ತಾಲೂಕುವಾರು ಅಭಿವೃದ್ಧಿ ಸೂಚ್ಯಂಕಕ್ಕೆ ಒತ್ತು ನೀಡಿ

KannadaprabhaNewsNetwork |  
Published : Apr 24, 2025, 12:37 AM IST
ಚಿತ್ರದುರ್ಗ ನಾಲ್ಕನೇ ಪುಟದ ಲೀಡ್   | Kannada Prabha

ಸಾರಾಂಶ

Emphasis on taluk-wise development index

-ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆ ಪೂರ್ವ ಸಿದ್ಧತೆಯಲ್ಲಿ ಡೀಸಿ ಸೂಚನೆ

-----

ಕನ್ನಡಪ್ರಭವಾರ್ತೆ ಚಿತ್ರದುರ್ಗ

ಆರ್ಥಿಕ ತಜ್ಞ ಪ್ರೊ.ಎಂ ಗೋವಿಂದ ರಾವ್ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಬೆಂಗಳೂರು ವಿಭಾಗ ಮಟ್ಟದ ಜಿಲ್ಲೆಗಳ ಜನಪ್ರತಿನಿಧಿಗಳು, ಆರ್ಥಿಕ ಮತ್ತು ಶೈಕ್ಷಣಿಕ ತಜ್ಞರು, ಕೈಗಾರಿಕಾ ಕ್ಷೇತ್ರದ ತಜ್ಞರೊಂದಿಗೆ ಸಂವಾದ ಸಭೆ ಏ.28 ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು ತಾಲೂಕುವಾರು ಸಮಗ್ರ ಅಭಿವೃದ್ಧಿ ಸೂಚ್ಯಂಕವನ್ನು ನಿರ್ಧರಿಸುವ ಅಂಶಗಳಿಗೆ ಒತ್ತು ನೀಡಿ, ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಈ ಹಿಂದೆ ಡಾ. ಡಿ.ಎಂ.ನಂಜುಂಡಪ್ಪ ಸಲ್ಲಿಸಿದ್ದ ವರದಿಯ ಅನುಷ್ಠಾನದಿಂದ ಅಭಿವೃದ್ಧಿ ಹೊಂದಿರುವ, ಹೊಂದದೇ ಇರುವ ತಾಲೂಕು ಗುರುತಿಸಿ, ಹೊಸದಾಗಿ ಸೂಚ್ಯಂಕವನ್ನು ಕಂಡು ಹಿಡಿದು, ಪ್ರಾದೇಶಿಕ ಅಸಮತೋಲನ ನಿವಾರಿಸಲು ರಾಜ್ಯ ಸರ್ಕಾರ ಆರ್ಥಿಕ ತಜ್ಞ ಪ್ರೊ. ಎಂ.ಗೋವಿಂದ ರಾವ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಿದೆ ಎಂದರು.

ಕೃಷಿ, ಆಹಾರ ಧಾನ್ಯ, ವಾಣಿಜ್ಯ ಬೆಳೆ ಪ್ರದೇಶ ಪ್ರಮಾಣ, ನೀರಾವರಿ ಮತ್ತು ಮಳೆ ಆಶ್ರಿತ ಪ್ರದೇಶ ಪ್ರಮಾಣ, ಲಿಂಗಾನುಪಾತ, ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಜನಸಂಖ್ಯೆ ಪ್ರಮಾಣ ಸೇರಿದಂತೆ ಸಮಗ್ರ ಅಭಿವೃದ್ಧಿ ಸೂಚ್ಯಂಕ ನಿಗದಿಪಡಿಸುವ ಅಂಶಗಳನ್ನು ನಿಖರವಾಗಿ ಸಂಗ್ರಹಿಸಿ, ವರದಿ ಸಿದ್ಧಪಡಿಸಬೇಕು ಎಂದು ಸೂಚನೆ ನೀಡಿದರು.

ಸಂವಾದ ಸಭೆಗೆ ಜಿಲ್ಲೆಯ ಆರ್ಥಿಕ ಮತ್ತು ಶೈಕ್ಷಣಿಕ ತಜ್ಞರು, ಕೈಗಾರಿಕಾ ತಜ್ಞರನ್ನು ಆಹ್ವಾನಿಸಿ, ಸಭೆಯಲ್ಲಿ ಪಾಲ್ಗೊವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬೆಂಗಳೂರು ವಿಭಾಗ ಮಟ್ಟದ ಜಿಲ್ಲೆಗಳಿಂದ ಆಗಮಿಸುವ ಲೋಕಸಭಾ ಸದಸ್ಯರು, ವಿಧಾನಸಭೆ ಮತ್ತು ವಿಪ ಸದಸ್ಯರ ವಿವರ ಸಂಗ್ರಹಿಸಿ, ಸೂಕ್ತ ಶಿಷ್ಟಾಚಾರ ಕಲ್ಪಿಸುವುದು, ವಾಸ್ತವ್ಯಕ್ಕೆ ವ್ಯವಸ್ಥೆ, ಊಟೋಪಹಾರದ ವ್ಯವಸ್ಥೆ ಅಲ್ಲದೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಆನಂದ್, ಜಿಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಡಿಹೆಚ್‍ಒ ಡಾ ರೇಣುಪ್ರಸಾದ್, ಡಿಡಿಪಿಐ ಮಂಜುನಾಥ್, ಡಿಡಿಪಿಯು ಪುಟ್ಟಸ್ವಾಮಿ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.--

ಪೋಟೋ ಕ್ಯಾಪ್ಸನ್

ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಚಿತ್ರದುರ್ಗಕ್ಕೆ ಆಗಮಿಸುತ್ತಿರುವ ಹಿನ್ನಲೆ ಜಿಲ್ಲಾಧಿಕಾರಿ ವೆಂಕಟೇಶ್ ಅಧಿಕಾರಿಗಳೊಂದಿಗೆ ಸಭೆ ಮಾಡಿದರು.

-------

ಪೋಟೋ ಫೈಲ್ ನೇಮ್- 23ಸಿಟಿಡಿ9

---

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?