ಸರ್ಕಾರ, ದಾನಿಗಳಿಂದ ಶಿಕ್ಷಣಕ್ಕೆ ಒತ್ತು ಆಶಾದಾಯಕ ವಿಚಾರ: ಸುನಿಲ್‌ ಕುಮಾರ್‌

KannadaprabhaNewsNetwork |  
Published : Jun 19, 2025, 11:49 PM IST
ಚಿತ್ರ.1:  ದಾನಿ ಹಾಗೂ ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಪ್ರೌಢಶಾಲೆ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಪ್ರೌಢಶಾಲೆ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸುತ್ತಿರುವುದು. 2: ದಾನಿ ಪಿ.ಎಂ.ಲತೀಫ್ ಸಮಾರಂಭವನ್ನು ಉದ್ದೇಶೀಸಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಗದ್ದೆಹಳ್ಳ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸುಂಟಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ದಾನಿ ಪಿ.ಎಂ.ಲತೀಫ್ ಅವರು ನೀಡಿರುವ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಗದ್ದೆಹಳ್ಳ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ನಮ್ಮ ಕಾಲದಲ್ಲಿ ಶಿಕ್ಷಣಕ್ಕೆ ಪೋಷಕರೇ ಒತ್ತು ನೀಡಬೇಕಾಗಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಂದು ಮಗು ಶಿಕ್ಷಣವನ್ನು ಪಡೆಯಬೇಕೆಂಬ ನಿಯಮದಡಿಯಲ್ಲಿ ಸರ್ಕಾರ ಪಠ್ಯ ಪುಸ್ತಕ ಹಾಗೂ ದಾನಿಗಳು ನೋಟ್ ಪುಸ್ತಕಗಳನ್ನು ವಿತರಿಸುವ ಮೂಲಕ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದು ಆಶಾದಾಯಕ ವಿಚಾರ. ಮಕ್ಕಳು ಸವಲತ್ತು ಪಡೆದುಕೊಂಡು ಉತ್ತಮ ಶಿಕ್ಷಣದತ್ತ ಚಿತ್ತ ಹರಿಸಬೇಕು ಎಂದು ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಗದ್ದೆಹಳ್ಳ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಸುಂಟಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ದಾನಿ ಪಿ.ಎಂ.ಲತೀಫ್ ಅವರು ನೀಡಿರುವ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಸುತ್ತ ಮುತ್ತಲಿನ ಗ್ರಾಮದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಗ್ರಾಮದ ಹಿರಿಯರು ಶ್ರಮವಹಿಸಿ ಕಟ್ಟಿಸಿದ ಸರ್ಕಾರಿ ಶಾಲೆಯನ್ನು ಉಳಿಯುವಂತಾಗಬೇಕು. ಶಿಕ್ಷಕರೊಂದಿಗೆ ಪೋಷಕರು, ಗ್ರಾಮಸ್ಥರು ಸಹಕರಿಸುವಂತೆ ಮನವಿ ಮಾಡಿದರು. ಅದೇ ರೀತಿಯಲ್ಲಿ ಗ್ರಾಮದಲ್ಲಿರುವ ಬಾಲಕರ ವಿದ್ಯಾರ್ಥಿ ನಿಲಯವನ್ನು ಸ್ಥಳಾಂತರಗೊಳಿಸುವ ನಿರ್ಧಾರಕ್ಕೆ ಸರ್ಕಾರ ಬಂದಿದ್ದು, ಈ ಸುಸಜ್ಜಿತವಾದ ವಿದ್ಯಾರ್ಥಿ ನಿಲಯವನ್ನು ಉಳಿಸುವಲ್ಲಿ ಮುಖಂಡರು ಹಾಗೂ ಗ್ರಾಮಸ್ಥರು ಕೈ ಜೋಡಿಸುವಂತೆ ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಪುಸ್ತಕ ವಿತರಣಾ ದಾನಿ ಪಿ.ಎಂ.ಲತೀಫ್ ಮಾತನಾಡಿ, ಸರ್ಕಾರ ಸೇರಿದಂತೆ ದಾನಿಗಳು ಶಿಕ್ಷಣಕ್ಕೆ ಸಹಾಯಹಸ್ತ ನೀಡುತ್ತಿದ್ದು, ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಂಡು ಸತ್ಪಪ್ರಜಉ್ಳಾಗಬೇಕು. ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗೆ ಬೇಕಾಗಿರುವ ಮೂಲಸೌಲಭ್ಯಗಳನ್ನು ಒದಗಿಸಲು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಅಧ್ಯಕ್ಷ ಎಂ.ಎಸ್.ಸುನಿಲ್ ವಹಿಸಿದ್ದರು.

ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಅನಿತಾ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಸುಂಟಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಆರ್.ಎಚ್.ಶರೀಫ್, ಸಿ.ಮಹೇಂದ್ರ, ಬಿ.ಕೆ.ಮೋಹನ್, ವಾಸು, ಎಸ್.ಪಿ.ಸಂದೀಪ್‌, ರಜಾಕ್, ಹರೀಶ್, ಅಜೀಜ್, ಶಶಿಕುಮಾರ್ ರೈ, ಶಾಲಾ ಮುಖ್ಯೋಪಾದ್ಯಾಯಿನಿ ಹೇಮಾವತಿ ಸಹಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.ಇದೇ ಸಂದರ್ಭ ಶಾಲಾ ಮಕ್ಕಳಿಗೆ ನೋಟ್ ಪುಸ್ತಕವನ್ನು ವಿತರಿಸಲಾಯಿತು.

PREV

Recommended Stories

ಬಾಗಲಕೋಟೆ ತೋಟಗಾರಿಕಾ ವಿಜ್ಞಾನ ವಿವಿಗೆ ಅನುದಾನ: ಸಚಿವ
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ