ಮದ್ದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Jun 14, 2026, 02:00 AM IST
13ಕೆಎಂಎನ್ ಡಿ21 | Kannada Prabha

ಸಾರಾಂಶ

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರೀಕ್ಷೆಗೂ ಮೀರಿ ಅನುದಾನ ನೀಡಿದ ಪರಿಣಾಮ ಎರಡುವರೆ ವರ್ಷಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಸಹಕಾರಿಯಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಮದ್ದೂರು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿ ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ತಾವು ಈಗಾಗಲೇ ಎರಡು ಸಾವಿರ ಕೋಟಿ ರು. ಅನುದಾನ ತಂದು ವಿವಿಧ ಅಭಿವೃದ್ಧಿ ಕಾಮಗಾರಿಗೆ ಒತ್ತು ನೀಡಿರುವುದಾಗಿ ಶಾಸಕ ಕೆ.ಎಂ. ಉದಯ್ ತಿಳಿಸಿದರು.

ತಾಲೂಕಿನ ಪಣ್ಣೇದೊಡ್ಡಿ ಗೇಟ್ ಬಳಿ ಕಾವೇರಿ ನೀರಾವರಿ ನಿಗಮದಿಂದ ಕೆರಗೋಡು ಶಾಖಾ ನಾಲೆಯಡಿ ಬರುವ 24ನೇ ವಿತರಣಾ ನಾಲೆಯ 4ನೇ ಮೈನರ್ ಕಾಲುವೆಯ ಅಭಿವೃದ್ಧಿ ಕಾಮಗಾರಿಗೆ ಬಿಡುಗಡೆಯಾಗಿರುವ 5 ಕೋಟಿ ರು.ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರೀಕ್ಷೆಗೂ ಮೀರಿ ಅನುದಾನ ನೀಡಿದ ಪರಿಣಾಮ ಎರಡುವರೆ ವರ್ಷಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಸಹಕಾರಿಯಾಗಿದೆ ಎಂದರು.

ಮದ್ದೂರು ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ 800 ಕೋಟಿ ರು.ಗಳು ಬಿಡುಗಡೆಯಾಗಿದೆ. ಹಲವು ವರ್ಷಗಳಿಂದ ನೆನಗುದಿಗೆ ಬಿದಿದ್ದ ನಾಲೆಗಳು ಮತ್ತು ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳೂ ಸೇರಿದಂತೆ ಇನ್ನಿತರೆ ಕಾಮಗಾರಿಗಳನ್ನು ಕೈಗೊಂಡು ಸ್ಥಳೀಯ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು.

ವಿವಿಧ ಇಲಾಖೆಯಲ್ಲಿ ಸಿಗುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಶಾಶ್ವತ ಯೋಜನೆ ಜೊತೆಗೆ ನೆನಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ಕಾರ್ಯಕಲ್ಪ ಕಲ್ಪಿಸಬೇಕೆಂಬ ನಿಟ್ಟಿನಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸುಮಾರು 1400 ಕೋಟಿ ರು.ಗಳ ಕ್ರಿಯಾಯೋಜನೆ ತಯಾರಿಸಿ ಜೊತೆಗೆ ಇಲಾಖೆಯಿಂದ ಸಿಗುವ ಅನುದಾನದ ಪಟ್ಟಿ ತಯಾರಿಸಿ ಮನವಿ ಸಲ್ಲಿಸಲು ಮುಂದಾಗಿರುವುದಾಗಿ ಹೇಳಿದರು.

ಗ್ರಾಮ ಪರಿಣಿತಿಯಲ್ಲಿರುವ ರಸ್ತೆ, ಚರಂಡಿ, ಇನ್ನಿತರ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರೈಸಲು ಮುಂದಾಗಿದ್ದೇನೆ. 25 ವರ್ಷ ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಇದ್ದು ನಗರ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಹಂತ ಹಂತವಾಗಿ ಅಭಿವೃದ್ಧಿ ಹೊಂದಲು ಯೋಜನೆ ತಯಾರಿಸಿದ್ದೇನೆ. ನಗರ ವ್ಯಾಪ್ತಿ ಗ್ರಾಮಗಳಿಗೆ ಹೊಸ ಕಾರ್ಯಕಲ್ಪ ಕಲ್ಪಿಸಿ ಮಾದರಿ ನಗರವನ್ನಾಗಿಸಲು ತಾವು ನಿರಂತರವಾಗಿ ಶ್ರಮಿಸುತ್ತಿರುವುದಾಗಿ ವಿವರಿಸಿದರು.

ಕ್ಷೇತ್ರದ ಜನರು ತಮ್ಮ ಮೇಲೆ ನಂಬಿಕೆ, ವಿಶ್ವಾಸ, ಪ್ರೀತಿಯಿಟ್ಟು ಮೊದಲ ಬಾರಿಗೆ ತಮ್ಮನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ನಿಮ್ಮಗಳ ಸೇವೆಗೆ ಸದಾ ಸಿದ್ಧವಿದ್ದೇನೆ. ಕ್ಷೇತ್ರದ ಜನರ ನಿರೀಕ್ಷೆಯನ್ನು ಹುಸಿಗೊಳಿಸದಂತೆ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಚಿತ್ರಣವೇ ಬದಲಾಗಲಿದೆ ಎಂದರು.

ಈ ವೇಳೆ ಗ್ರಾಪಂ ಮಾಜಿ ಸದಸ್ಯರಾದ ಶೋಭಾ, ಧನಂಜಯ್ಯ, ಬಾಬು, ಮುರುಳಿ, ಸ್ಥಳೀಯ ಮುಖಂಡರಾದ ಪಣ್ಣೇದೊಡ್ಡಿ ವಿಜಯೇಂದ್ರ, ಸುಧಾಕರ್, ಚಿಕ್ಕತಿಮ್ಮ, ಗೋಪಿ, ಮಾರಸಿಂಗನಹಳ್ಳಿ ರಾಮಚಂದ್ರು, ಶರತ್, ಚಿಕ್ಕತಿಮ್ಮೇಗೌಡ, ಗೋವಿಂದು, ರವಿ, ಪ್ರಸನ್ನ, ಬಾಲಚಂದ್ರ, ಎಇಇಗಳಾದ ಅಜಯ್, ಚೇತನ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೆರಿಫೆರಲ್ ರಿಂಗ್ ರೋಡ್‌ಗೆಎಸ್‌ಎನ್‌ಸಿ ಅಧಿಕೃತ ಒಪ್ಪಿಗೆ
2.3 ಲಕ್ಷ ಸ್ಟಾರ್ಟಪ್‌ಗಳಿಂದ 25 ಲಕ್ಷ ಉದ್ಯೋಗ ಸೃಷ್ಟಿ: ಸಿಂಗ್