ಕಂಪ್ಲಿ: ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಮಹಿಳೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ವಿವಿಧ ಮಹತ್ವದ ವಿಷಯಗಳನ್ನು ಚರ್ಚಿಸಲಾಯಿತು.
ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ವಸತಿ ನಿಲಯಗಳಲ್ಲಿ ಕಾರ್ಯ ನಿರ್ವಹಿಸುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಪೊಕ್ಸೋ ಕಾಯ್ದೆ ಕುರಿತು ತರಬೇತಿ ನೀಡುವುದು ಕಡ್ಡಾಯವಾಗಿದೆ. ಪೊಲೀಸ್ ಪರಿಶೀಲನಾ ಪ್ರಮಾಣಪತ್ರ ಪಡೆಯುವಂತೆ ಸೂಚಿಸಲಾಗಿದೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಏಳು ದಿನಗಳಿಗಿಂತ ಹೆಚ್ಚು ಕಾಲ ಶಾಲೆಗೆ ಗೈರಾಗಿರುವ ಮಕ್ಕಳ ಪಟ್ಟಿಯನ್ನು ಪಿಡಿಒಗಳಿಗೆ ನೀಡುವಂತೆ ಸೂಚಿಸಲಾಗಿದೆ. ಮಕ್ಕಳ ಶಿಕ್ಷಣ ಮತ್ತು ಸುರಕ್ಷತೆ ಕುರಿತು ನಿರಂತರ ನಿಗಾ ಇರಬೇಕೆಂದು ತಿಳಿಸಿದರು.ಅಪ್ರಾಪ್ತೆ ಗರ್ಭಿಣಿ ವಿಚಾರ:
ಕಾರ್ಯಕ್ರಮದಲ್ಲಿ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಜಿಲ್ಲಾ ಮಟ್ಟದ ಸಂಯೋಜಕಿ ಸೀತಾಮಹಾಲಕ್ಷ್ಮಿ, ತಾಲೂಕು ಸಂಯೋಜಕ ಕರಿಸ್ವಾಮಿ, ಮಕ್ಕಳ ಹಕ್ಕುಗಳ ನಿಗಾ ಘಟಕದ ಸದಸ್ಯ ಎಚ್.ಸಿ. ರಾಘವೇಂದ್ರ, ಸಂಯೋಜಕಿ ಲಕ್ಷ್ಮಿ, ಮಕ್ಕಳ ಸಹಾಯವಾಣಿ ಸಂಯೋಜಕ ಕೆ.ಆನಂದ, ಮಹಿಳಾ ಮೇಲ್ವಿಚಾರಕಿ ಲತೀಫಾಬೇಗಂ, ಇಸಿಒ ಎಂ. ರೇವಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.