ಶಿವಶಂಕರಪ್ಪ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

KannadaprabhaNewsNetwork |  
Published : Dec 16, 2025, 01:45 AM IST
15ಎಚ್ಎಸ್ಎನ್18 :  | Kannada Prabha

ಸಾರಾಂಶ

ಅವರು ಸುಮಾರು 60 ವರ್ಷಗಳ ಕಾಲ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದು, ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅಜಾತಶತ್ರು ನಾಯಕರೆಂದು ಸ್ಮರಿಸಿದರು.

ಹಾಸನ:

ಮಾಜಿ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶ್ಯಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದಕ್ಕೆ ನಗರದ ಹೇಮಾವತಿ ಪ್ರತಿಮೆ ಬಳಿ ಸೋಮವಾರ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಎರಡು ನಿಮಿಷ ಮೌನಾಚರಣೆ ನಡೆಸಿ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಲಾಯಿತು.ಕಾರ್ಯಕ್ರಮದಲ್ಲಿ ಶ್ರೀ ಜವೆನಹಳ್ಳಿ ಮಠದ ಮಠಾಧೀಶರಾದ ಸಂಗಮೇಶ್ವರ ಸ್ವಾಮೀಜಿ, ವೀರಶೈವ ಲಿಂಗಾಯತ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಪಿ. ಐಸಾಮಿಗೌಡ ಹಾಗೂ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಅವರು ಮಾಧ್ಯಮದೊಂದಿಗೆ ಮಾತನಾಡಿ, ಶ್ಯಾಮನೂರು ಶಿವಶಂಕರಪ್ಪ ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ ಮಿಡಿದರು.

ಅವರು ಸುಮಾರು 60 ವರ್ಷಗಳ ಕಾಲ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದು, ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅಜಾತಶತ್ರು ನಾಯಕರೆಂದು ಸ್ಮರಿಸಿದರು. ಶಾಸಕರಾಗಿದ್ದರೂ ಪಕ್ಷಭೇದವಿಲ್ಲದೆ ಸಮಾಜದ ಹಿತಕ್ಕಾಗಿ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವ ಗುಣ ಹೊಂದಿದ್ದರು ಎಂದು ಹೇಳಿದರು.

ವೀರಶೈವ ಲಿಂಗಾಯತ ರಾಷ್ಟ್ರೀಯ ಮಟ್ಟದ ಮಹಾಸಭೆಗೆ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿ, ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಅಖಿಲ ಭಾರತ ವೀರಶೈವ ಮಹಾಸಭೆಯನ್ನು ಸಂಘಟಿಸಿದ ಮಹಾನ್ ನಾಯಕರು ಎಂದು ಪ್ರಶಂಸಿಸಿದರು. ಅವರ ಸೇವೆ ಅನನ್ಯ ಹಾಗೂ ಸ್ಮರಣೀಯವಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ಪುನಿತ್ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಚಂದ್ರಮತಿ ಪುಟ್ಟಸ್ವಾಮಿ, ತಾಲೂಕು ಘಟಕದ ಅಧ್ಯಕ್ಷೆ ಮಮತಾ ಪಟೇಲ್, ಉಪಾಧ್ಯಕ್ಷೆ ಗಿರಿಜಂಬಿಕೆ, ಪ್ರಧಾನ ಕಾರ್ಯದರ್ಶಿ ರುದ್ರಕುಮಾರ್, ನಿರ್ದೇಶಕ ಶೋಭನ್ ಬಾಬು, ರಾಜ್ಯ ಸಮಿತಿ ನಿರ್ದೇಶಕ ಶಿವಕುಮಾರ್, ಖಜಾಂಚಿ ಎಸ್. ಜಯಶಂಕರ್, ಉಪಾಧ್ಯಕ್ಷೆ ಗೀತ ಪುಟ್ಟಸ್ವಾಮಿ, ಸಹಕಾರ್ಯದರ್ಶಿ ಮಲ್ಲಿಕ್, ನಿರ್ದೇಶಕಿ ಮಯೂರಿ ಲೋಕೇಶ್, ನಂದೀಶ್, ಜಗದೀಶ್, ಶೈಲಾ ಮಧನ್, ಸಮಾಜದ ಮುಖಂಡರಾದ ನಾಗೇಶ್, ಸರಸ್ವತಿ ಚಂದ್ರಶೇಖರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!