ಕುಟುಂಬದ ನಿರ್ವಹಣೆ ಜತೆಗೆ ಆರೋಗ್ಯಕ್ಕೂ ಒತ್ತು ನೀಡಿ

KannadaprabhaNewsNetwork |  
Published : Sep 25, 2025, 01:00 AM IST
24ಕೆಪಿಎಲ್24 ಹಿರೇವಂಕಲಕುಂಟಾ ಗ್ರಾಮದ ಆಸ್ಪತ್ರೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮ | Kannada Prabha

ಸಾರಾಂಶ

ಗೃಹಿಣಿ ಅಥವಾ ಉದ್ಯೋಗಸ್ಥ ಮಹಿಳೆ,ಯಾರೇ ಆದರೂ ತಮ್ಮ ಕುಟುಂಬದ ಪೋಷಣೆಗೆ ಮೊದಲ ಆದ್ಯತೆ

ಕೊಪ್ಪಳ: ಮಹಿಳೆಯರು ಕುಟುಂಬದ ಪೋಷಣೆಯೊಂದಿಗೆ ತಮ್ಮ ಆರೋಗ್ಯಕ್ಕೂ ಆದ್ಯತೆ ನೀಡಿದರೆ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಹಿರೇವಂಕಲಕುಂಟಾ ಸಂಯುಕ್ತಾಶ್ರಯದಲ್ಲಿ ಹಿರೇವಂಕಲಕುಂಟಾ ಗ್ರಾಮದ ಆಸ್ಪತ್ರೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮ ಹಾಗೂ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗೃಹಿಣಿ ಅಥವಾ ಉದ್ಯೋಗಸ್ಥ ಮಹಿಳೆ,ಯಾರೇ ಆದರೂ ತಮ್ಮ ಕುಟುಂಬದ ಪೋಷಣೆಗೆ ಮೊದಲ ಆದ್ಯತೆ ನೀಡುತ್ತಾರೆ. ಮನೆ ಕೆಲಸ, ಮಕ್ಕಳ, ಕುಟುಂಬದ ಪೋಷಣೆ ಹಾಗೂ ಉದ್ಯೋಗದ ಜವಾಬ್ದಾರಿಗಳ ನಡುವೆ ವೈಯಕ್ತಿಕವಾಗಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಕಡಿಮೆ. ಆದರೆ ಮನೆಯ ಮೂಲ ಆಧಾರ ಸ್ತಂಭವಾದ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಮೊದಲ ಆದ್ಯತೆ ನೀಡಿ, ತಾವು ಆರೋಗ್ಯವಂತರಾದರೆ ಇಡೀ ಕುಟುಂಬ, ಸಮಾಜ ಆರೋಗ್ಯ ಪೂರ್ಣವಾಗಿರುತ್ತದೆ ಎಂದು ಹೇಳಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರವೀಂದ್ರನಾಥ್ ಎಂ.ಎಚ್.ಮಾತನಾಡಿ, ಕುಟುಂಬ ಕಲ್ಯಾಣ ಕಾರ್ಯಕ್ರಮದ ತಾತ್ಕಾಲಿಕ ಮತ್ತು ಶಾಶ್ವತ ವಿಧಾನ, ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಶಿಕ್ಷಾರ್ಹ ಅಪರಾಧ, ಆರೋಗ್ಯವಂತ ಕುಟುಂಬ ನಡೆಸಲು ಜೀವನ ಕೌಶಲ್ಯ ಅಳವಡಿಸಿಕೊಳ್ಳುವ ಕುರಿತು ವಿವರವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮಗಳ ಅನುಷ್ಠಾಣಾಧಿಕಾರಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಪ್ರಕಾಶ ವಿ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಜಿಲ್ಲಾ ಕುಷ್ಠರೋಗ ನಿರ್ಮೂಲಣಾ ಅಧಿಕಾರಿ ಡಾ. ಪ್ರಕಾಶ ಎಚ್., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗೋನಾಳು ಕುಮಾರಸ್ವಾಮಿ, ಸ್ತ್ರೀ ರೋಗ ತಜ್ಞರಾದ ಡಾ. ಈಶ್ವರ ಸವಡಿ, ಗ್ರಾಪಂ ಅಧ್ಯಕ್ಷ ಹುಲಿಗೆಮ್ಮ ತಳವಾರ, ಉಪಾಧ್ಯಕ್ಷ ಮಂಜುನಾಥ ಶಾಸ್ತ್ರಿಮಠ, ತಾಲೂಕು ಆರೋಗ್ಯಾಧಿಕಾರಿ ಡಾ. ನೇತ್ರಾವತಿ, ಆಡಳಿತ ವೈದ್ಯಾಧಿಕಾರಿ ಡಾ. ದಯಾನಂದ ಸ್ವಾಮಿ, ಅರವಳಿಕೆ ತಜ್ಞ ಡಾ.ಸುಜಾತ, ಡಾ.ತುಳಜೆರಾಮ್ ಘಾಟಗೆ ಹಾಗೂ ವಿವಿಧ ತಜ್ಞವೈದ್ಯರು, ವೈದ್ಯಾಧಿಕಾರಿಗಳು, ಆರೋಗ್ಯ ಶಿಕ್ಷಣಾಧಿಕಾರಿಗಳು, ವಿವಿಧ ವೃಂದದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ