ಸರ್ದಾರ್ ಪಟೇಲರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ

KannadaprabhaNewsNetwork |  
Published : Nov 17, 2025, 12:30 AM IST
16ಕೆಡಿವಿಜಿ1-ದಾವಣಗೆರೆಯಲ್ಲಿ ಭಾನುವಾರ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಬಾಯಿ ಪಟೇಲ್‌ರ 150ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಏಕತಾ ನಡಿಗೆ ಪಾದಯಾತ್ರೆಗೆ ಚಾಲನೆ ನೀಡಿದ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ. | Kannada Prabha

ಸಾರಾಂಶ

ಭಾರತದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭ ಭಾಯಿ ಪಟೇಲ್‌ ಭಾರತ ಕಂಡ ಅಪ್ರತಿಮ ದೇಶಭಕ್ತರಾಗಿದ್ದಾರೆ. ಸ್ವತಂತ್ರ ಭಾರತದಲ್ಲಿ ವಿವಿಧ ರಾಜ್ಯ, ಪ್ರಾಂತ್ಯಗಳ ಹೆಸರಿನಲ್ಲಿ ಹಂಚಿಹೋಗಿದ್ದ ಇಡೀ ದೇಶವನ್ನು ಒಗ್ಗೂಡಿಸಿದ ಮಹಾನ್ ನಾಯಕ ಎಂದು ಚಿತ್ರದುರ್ಗ ಸಂಸದ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

- ಉಕ್ಕಿನ ಮನುಷ್ಯ ವಲ್ಲಭಬಾಯಿ ಪಟೇಲ್‌ 150ನೇ ಜನ್ಮದಿನ, ಏಕತಾ ನಡಿಗೆಗೆ ಚಾಲನೆ ನೀಡಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಭಾರತದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭ ಭಾಯಿ ಪಟೇಲ್‌ ಭಾರತ ಕಂಡ ಅಪ್ರತಿಮ ದೇಶಭಕ್ತರಾಗಿದ್ದಾರೆ. ಸ್ವತಂತ್ರ ಭಾರತದಲ್ಲಿ ವಿವಿಧ ರಾಜ್ಯ, ಪ್ರಾಂತ್ಯಗಳ ಹೆಸರಿನಲ್ಲಿ ಹಂಚಿಹೋಗಿದ್ದ ಇಡೀ ದೇಶವನ್ನು ಒಗ್ಗೂಡಿಸಿದ ಮಹಾನ್ ನಾಯಕ ಎಂದು ಚಿತ್ರದುರ್ಗ ಸಂಸದ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ನಗರದ ಯುಬಿಡಿಟಿ ಕಾಲೇಜು ಆವರಣದಲ್ಲಿ ಭಾನುವಾರ ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದಿಂದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಬಾಯಿ ಪಟೇಲ್‌ 150ನೇ ಜನ್ಮದಿನ ಅಂಗವಾಗಿ ಹಮ್ಮಿಕೊಂಡಿದ್ದ ಏಕತಾ ನಡಿಗೆ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತದ ಏಕೀಕರಣಕ್ಕೆ ಸರ್ದಾರ್ ಪಟೇಲರ ಪರಿಶ್ರಮ ಅತ್ಯಂತ ಮಹತ್ವದ್ದಾಗಿದೆ ಎಂದರು.

ಸರ್ದಾರ್ ಪಟೇಲರ ಜನ್ಮದಿನವನ್ನು ದೇಶಾದ್ಯಂತ ಏಕತಾ ಯಾತ್ರೆಯಾಗಿ ಆಚರಿಸಲು ಕೇಂದ್ರ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ 2047ಕ್ಕೆ ವಿಕಸಿತ ಭಾರತ ಪರಿಣಾಮವಾಗಿ ದೇಶದ ಯುವಕರನ್ನು ದೇಶದ ಪ್ರಗತಿಯೊಂದಿಗೆ, ರಾಷ್ಟ್ರದ ಗೌರವದೊಂದಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಏಕತಾ ನಡಿಗೆ ಪಾದಯಾತ್ರೆಯನ್ನು ಇಲಾಖೆ ಹಮ್ಮಿಕೊಂಡಿದೆ, ಭಾರತ ಅಭಿವೃದ್ಧಿ ಸಾಧಿಸಿ ವಿಶ್ವದ ಹಿರಿಯಣ್ಣನಾಗಲು ಯುವಜನರು ಕೈ ಜೋಡಿಸಬೇಕು ಎಂದು ತಿಳಿಸಿದರು.

ದೇಶಾದ್ಯಂತ ಅ.6ರಿಂದ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ನಾನು ಭಾರತದ ಸೇವಕನೆಂಬ ಮನೋಭಾವದೊಂದಿಗೆ ವಿದ್ಯಾರ್ಥಿಗಳು, ಎನ್‌ಸಿಸಿ, ಎನ್ನೆಸ್ಸೆಸ್‌ ವಿದ್ಯಾರ್ಥಿಗಳು, ನಿವೃತ್ತ ಸೇನಾಧಿಕಾರಿಗಳು, ನಿವೃತ್ತ ಯೋಧರು ಸೇರಿದಂತೆ ಎಲ್ಲರೂ ಸ್ವಯಂ ಸೇವಕರಾಗಿ, ಏಕತಾ ನಡಿಗೆಯಲ್ಲಿ ಸುಮಾರು 6-8 ಕಿ.ಮೀ. ಉದ್ದದ ಪಾದಯಾತ್ರೆಯಲ್ಲಿ ದೇಶಾದ್ಯಂತ ಭಾಗಿಯಾಗುತ್ತಿದ್ದಾರೆ ಎಂದು ತಿಳಿಸಿದರು.

ಏಕತಾ ನಡಿಗೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಬಿ.ರಾಜಪ್ಪ ವಹಿಸಿದ್ದರು. ವಿಪ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ, ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ, ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳು, ಅನಿಲಕುಮಾರ ನಾಯ್ಕ, ಆರ್.ಶಿವಾನಂದ. ಕೆ.ಪ್ರಸನ್ನಕುಮಾರ, ಬಸವರಾಜಯ್ಯ, ಬಾತಿ ರವಿಕುಮಾರ, ಕೆಟಿಜೆ ನಗರ ಲೋಕೇಶ, ಕೆಟಿಜೆ ನಗರ ಬಿ.ಆನಂದ, ಅಣಜಿ ಅಣ್ಣೇಶ, ಪ್ರವೀಣ ಜಾಧವ್, ರಾಜು ವೀರಣ್ಣ, ಪಂಜು ಪೈಲ್ವಾನ, ಕೊಟ್ರೇಶ ಗೌಡ, ಪವನ ರೇವಣಕರ್‌ ಇತರರು ಇದ್ದರು.

- - -

(ಬಾಕ್ಸ್‌) * ಭಾರತ ಏಕೀಕರಣದ ಶಿಲ್ಪಿ ಎನಿಸಿರುವ ವಲ್ಲಭಬಾಯಿ ಪಟೇಲ್‌ ವಿವಿಧ ರಾಜ್ಯ, ಸಂಸ್ಥಾನ ಹೀಗೆ ನಾನಾ ಹೆಸರಿನಲ್ಲಿ ಹಂಚಿಹೋಗಿದ್ದ 565 ವಿವಿಧ ಮಹಾರಾಜರ ಸಂಸ್ಥಾನಗಳನ್ನು ಒಗ್ಗೂಡಿಸಿ, ಆ ಎಲ್ಲರ ಮನವೊಲಿಸುವ ಮೂಲಕ ದೇಶ‍ ಒಗ್ಗೂಡಿಸಿದವರು ಪಟೇಲರು. ಮೊಂಡುತನ ಮಾಡುವವರನ್ನು ಬಗ್ಗುಬಡಿದು, ಭಾರತದಲ್ಲಿ ಅಂತಹ ರಾಜ್ಯ, ಪ್ರಾಂತ್ಯಗಳನ್ನು ವಿಲೀನ ಮಾಡಿ, ಭಾರತವನ್ನು ಏಕೀಕರಣ ರಾಷ್ಟ್ರವಾಗಿ ಮಾಡಿದ ಮಹಾನ್ ನಾಯಕ ಸರ್ದಾರ್‌ ಪಟೇಲ್‌. ಭಾರತ ಏಕೀಕರಣದ ಶಿಲ್ಪಿ ಎನಿಸಿರುವ ವಲ್ಲಭಬಾಯಿ ಪಟೇಲರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ. ಯುವಕರು ದೇಶದ ಘನತೆ, ಗೌರವ ಹಾಗೂ ಐಕ್ಯತೆಗಳನ್ನು ಎತ್ತಿ ಹಿಡಿಯುವ ಮೂಲಕ ಭಾರತವನ್ನು ವಿಶ್ವದ ಹಿರಿಯಣ್ಣನನ್ನಾಗಿ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಏಕತಾ ಪಾದಯಾತ್ರೆ, ನಡಿಗೆಯು ನಮ್ಮೆಲ್ಲರಿಗೂ ಪ್ರೇರಣೆಯಾಗಲಿ ಎಂದು ಸಂಸದ ಗೋವಿಂದ ಕಾರಜೋಳ ಸಲಹೆ ನೀಡಿದರು.

- - -

-16ಕೆಡಿವಿಜಿ1.ಜೆಪಿಜಿ:

ದಾವಣಗೆರೆಯಲ್ಲಿ ಭಾನುವಾರ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಬಾಯಿ ಪಟೇಲ್‌ 150ನೇ ಜನ್ಮದಿನ ಅಂಗವಾಗಿ ಹಮ್ಮಿಕೊಂಡಿದ್ದ ಏಕತಾ ನಡಿಗೆ ಪಾದಯಾತ್ರೆಗೆ ಚಾಲನೆ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ