ಹಾವೇರಿ ನಗರದ ಕಾಗಿನೆಲೆ ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ 51ನೇ ತುರ್ತು ಪರಿಸ್ಥಿತಿ ಕರಾಳ ದಿನ ಆಚರಿಸಲಾಯಿತು.
ಹಾವೇರಿ: ನಗರದ ಕಾಗಿನೆಲೆ ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ 51ನೇ ತುರ್ತು ಪರಿಸ್ಥಿತಿ ಕರಾಳ ದಿನ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಉಪನ್ಯಾಸಕರಾಗಿ ಆಗಮಿಸಿದ್ದ ರವೀಶ ಕರ್ನೂರ ಮಾತನಾಡಿ, 1975ರ ತುರ್ತು ಪರಿಸ್ಥಿತಿಯ ದಿನದಲ್ಲಿ ಅಂದಿನ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ, ಮುಖಂಡರಿಗೆ, ಮಾಧ್ಯಮಗಳಿಗೆ ನಿರ್ಬಂಧ ಹೇರಿತ್ತು. ಯಾವುದೇ ಕಾರಣ ಕೊಡದೆ ಮುಖಂಡರನ್ನು ಬಂಧಿಸಿ ಕಾರಾಗೃಹಕ್ಕೆ ಕಳುಹಿಸಲಾಗುತ್ತಿತ್ತು. ಸ್ವತಃ ಬಂಧಿಖಾನೆಯಲ್ಲಿ ಅನುಭವಿಸಿದ ಶಿಕ್ಷೆಗಳನ್ನು, ಚಿತ್ರಹಿಂಸೆಗಳನ್ನು ಹೇಳಲು ಅಸಾಧ್ಯವಾದ ರೀತಿ ಕೊಡುತ್ತಿದ್ದರೆಂದು ವಿವರಿಸಿದರು.ಕರಾಳ ತುರ್ತು ಪರಿಸ್ಥಿತಿಯ ಸಂದರ್ಭವನ್ನು ಉಪಯೋಗಿಕೊಂಡು ಕಾಂಗ್ರೆಸ್ಸೇತರ ರಾಜಕೀಯ ಪಕ್ಷಗಳು ತಲೆ ಎತ್ತಿದ್ದವು. ಈ ತುರ್ತು ಪರಿಸ್ಥಿತಿ ಹೇರಿದ ಇಂದಿರಾ ಗಾಂಧಿಯವರಿಗೆ ದೇಶದ ಜನತೆ ತಕ್ಕ ಪಾಠವನ್ನು ಕಲಿಸಿದರು. ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸನ್ನು ಹೀನಾಯವಾಗಿ ಸೋಲಿಸಿದರು ಎಂದು ತಿಳಿಸಿದರು.
ಮಾಜಿ ಶಾಸಕ ಶಿವರಾಜ ಸಜ್ಜನರ ಅವರು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ತಾವು ಅನುಭವಿಸಿದ ಅನುಭವವನ್ನು ಕಾರ್ಯಕರ್ತರ ಎದುರು ವ್ಯಕ್ತಪಡಿಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಹಾಗೂ ಬಿಜೆಪಿ ಮುಖಂಡರು ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾದ ರಾಜ್ಯಸಭಾ ಸದಸ್ಯ ಮಾ. ನಾಗರಾಜ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಪಕ್ಷದ ಮುಖಂಡರಾದ ಮಂಜುನಾಥ ಓಲೇಕಾರ, ಗವಿಸಿದ್ದಪ್ಪ ದ್ಯಾಮಣ್ಣವರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಪಾಲಾಕ್ಷಗೌಡ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೀಲಪ್ಪ ಚಾವಡಿ, ಸಂತೋಷ ಆಲದಕಟ್ಟಿ, ಸಿದ್ದಪ್ಪ ಚಿಕ್ಕಬಿದರಿ, ಜಿಲ್ಲಾ ಮಾಧ್ಯಮ ಸಂಚಾಲಕ ವಿಜಯಕುಮಾರ ಚಿನ್ನಿಕಟ್ಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲತಾ ಬಡ್ನಿಮಠ, ನಗರ ಮೋರ್ಚಾ ಅಧ್ಯಕ್ಷೆ ರೋಹಿಣಿ ಪಾಟೀಲ, ಮಂಜುಳಾ ಕರಬಸಮ್ಮನವರ ಸೇರಿದಂತೆ ಜಿಲ್ಲೆಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.ಬಸವರಾಜ ಕಳಸೂರ ಸ್ವಾಗತಿಸಿದರು. ನಂಜುಂಡೇಶ ಕಳ್ಳೇರ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.