ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಪಂ ನೂತನ ಸಭಾಭವನದಲ್ಲಿ ವಿಶೇಷ ಗ್ರಾಮ ಪಂಚಾಯತ್ ಯೋಜನೆ ಕುರಿತು ಜರುಗಿದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಪಂಗಳು ಗ್ರಾಮಗಳ ಸ್ಥಳೀಯ ಅಗತ್ಯಗಳನ್ನು ಗುರುತಿಸಿ, ಜನರ ಸಹಭಾಗಿತ್ವದೊಂದಿಗೆ ಯೋಜಿತ ಹಾಗೂ ಆದ್ಯತೆಯ ಆಧಾರದ ಮೇಲೆ ಅಭಿವೃದ್ಧಿ ಕ್ರಿಯಾ ಯೋಜನೆಗಳನ್ನು ರೂಪಿಸಬೇಕು. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಯೋಜನೆಗಳು ಹಾಗೂ ಲಭ್ಯವಿರುವ ಸಂಪನ್ಮೂಲಗಳನ್ನು ಸಮನ್ವಯಗೊಳಿಸಿ, ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದರು.
ಮುಂದಿನ ಸಾಲಿನಲ್ಲಿ ಕೈಗೊಳ್ಳಬೇಕಾದ ವಿಬಿಜಿ-ರಾಮಜಿ ಕಾಮಗಾರಿಗಳ ಅಗತ್ಯ ಹಾಗೂ ಆದ್ಯತೆಗಳನ್ನು ಗುರುತಿಸಲು ಅ.2ರಂದು ಪ್ರತಿಯೊಂದು ಗ್ರಾಪಂನಲ್ಲೂ ಗ್ರಾಮಸಭೆ ನಡೆಸಬೇಕು. ಗ್ರಾಮಸಭೆಯಲ್ಲಿ ಗ್ರಾಮಸ್ಥರ ಭಾಗವಹಿಸುವಿಕೆಯೊಂದಿಗೆ ಗ್ರಾಮದ ಅಗತ್ಯಗಳನ್ನು ಗುರುತಿಸಿ, ಅರ್ಹ ಫಲಾನುಭವಿಗಳು ಹಾಗೂ ಅಗತ್ಯವಿರುವ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಗುರುತಿಸಿ, ಆದ್ಯತೆ ಪಟ್ಟಿಯನ್ನು ಸಿದ್ಧಪಡಿಸಬೇಕು. ಮುಂದಿನ ಸಾಲಿನ ಯೋಜನೆಯನ್ನು ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ರೂಪಿಸಿ, ಗ್ರಾಮಸಭೆ ಅನುಮೋದನೆಯೊಂದಿಗೆ ಮುಂದಿನ ಹಂತದ ಅನುಷ್ಠಾನಕ್ಕೆ ಕ್ರಮವಹಿಸಲು ತಿಳಿಸಿದರು.ಜಿಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ ಮಾತನಾಡಿ, ವಿಶೇಷ ಗ್ರಾಮ ಯೋಜನೆ ಉದ್ದೇಶ, ಯೋಜನೆ ರೂಪಿಸುವ ವಿಧಾನ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳು, ಸ್ಥಳೀಯ ಅಗತ್ಯಗಳ ಗುರುತಿಸುವಿಕೆ, ಸಂಪನ್ಮೂಲಗಳ ಸಮರ್ಪಕ ಬಳಕೆ ಹಾಗೂ ವಿವಿಧ ಇಲಾಖೆಗಳ ಸಮನ್ವಯದ ಕುರಿತು ಸಮಗ್ರ ಮಾಹಿತಿ ನೀಡಿದರು.
ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಎಲ್ಲಾ ತಾಪಂ ಇಒಗಳು, ಸಹಾಯಕ ನಿರ್ದೇಶಕರು, ಪಿಡಿಒಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ವಿಶೇಷ ಗ್ರಾಪಂ ಯೋಜನೆ ಹಾಗೂ ವಿಬಿಜಿ-ರಾಮಜಿ ಯೋಜನೆಗಳ ಅನುಷ್ಠಾನದಲ್ಲಿ ಜನರ ಸಹಭಾಗಿತ್ವ, ಪಾರದರ್ಶಕತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಬೇಕು. ಗ್ರಾಮಸಭೆಯಲ್ಲಿ ಜನರಿಂದ ಬಂದ ಬೇಡಿಕೆಗಳನ್ನು ದಾಖಲಿಸಿ, ಅವುಗಳ ಆಧಾರದ ಮೇಲೆ ವೈಜ್ಞಾನಿಕ ಹಾಗೂ ಅಗತ್ಯಾಧಾರಿತ ಕ್ರಿಯಾಯೋಜನೆ ರೂಪಿಸಬೇಕು. ಆಯ್ಕೆಯಾದ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು.