ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರ ಆದರ್ಶ ಮೈಗೂಡಿಸಿಕೊಳ್ಳಿ

KannadaprabhaNewsNetwork |  
Published : Sep 06, 2024, 01:10 AM ISTUpdated : Sep 06, 2024, 01:11 AM IST
5 ಜಿ ಯು ಬಿ 4: ಗುಬ್ಬಿ ತಾಲೂಕಿನ ಹೇರೂರಿನ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ 137ನೇ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆಯನ್ನು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಗುವಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.

ಗುಬ್ಬಿ: ಮಗುವಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.

ತಾಲೂಕಿನ ಹೇರೂರಿನ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ 137ನೇ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಮಾತ್ರ ಸಮಾನತೆ ಹಾಗೂ ಮಾನವೀಯತೆಯ ಗುಣವನ್ನು ಕಲಿಸಲು ಅವಕಾಶವಿದೆ. ಶಿಕ್ಷಕರ ದೇಹಕ್ಕೆ ಬೆಲೆ ಇಲ್ಲ ಆದರೆ ಅವರು ಕಲಿಸುವಂತಹ ಜ್ಞಾನಕ್ಕೆ ಆಗಾಧವಾದಂತಹ ಬೆಲೆ ಇದೆ ಎಂಬುದನ್ನು ತಾವೆಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದರು.

ಕೇವಲ ಡಾ.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದು, ಬ್ಯಾಡ್ಜ್ ಗಳನ್ನು ಹಾಕಿಕೊಂಡರೆ ಅದು ಕೇವಲ ಕಾರ್ಯಕ್ರಮವಾಗುತ್ತದೆ. ಅವರ ಆದರ್ಶಗಳನ್ನು ಕನಸುಗಳನ್ನು ತಾವೆಲ್ಲರೂ ಅರ್ಥ ಮಾಡಿಕೊಂಡು ಕೆಲಸ ಮಾಡಿದರೆ ಇಡೀ ಸಮಾಜದಲ್ಲಿ ದೊಡ್ಡ ಬದಲಾವಣೆಯನ್ನು ತಾವೆಲ್ಲರೂ ತರಬಹುದಾಗಿದೆ ಎಂದು ಹೇಳಿದರು.

ಶಾಸಕ ಎಸ್‌.ಆರ್‌.ಶ್ರೀನಿವಾಸ್ ಮಾತನಾಡಿ, ಸಮಾಜದ ಪರಿವರ್ತನೆ ಬದಲಾವಣೆ ಆಗಬೇಕು ಅಂದರೆ ಅದು ಶಿಕ್ಷಕರಿಂದ ಶಿಕ್ಷಣದಿಂದ ಮಾತ್ರ ಸಾಧ್ಯ. ಆಧುನಿಕತೆ ಬೆಳೆದಂತೆ ಶಿಕ್ಷಣವು ಬದಲಾಗಬೇಕಾಗಿದ್ದು, ಇಂದಿನ ಮಾಹಿತಿ ತಂತ್ರಜ್ಞಾನಕ್ಕೆ ಶಿಕ್ಷಕರು ಹೊಂದಿಕೊಳ್ಳುವ ಮೂಲಕ ಮಕ್ಕಳ ಉತ್ತಮ ಭವಿಷ್ಯಕ್ಕೆ ದಾರಿಯಾಗಬೇಕು. ಕಳೆದ ವರ್ಷ ತುಮಕೂರು ಜಿಲ್ಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ಸ್ಥಾನದಲ್ಲಿತ್ತು. ಈಗ 5ನೇ ಸ್ಥಾನಕ್ಕೆ ಹೋಗಿದೆ ಎಂದಾಗ ಬೇಸರವಾಗುತ್ತದೆ. ಎಂದರು.

ನಿವೃತ್ತ ಶಿಕ್ಷಕ, ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದವರನ್ನು ಸನ್ಮಾನಿಸಲಾಯಿತು. ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಸಿ.ಶಿವಣ್ಣ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು.ಎಂ.ಎಸ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕರುಣಾಕರ ಶೆಟ್ಟಿ.ಪಿ, ಕ್ಷೇತ್ರ ಸಮನ್ವಯಾಧಿಕಾರಿ ಮಧುಸೂದನ್.ಕೆ.ಎಸ್, ತಾಲೂಕು ಶಿಕ್ಷಣಾಧಿಕಾರಿ ಸಂಘದ ಅಧ್ಯಕ್ಷ ಸಂಗಮೇಶ್.ಬಿ.ಕೆ, ಸಂಘದ ಎನ್.ಟಿ.ಪ್ರಕಾಶ್, ಕಸಾಪ ಅಧ್ಯಕ್ಷ ಯತೀಶ್.ಎಚ್.ಸಿ, ಯೋಗಾನಂದ.ಎಸ್, ಉಮೇಶ್ ಭಾಗಿಯಾಗಿದ್ದರು.

PREV

Recommended Stories

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌