ಕನ್ನಡಪ್ರಭ ವಾರ್ತೆ ವಿಜಯಪುರ
ವಿಜಯಪುರ ನಗರ ಸೇರಿದಂತೆ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಕಡೆಗಳಲ್ಲಿ ತುರ್ತಾಗಿ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ನಿರ್ವಹಣೆ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದಾದ್ಯಂತ ಬರಗಾಲವಿರುವುದರಿಂದ ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆ ಬಂದ ಕಡೆಗಳಲ್ಲಿ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.ವಿಜಯಪುರ ನಗರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ನಿಡಗುಂದಿ ಅಕ್ವಾಡೆಕ್ಟ್ ಮೂಲಕ ಭೂತನಾಳ ಕೆರೆಯನ್ನು ತುಂಬಿಸಲು ತಾತ್ಕಾಲಿಕವಾಗಿ ಸ್ಟೋರೇಜ್ ನಿರ್ಮಿಸಿಕೊಂಡು ಕೆರೆ ತುಂಬಿಸಿ ಕುಡಿಯುವ ನೀರಿನ ಪೂರೈಕೆಗೆ ಕ್ರಮ ವಹಿಸಬೇಕು. ವಿಜಯಪುರ ನಗರದಲ್ಲಿ ಜಲಮಂಡಳಿಯಿಂದ ಕೊರೆಯಿಸಲಾದ 20 ಬೋರವೆಲ್‍ಗಳಿಗೆ ಮಾಸಾಂತ್ಯದೊಳಗೆ ತುರ್ತಾಗಿ ಮೋಟರ್ ಅಳವಡಿಸಿ ನೀರು ಪೂರೈಕೆಗೆ ಕ್ರಮ ವಹಿಸಬೇಕು. ಸಣ್ಣ ಪುಟ್ಟ ದುರಸ್ತಿಗಳಿರುವ ಬೋರವೆಲ್‍ಗಳ ದುರಸ್ತಿಗೆ ಕ್ರಮ ವಹಿಸಿ ನೀರು ಒದಗಿಸಲು ಮುಂದಾಗಬೇಕು. ಈಗಾಗಲೇ 8 ಖಾಸಗಿ ಬೋರವೆಲ್‍ಗಳು ನೀಡಲು ಮುಂದಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ನಗರದ ಆಯಾ ವಾರ್ಡ್‌ಗಳಲ್ಲಿ ಖಾಸಗಿ ಬೊರವೆಲ್‍ಗಳನ್ನು ಬಾಡಿಗೆ ಮೇಲೆ ಪಡೆದು ನೀರು ಒದಗಿಸಲು ಕ್ರಮ ವಹಿಸಬೇಕು. ಈಗಾಗಲೇ ಗುರುತಿಸಲಾದ 28 ಸರ್ಕಾರಿ ಹಾಗೂ ಖಾಸಗಿ ಭಾವಿಗಳ ನೀರಿನ ಬಳಕೆ ಮಾಡುವ ನಿಟ್ಟಿನಲ್ಲಿ ಅಗತ್ಯವಿರುವ ಮೋಟರ್-ಪಂಪ್ ಅಳವಡಿಸಿ ಕುಡಿಯಲು ನೀರು ಯೋಗ್ಯವಿಲ್ಲದಿದ್ದಲ್ಲಿ ಬಾವಿಯ ನೀರು ಗೃಹಬಳಕೆ ಉಪಯೋಗ ಮಾಡಲು ಕ್ರಮವಹಿಸಬೇಕು ಎಂದು ಸೂಚಿಸಿದರು.ಜಿಲ್ಲೆಯ 15 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಸ್ತುತ ಯಾವುದೇ ನೀರಿನ ತೀವ್ರತರವಾಗಿ ಸಮಸ್ಯೆ ಎದುರಾಗಿಲ್ಲ. ಆಲಮೇಲ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬರುವ ಮಾರ್ಚ್‍ನವರೆಗೆ ಯಾವುದೇ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಮಾರ್ಚ್ ನಂತರ ಬರಬಹುದಾದ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಟ್ಯಾಂಕರ್ ವ್ಯವಸ್ಥೆ ಸೇರಿದಂತೆ ಬೋರವೆಲ್‍ಗಳಗಳನ್ನು ಗುರುತಿಸಿಕೊಂಡು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ತಾಲೂಕು, ಗ್ರಾಮ ಮಟ್ಟದ ಟಾಸ್ಕ್‌ಪೋರ್ಸ್ ಸಮಿತಿಗಳು ಕಾಲಕಾಲಕ್ಕೆ ನಿರಂತರವಾಗಿ ಸಭೆಗಳನ್ನು ನಡೆಸಿ ಇದ್ದ ಸಣ್ಣಪುಟ್ಟ ಸಮಸ್ಯೆಗಳನ್ನು ನಿವಾರಿಸಿಕೊಂಡು ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪಾಲಿಕೆ ಅಧಿಕಾರಿಗಳು ಜಲಮಂಡಳಿ ಅಧಿಕಾರಿಗಳ ಮೇಲೆ ಜಲಮಂಡಳಿ ಅಧಿಕಾರಿಗಳು ಪಾಲಿಕೆ ಅಧಿಕಾರಿಗಳ ಮೇಲೆ ಬೊಟ್ಟು ತೋರಿಸಿದೇ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಕುಡಿಯುವ ನೀರಿನ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಯಾರೂ ಸಹ ನಿರ್ಲಕ್ಷ್ಯ ವಹಿಸದೇ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಜನರಿಗೆ ಕುಡಿಯುವ ನೀರು ಒದಗಿಸಲು ಮುಂದಾಗಬೇಕು ಎಂದು ತಿಳಿಸಿದರು.ನಾಗಠಾಣ ಶಾಸಕರಾದ ವಿಠ್ಠಲ ಕಟಕದೊಂಡ, ಮಹಾನಗರ ಪಾಲಿಕೆ ಮೇಯರ್ ಮಹೇಜಬಿನ್ ಹೊರ್ತಿ, ಉಪಮಹಾಪೌರ ದಿನೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವಣೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೇರಿದಂತೆ ಮುಂತಾದವರು ಇದ್ದರು.ಕೋಟ್..ಬೋರವೆಲ್ ಕೊರೆಸುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಕಾಲಾವಕಾಶ ತೆಗೆದುಕೊಳ್ಳುವುದರಿಂದ ಪರ್ಯಾಯವಾಗಿ ಇದ್ದ ಮೂಲಗಳಿಂದಲೇ ಟ್ಯಾಂಕರ್ ಮೂಲಕ ತುರ್ತಾಗಿ ನೀರು ಒದಗಿಸಲು ಕ್ರಮ ವಹಿಸಬೇಕು. ಡಾ.ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು.ವಿಜಯಪುರ ನಗರ ಸೇರಿದಂತೆ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಕಡೆಗಳಲ್ಲಿ ತುರ್ತಾಗಿ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.