ಸೇವಾ ಮನೋಭಾವನೆಗಳನ್ನು ಮೈಗೂಡಿಸಿಕೊಳ್ಳಿ: ಪ್ರಾಚಾರ್ಯ ಅಮೃತೇಶ್ವರ್

KannadaprabhaNewsNetwork |  
Published : Jun 27, 2024, 01:13 AM IST
ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಚನ್ನಗಿರಿಯ ಎಸ್.ಎಸ್.ಎಸ್.ಸರ್ಕಾರಿ ಪ್ರಥಮದರ್ಜೆ ಕಾಲೇಜ್ ಸ್ನಾತಕೋತ್ತರ ಕೇಂದ್ರ, ಗ್ರಾಮ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಸಂಜೆ ರಾಷ್ಟ್ರೀಯ ಸೇವಾ ಯೋಜನೆಯ ಜುಲೈ 1ನೇ ತಾರೀಖಿನ ವರೆಗೆ ಒಂದು ವಾರಗಳ ಕಾಲ ನಡೆಯಲಿರುವ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ಎಸ್.ಎಸ್.ಎಸ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಬಿ.ಜಿ.ಅಮೃತೇಶ್ವರ್ | Kannada Prabha

ಸಾರಾಂಶ

ಸೇವಾ ಮನೋಭಾವನೆಗಳನ್ನು ಮೈಗೂಡಿಸಿಕೊಂಡು, ಗ್ರಾಮಾಂತರ ಪ್ರದೇಶದ ಜನರ ಜೀವನ ಶೈಲಿಗಳನ್ನು ತಿಳಿದು, ಹಳ್ಳಿ ಜನರ ಜೊತೆ ಸಾಮರಸ್ಯದಿಂದ ಬೆರೆಯಲು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತ್ರ ಸಾಧ್ಯ ಎಂದು ಎಸ್.ಎಸ್.ಎಸ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಬಿ.ಜಿ. ಅಮೃತೇಶ್ವರ್ ಹೇಳಿದರು.

- ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ - - - ಕನ್ನಡಪ್ರಭವಾರ್ತೆ ಚನ್ನಗಿರಿ

ಸೇವಾ ಮನೋಭಾವನೆಗಳನ್ನು ಮೈಗೂಡಿಸಿಕೊಂಡು, ಗ್ರಾಮಾಂತರ ಪ್ರದೇಶದ ಜನರ ಜೀವನ ಶೈಲಿಗಳನ್ನು ತಿಳಿದು, ಹಳ್ಳಿ ಜನರ ಜೊತೆ ಸಾಮರಸ್ಯದಿಂದ ಬೆರೆಯಲು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತ್ರ ಸಾಧ್ಯ ಎಂದು ಎಸ್.ಎಸ್.ಎಸ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಬಿ.ಜಿ. ಅಮೃತೇಶ್ವರ್ ಹೇಳಿದರು.ಅವರು ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಚನ್ನಗಿರಿಯ ಎಸ್.ಎಸ್.ಎಸ್.ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಒಂದು ವಾರಗಳ ಕಾಲ ನಡೆಯಲಿರುವ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.ಇಂತಹ ಶಿಬಿರಗಳಲ್ಲಿ ಭಾಗವಹಿಸುವಂತಹ ವಿದ್ಯಾರ್ಥಿಗಳು ವಿಶಾಲ ಮನೋಭಾವನೆಗಳನ್ನು ಬೆಳೆಸಿಕೊಳ್ಳುತ್ತಾರೆ. ಆಗ ಮಾತ್ರ ಎಲ್ಲರೂ ಜಾತಿ, ಮತ, ಧರ್ಮಗಳನ್ನು ಮೀರಿ ನಾವೆಲ್ಲರೂ ಭಾರತೀಯರು ಎಂಬ ಭಾವೈಕ್ಯತೆ ಮೂಡಲು ಸಾಧ್ಯ ಎಂದರು. ಶಿಬಿರದ ಕಾರ್ಯಕ್ರಮಾಧಿಕಾರಿ ಸತೀಶ್ ಕುಮಾರ್ ಮಾತನಾಡಿ, ಒಂದು ವಾರಗಳ ಕಾಲ ನಡೆಯಲಿರುವ ಶಿಬಿರದಲ್ಲಿ ರಾಷ್ಟ್ರೀಯ ಭಾವೈಕ್ಯತೆಗಳನ್ನು ಮೂಡಿಸುವಂತಹ ಉಪನ್ಯಾಸಗಳು, ರಕ್ತ ಪರೀಕ್ಷೆ, ಕಣ್ಣಿನಪರೀಕ್ಷೆ, ನೇತ್ರದಾನ ಮಾಡುವ ಬಗ್ಗೆ ಆರೋಗ್ಯದ ಅರಿವು, ಪರಿಸರ ಸಂರಕ್ಷಣೆಯ ಮಾಹಿತಿ ಇನ್ನಿತರ ವಿಷಯಗಳನ್ನೊಳಗೊಂಡಂತೆ ಪ್ರತಿದಿನ ಕಾರ್ಯಕ್ರಮಗಳು ನಡೆಯುತ್ತವೆ ಎಂದು ತಿಳಿಸಿದರು.

ಶಿಬಿರದಲ್ಲಿ ದಾವಣಗೆರೆ ವಿ.ವಿಯ ಸಂಯೋಜನಾಧಿಕಾರಿ ಡಾ.ಅಶೋಕ್ ಕುಮಾರ್, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಎರ್ರಿಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ, ನಿವೃತ್ತ ವಲಯ ಅರಣ್ಯಾಧಿಕಾರಿ ವಿರೇಶ್ ನಾಯ್ಕ್, ಗ್ರಾ.ಪಂ ಸದಸ್ಯ ಕುಮಾರ್, ಡಾ.ಎಂ.ಪಾರ್ವತಮ್ಮ, ಡಾ.ತಿಪ್ಪೇಸ್ವಾಮಿ, ಬೆಸ್ಕಾಂ ಅಭಿಯಂತರ ಮಂಜುನಾಯ್ಕ್, ಮತ್ತು ನಾಗರಾಜ್ ಉಪಸ್ಥಿತರಿದ್ದರು.

----

26ಕೆಸಿಎನ್ಜಿ2

ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಚನ್ನಗಿರಿಯ ಎಸ್.ಎಸ್.ಎಸ್.ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಒಂದು ವಾರಗಳ ಕಾಲ ನಡೆಯಲಿರುವ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯನ್ನು ಎಸ್.ಎಸ್.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಬಿ.ಜಿ. ಅಮೃತೇಶ್ವರ್ ನೆರವೇರಿಸಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!