ವ್ಯಕ್ತಿ ಹೇಳಿದ್ದ ಸ್ಥಳಗಳನ್ನು ನಗರ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳದ ಸಿಬ್ಬಂದಿ ಸಂಪೂರ್ಣವಾಗಿ ಪರಿಶೀಲಿಸಿದರು. ಹಲವು ಗಂಟೆಗಳ ಪರಿಶೀಲನೆ ಬಳಿಕ ಹುಸಿ ಬೆದರಿಕೆ ಎಂಬುದು ಸಾಬೀತು ಆಯಿತು. ಆದರೂ, ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ನಗರಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ.ಈ ನಡುವೆ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಇ-ಮೇಲ್ ಕಳುಹಿಸಿದ್ದ ಅನಾಮಧೇಯ ವ್ಯಕ್ತಿಯ ವಿರುದ್ಧ ನಜರ್‌ ಬಾದ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಬರ್‌ ಠಾಣೆಯ ಸಹಾಯದಲ್ಲಿ ಇ ಮೇಲ್‌ ಕಳುಹಿಸಿದವರು ಯಾರೆಂಬುದನ್ನು ಪತ್ತೆ ಹಚ್ಚಲು ತನಿಖೆ ಮುಂದುವರೆಸಿದ್ದಾರೆ.ನಗರದ ವಿವಿಧೆಡೆ ಬಾಂಬ್ ಇರಿಸಿದ್ದು, 24 ಗಂಟೆಗಳಲ್ಲಿ ಸ್ಫೋಟಿಸಲಿದೆ ಎಂದು ನಗರ ಪೊಲೀಸ್ ಆಯುಕ್ತರ ಅಧಿಕೃತ ಇಮೇಲ್ ಐಡಿಗೆ ಬೆದರಿಕೆ ಸಂದೇಶವು ಮಧ್ಯರಾತ್ರಿ ಬಂದಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ನಗರಾದ್ಯಂತ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.ವಿವಿಧ ಸ್ಥಳಗಳಲ್ಲಿ ಬಾಂಬ್‌ ಇರಿಸಿದ್ದೇವೆ ಎಂಬ ಇ ಮೇಲ್‌ ಬಂದಿತ್ತು. ತಕ್ಷಣವೇ ಬಾಂಬ್‌ ನಿಷ್ಕ್ರೀಯ ದಳ, ಶ್ವಾನ ದಳದ ಮೂಲಕ ನಗರದ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದೆ. ಆಯಾಯ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಇನ್ಸ್ ಪೆಕ್ಟರ್‌ ಗಳ ನೇತೃತ್ವದಲ್ಲಿ ಪರಿಶೀಲಿಸಲಾಗಿದ್ದು, ಎಲ್ಲೂ ಬಾಂಬ್‌ ಇರಿಸಿರುವುದು ಕಂಡು ಬಂದಿಲ್ಲ. ಹೊಟೇಲ್, ಬಸ್‌ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ