ಕನ್ನಡಪ್ರಭ ವಾರ್ತೆ ಉಡುಪಿ
ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಡಾ. ಬಿ.ಆರ್. ಅಂಬೇಡ್ಕರ್ 134 ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಮಾತನಾಡಿ, ಮಹಿಳೆಯರು ಇತರರಷ್ಟೇ ಸಮಾನ ಹಕ್ಕುಗಳನ್ನು ಪಡೆಯಬೇಕೆಂಬ ಉದ್ದೇಶದಿಂದ ಹಿಂದೂ ಕೋಡ್ ಬಿಲ್, ಹೆಣ್ಣು ಮಕ್ಕಳಿಗೆ ಆಸ್ತಿಯ ಹಕ್ಕು, ವಿಚ್ಛೇದನದ ಹಕ್ಕು ಸೇರಿದಂತೆ ಮತ್ತಿತರ ಕ್ರಾಂತಿಕಾರಕ ಹಕ್ಕುಗಳನ್ನು ರೂಪಿಸಿದರು ಎಂದರು.ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಎಚ್. ಉಪನ್ಯಾಸ ನೀಡಿದರು. ಜಿ.ಪಂ. ಸಿಇಒ ಪ್ರತೀಕ್ ಬಾಯಲ್ ಮಾತನಾಡಿದರು.
ಡಾ.ಬಾಬು ಜಗಜೀವನ್ ರಾಮ್ 2025 ಸಾಲಿನ ರಾಜ್ಯ ಪ್ರಶಸ್ತಿ ಪುರಸ್ಕೃತ ಚಿಂತಕ ಜಯನ್ ಮಲ್ಪೆ ಮತ್ತು ಉಡುಪಿ ನಗರಸಭೆಯ ಹಿರಿಯ ಪೌರ ಕಾರ್ಮಿಕ ಸುರೇಶ್ ಹಾಗೂ ದಂಡ್ಯಮ್ಮ ಅವರನ್ನು ಗೌರವಿಸಲಾಯಿತು. ಅಂತರ್ಜಾತಿ ವಿವಾಹದ ಜೋಡಿಗಳಿಗೆ ಗೌರವ ಧನ ಚೆಕ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಎಸ್ಪಿ ಡಾ. ಅರುಣ್ ಕೆ., ಎಡಿಸಿ ಅಬೀದ್ ಗದ್ಯಾಳ, ಎಎಸ್ಪಿಗಳಾದ ಸಿದ್ದಲಿಂಗಪ್ಪ ಹಾಗೂ ಪಿ. ಎ. ಹೆಗಡೆ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರು ಇದ್ದರು.
ರಜತಾದ್ರಿಯ ಆವರಣದಲ್ಲಿರುವ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.