ಜನಸ್ನೇಹಿ ಕಾರ್ಯಯೋಜನೆ ಅನುಷ್ಠಾನಕ್ಕೆ ಒತ್ತು: ವೆಂಕಟರಮಣಯ್ಯ

KannadaprabhaNewsNetwork |  
Published : Aug 25, 2026, 01:30 AM IST
ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಟಿ.ವೆಂಕಟರಮಣಯ್ಯ ಹಾಗೂ ಸದಸ್ಯರಾಗಿ ಕೃಷ್ಣಮೂರ್ತಿ, ಬೈರೇಗೌಡ, ಮುನಿರಾಜು ಅಧಿಕಾರ ವಹಿಸಿಕೊಂಡರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸ್ಥಾಪನೆಯಾದ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಸ್ಥಳೀಯ ಪ್ರದೇಶಾಭಿವೃದ್ದಿ ಹಾಗೂ ವ್ಯವಸ್ಥಿತ ಬಡಾವಣೆಗಳ ನಿರ್ಮಾಣ ಕಾರ್ಯಕ್ಕೆ ಒತ್ತಾಸೆಯಾಗಿದೆ ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು

ದೊಡ್ಡಬಳ್ಳಾಪುರ: ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸ್ಥಾಪನೆಯಾದ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಸ್ಥಳೀಯ ಪ್ರದೇಶಾಭಿವೃದ್ದಿ ಹಾಗೂ ವ್ಯವಸ್ಥಿತ ಬಡಾವಣೆಗಳ ನಿರ್ಮಾಣ ಕಾರ್ಯಕ್ಕೆ ಒತ್ತಾಸೆಯಾಗಿದೆ ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಸೋಮವಾರ ಪದಗ್ರಹಣ ಸ್ವೀಕರಿಸಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ ಪ್ರಾಧಿಕಾರ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ದೇಶನದಂತೆ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಈ ಬಗ್ಗೆ ಯಾವುದೇ ತಪ್ಪು ಕಲ್ಪನೆ ಬೇಡ. ಅನಗತ್ಯ ಅಪಪ್ರಚಾರಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.

ನಗರಗಳು ಅಡ್ಡಾದಿಟ್ಟಿಯಾಗಿ ಬೆಳೆಯುತ್ತಿದ್ದುದನ್ನು ಮನಗಂಡ ಸರ್ಕಾರ ನಗರ ಯೋಜನಾ ಪ್ರಾಧಿಕಾರಗಳನ್ನ ಅಸ್ತಿತ್ವಕ್ಕೆ ತಂದಿದೆ. ಪ್ರಾಧಿಕಾರದ ಪ್ರಕಾರ ನಗರಗಳು ವಿಶಾಲವಾದ ರಸ್ತೆ ಸೇರಿದಂತೆ ಮೂಲ ಸೌಲಭ್ಯಗಳನ್ನು ಒಳಗೊಂಡಿರಬೇಕು. ಕಾನೂನು ಪ್ರಕಾರವಾಗಿ ಸದಸ್ಯರು ಸೇರಿದಂತೆ ನಾನು ಆಡಳಿತ ನಡೆಸುವ ಮೂಲಕ ಜನರ ಕೆಲಸ ಮಾಡಲಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದು ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪದ ಬದ್ದತೆ ಇದೆ. ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದಲ್ಲಿ ಹೆಸರಘಟ್ಟ, ತೂಬಗೆರೆ ಸೇರಿದಂತೆ ತಾಲೂಕಿನ ಹೋಬಳಿಗಳಿದ್ದು, ಪ್ರತಿಯೊಬ್ಬರಿಗೆ ಒಂದೊಂದು ಬಾರಿ ಅವಕಾಶ ನೀಡುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ತಮ್ಮ ಅಧಿಕಾರಾವಧಿಯಲ್ಲಿ ಜನಸ್ನೇಹಿಯಾಗಿ ಕೆಲಸ ಮಾಡಲಾಗುವುದು. ಬಡವರು, ಕೂಲಿಕಾರರ ಪರವಾಗಿ ಕೆಲಸ ಮಾಡುವ ಉದ್ದೇಶವಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅವಕಾಶಗಳು ಪಕ್ಷದ ಕಾರ್ಯಕರ್ತರಿಗೆ ದೊರೆಯಲಿದೆ. ಅವಕಾಶ ದೊರೆತಾಗ ಜನಪರವಾಗಿ ಕೆಲಸ ಮಾಡುವುದು ಅಗತ್ಯ. ಹಾಗಾದಾಗ ಮಾತ್ರ ಮುಂದಿನ ದಿನಗಳಲ್ಲಿ ಅಧಿಕಾರ ಹಿಡಿಯಲು ಸಾಧ್ಯ ಎಂಬುದನ್ನು ಕಾರ್ಯಕರ್ತರ ಅರ್ಥ ಮಾಡಿಕೊಳ್ಳಬೇಕು ಎಂದರು.

ನೂತನ ಅಧ್ಯಕ್ಷರು-ಸದಸ್ಯರ ಅಧಿಕಾರ ಸ್ವೀಕಾರ:

ಇದೇ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಟಿ.ವೆಂಕಟರಮಣಯ್ಯ, ಸದಸ್ಯರಾಗಿ ಕೆ.ಎಂ.ಕೃಷ್ಣಮೂರ್ತಿ, ಎಂ.ಬೈರೇಗೌಡ ಮತ್ತು ಎಸ್‌.ಡಿ.ಮುನಿರಾಜು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ಚುಂಚೇಗೌಡ ಮತ್ತು ಸದಸ್ಯರಾದ ರಾಮಕೃಷ್ಣಯ್ಯ, ಅಪ್ಪಿ ವೆಂಕಟೇಶ್‌ ಮತ್ತು ಆಂಜನಮೂರ್ತಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ವಹಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಬೆಂ.ಗ್ರಾ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಮಂಜುನಾಥ ಅದ್ದೆ, ನಗರಸಭೆ ಮಾಜಿ ಅಧ್ಯಕ್ಷ ಜೆ.ರಾಜೇಂದ್ರ, ಮಾಜಿ ಉಪಾಧ್ಯಕ್ಷ ಸೋಮರುದ್ರಶರ್ಮ, ಎಸ್.ದಯಾನಂದ್, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ರೇವತಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್.ಗೋವಿಂದರಾಜು, ಮುಖಂಡರಾದ ರವಿಸಿದ್ದಪ್ಪ, ವಿಶ್ವನಾಥರೆಡ್ಡಿ, ಚಿದಾನಂದ್, ಸಿದ್ದರಾಮಣ್ಣ, ರಾಜಗೋಪಾಲ್, ಕೆ.ಎಸ್.ರವಿಕುಮಾರ್, ಆಂಜನಪ್ಪ, ನಾಗವೇಣಿ, ಮಮತ, ಶೋಭಾ, ತಾಪಂ ಮಾಜಿ ಅಧ್ಯಕ್ಷ ನಾಗರಾಜ್, ನಾರಾಯಣಗೌಡ ಇತರರು ಉಪಸ್ಥಿತರಿದ್ದರು.

24ಕೆಡಿಬಿಪಿ4- ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಟಿ.ವೆಂಕಟರಮಣಯ್ಯ ಹಾಗೂ ಸದಸ್ಯರಾಗಿ ಕೃಷ್ಣಮೂರ್ತಿ, ಬೈರೇಗೌಡ, ಮುನಿರಾಜು ಅಧಿಕಾರ ವಹಿಸಿಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲಿನ ಪ್ರೋತ್ಸಾಹ ಧನ 5ರಿಂದ 7ರುಗೆ ಹೆಚ್ಚಳ ಸಾಧ್ಯತೆ
ಬೇಸಿಗೆಗೆ ಸತತ 120 ದಿನ ಭದ್ರಾ ನೀರು ಹರಿಸಿ