ಹಸಿರು ಕ್ರಾಂತಿ ಹರಿಕಾರ ಜಗಜೀವನ ರಾಂ ಆದರ್ಶಗಳ ಅಳವಡಿಸಿಕೊಳ್ಳಿ: ಶಾಸಕ ನರೇಂದ್ರಸ್ವಾಮಿ

KannadaprabhaNewsNetwork |  
Published : Apr 06, 2024, 12:49 AM IST
5ಕೆಎಂಎನ್ ಡಿ14 | Kannada Prabha

ಸಾರಾಂಶ

ವಿಶ್ವಗುರು ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಜಯಂತಿಯನ್ನು ಕೂಡ ನೀತಿಸಂಹಿತೆಯಿಂದ ತಾಲೂಕು ಕಚೇರಿಯಲ್ಲಿ ನಡೆಸಲಾಗುತ್ತದೆ. ಚುನಾವಣೆ ಮುಗಿದ ನಂತರ ಒಂದೇ ವೇದಿಕೆಯಲ್ಲಿ ಎಲ್ಲಾ ನಾಯಕರ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸುವುದರ ಮೂಲಕ ಮಹನ್ ನಾಯಕರ ಸಂದೇಶವನ್ನು ಇಂದಿನ ಯುವಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ದೀನ ದಲಿತರ ಕಣ್ಗಾವಲಾಗಿ, ಬಾಬಾ ಸಾಹೇಬರ ನೆರಳಾಗಿ ಶೋಷಿತರ ಧ್ವನಿಯಾಗಿ ರಾಷ್ಟ್ರದ ಐಕ್ಯತೆ, ಸಮಗ್ರತೆ ಜೊತೆಯಲ್ಲಿ ಸಂವಿಧಾನಿಕ ಹೆಜ್ಜೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಸಿರುಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಂ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಪಿ.ಎಂ. ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬಾಬು ಜಗಜೀವನ್‌ರಾಂ ಜಯಂತಿಯಲ್ಲಿ ಮಾತನಾಡಿ, ದೇಶಕ್ಕೆ ಅಪಾರ ಕೊಡುಗೆ ನೀಡಿದ ಬಾಬು ಜಗಜೀವನ್‌ರಾಂ ಜಯಂತಿಯನ್ನು ರಾಷ್ಟ್ರಾದ್ಯಂತ ಆಚರಿಸಲಾಗುತ್ತಿದೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗದೇ ಪಟ್ಟಣದ ತಾಲೂಕು ಕಚೇರಿಯಲ್ಲಿ ಗೌರವ ಪೂರ್ವಕವಾಗಿ ಆಚರಿಸಲಾಗುತ್ತಿದೆ ಎಂದರು.

ವಿಶ್ವಗುರು ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಜಯಂತಿಯನ್ನು ಕೂಡ ನೀತಿಸಂಹಿತೆಯಿಂದ ತಾಲೂಕು ಕಚೇರಿಯಲ್ಲಿ ನಡೆಸಲಾಗುತ್ತದೆ. ಚುನಾವಣೆ ಮುಗಿದ ನಂತರ ಒಂದೇ ವೇದಿಕೆಯಲ್ಲಿ ಎಲ್ಲಾ ನಾಯಕರ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸುವುದರ ಮೂಲಕ ಮಹನ್ ನಾಯಕರ ಸಂದೇಶವನ್ನು ಇಂದಿನ ಯುವಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗುವುದಾಗಿ ಹೇಳಿದರು.

ಬಾಬು ಜಗಜೀವನ್ ರಾಂ ಅವರು ಜವಾಹರಲಾಲ್ ನೆಹರು ಅವರ ಮೊದಲ ಕ್ಯಾಬಿನೆಟ್ ನಲ್ಲಿ ಕಿರಿಯ ಸಚಿವರಾದರು ಮತ್ತು ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದರು. ಭಾರತದ ಸಂವಿಧಾನ ಸಭೆ ಸದಸ್ಯರಾಗಿದ್ದರು. ಸಾಮಾಜಿಕ ನ್ಯಾಯವನ್ನು ಸಂವಿಧಾನದ ಮೂಲ ಭಾಗವೆಂದು ಖಚಿತಪಡಿಸಿಕೊಳ್ಳಲು ಕೆಲಸ ನಿರ್ವಹಿಸಿದರು. ದೇಶದಲ್ಲಿ ಆಹಾರದ ಸಮಸ್ಯೆ ಎದುರಾದ ಸಂದರ್ಭದಲ್ಲಿ ಹಸಿರು ಕ್ರಾಂತಿ ಮೂಲಕ ಜನರ ಹಸಿವನ್ನು ನಿವಾರಿಸಿದರು ಎಂದು ಸ್ಮರಿಸಿದರು.

ಬಾಬು ಜಗಜೀವನ್‌ರಾಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅತಿಥಿಗಳು ಪುಷ್ಪನಮನ ಸಲ್ಲಿಸಿದರು. ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿ.ರಾಜು, ನಿಕಟಪೂರ್ವ ಅಧ್ಯಕ್ಷ ದೇಚರಾಜು. ಪುರಸಭೆ ಸದಸ್ಯರಾದ ಶಿವಸ್ವಾಮಿ, ರಾಜಶೇಖರ್ ಪ್ರಮೀಳ, ಗ್ಯಾರಂಟಿ ಯೋಜನೆ ಅನುಷ್ಠಾನದ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ ತಾಪಂ ಮಾಜಿ ಉಪಾಧ್ಯಕ್ಷ ಸಿ.ಮಾಧು, ಮುಖಂಡರಾದ ಶಾಂತರಾಜು ಕೃಷ್ಣ, ಕಿರಣ್‌ಶಂಕರ್, ವೆಂಕಟೇಶ್, ಸತೀಶ್, ಸಿದ್ದರಾಜು ಸೇರಿದಂತೆ ಇತರರು ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ