ಅಲ್ಪಸಂಖ್ಯಾತರ ಯೋಜನೆ ಅನುಷ್ಠಾನಕ್ಕೂ ಒತ್ತು ನೀಡಿ

KannadaprabhaNewsNetwork |  
Published : Aug 15, 2025, 01:00 AM IST
13ಕೆಪಿಎಲ್35 ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ | Kannada Prabha

ಸಾರಾಂಶ

ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್‌, ಸಿಖ್, ಪಾರ್ಸಿ ಬೌದ್ಧ ಸಮುದಾಯಗಳಗಳಿಗೆ ಇಲಾಖಾವಾರು ವಿವಿಧ ಯೋಜನೆಗಳಡಿ ನಿಗದಿಪಡಿಸಿದ ಗುರಿಗಳಂತೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಬೇಕು.

ಕೊಪ್ಪಳ:

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಇಲಾಖೆಗಳು ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಲ್ಪಸಂಖ್ಯಾತ ಸಮುದಾಯದವರನ್ನು ಮುಖ್ಯವಾಹಿನಿಗೆ ತರಲು ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್‌, ಸಿಖ್, ಪಾರ್ಸಿ ಬೌದ್ಧ ಸಮುದಾಯಗಳಗಳಿಗೆ ಇಲಾಖಾವಾರು ವಿವಿಧ ಯೋಜನೆಗಳಡಿ ನಿಗದಿಪಡಿಸಿದ ಗುರಿಗಳಂತೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಬೇಕು. ವಿದ್ಯಾರ್ಥಿಗಳಿಗೆ ಅರಿವು ಯೋಜನೆ ಹಾಗೂ ಆರ್ಥಿಕವಾಗಿ ಸಬಲೀಕರಣಗೊಳಿಸಲು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸವ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ, ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದೆ. ಇದರ ಸದುಪಯೋಗ ಅರ್ಹ ಫಲಾನುಭವಿಗಳಿಗೆ ಸಿಗಬೇಕು. ಈ ಹಿನ್ನೆಲೆಯಲ್ಲಿ ಯೋಜನೆ ಮತ್ತು ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಕ್ರಮ ವಹಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಇಲಾಖೆಗಳ ಮೂಲಕ ಅಲ್ಪಸಂಖ್ಯಾತರಿಗಾಗಿಯೇ ಮೀಸಲಿಟ್ಟ ಅನುದಾನವನ್ನು ಸಹ ಅರ್ಹರಿಗೆ ತಲುಪಿಸಲು ಆಯಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ನಿವೇಶನ, ಮನೆ ಹಂಚಿಕೆ, ಸ್ವಯಂ ಉದ್ಯೋಗ ಯೋಜನೆ, ಗಂಗಾ ಕಲ್ಯಾಣ ಹಾಗೂ ವಿವಿಧ ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಪ್ರಚಾರ ಕಾರ್ಯಕ್ರಮಕೈಗೊಂಡು ಫಲಾನುಭವಿಗಳಿಗೆ ಸೂಕ್ತ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಹೇಳಿದರು.

ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ನಾಮ ನಿರ್ದೇಶಿತ ಸದಸ್ಯ ನಜೀರಸಾಬ್ ಮೂಲಿಮನಿ, ಮೆಹಬೂಬ್ ಪಾಷಾ ಮಾನ್ವಿ, ಎಂ.ಡಿ. ಸಿರಾಜ್ ಸಿದ್ದಾಪುರ, ಯೋಜನೆಗಳ ಅನುಷ್ಠಾನದ ಕುರಿತಂತೆ ವಿವಿಧ ವಿಷಯಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದರು.

ಸಭೆಯಲ್ಲಿ ಜಿಪಂ ಸಿಇಒ ವರ್ಣಿತ್ ನೇಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅಜ್ಮೀರ್ ಅಲಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!