ಕನ್ನಡಪ್ರಭ ವಾರ್ತೆ ಕೊಪ್ಪಳ
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾದ ಮೇಲೆ ಅಕ್ಷರ ಆವಿಷ್ಕಾರ, ಉದ್ಯೋಗ ಆವಿಷ್ಕಾರ, ಆರೋಗ್ಯ ಆವಿಷ್ಕಾರ ಸೇರಿದಂತೆ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಕೆಕೆಆರ್‌ಡಿಬಿ ಅನುದಾನದಲ್ಲಿ ಶೇ. 25 ಹಣವನ್ನು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ ಎಂದರು.
ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲೂಕು ಹಾಗೂ ಅತೀ ಹಿಂದುಳಿದ ತಾಲೂಕುಗಳಲ್ಲಿ ನಮ್ಮ ಭಾಗದ 21 ತಾಲೂಕುಗಳು ಸೇರಿವೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ 41 ತಾಲೂಕುಗಳಿದ್ದು, ಇವುಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ₹45 ಕೋಟಿ ವೆಚ್ಚದಲ್ಲಿ 112 ಬಸ್‌ಗಳನ್ನು ಖರೀದಿಸುತ್ತಿದ್ದೇವೆ. ನಮ್ಮ ಭಾಗದಲ್ಲಿ 2618 ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದರು.ಕಳೆದ 10 ವರ್ಷಗಳಲ್ಲಿ ಕೆಕೆಆರ್‌ಡಿಬಿಯಿಂದ ಕೊಪ್ಪಳ ಜಿಲ್ಲೆಯ ಒಟ್ಟು 4718 ಕಾಮಗಾರಿಗಳಲ್ಲಿ 3769 ಕಾಮಗಾರಿಗಳು ಪೂರ್ಣಗೊಂಡಿದ್ದು, 864 ಕಾಮಗಾರಿಗಳು ಪ್ರಗತಿಯಲ್ಲಿವೆ. 2024- 25ನೇ ಸಾಲಿಗೆ ಕೊಪ್ಪಳ ಜಿಲ್ಲೆಯ 5 ತಾಲೂಕುಗಳಿಗೆ ₹238 ಕೋಟಿಯನ್ನು ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆ ಅಡಿಯಲ್ಲಿ ನೀಡಲಾಗಿದೆ ಎಂದರು.
ನಿನ್ನೆ ಅಧಿಕಾರಿಗಳ ಜತೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಭೆ ಮಾಡಲಾಗಿದ್ದು, ಕೆಕೆಆರ್‌ಡಿಬಿಯಿಂದ ನಡೆಯುತ್ತಿರುವ ರಸ್ತೆ, ವಸತಿ ಶಾಲಾ ಕಟ್ಟಡಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ರಂಗಮಂದಿರ ಸೇರಿ ಇತರೆ ಮೈಕ್ರೋ ಹಾಗೂ ಮ್ಯಾಕ್ರೋ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಹಲವಾರು ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ವಿವಿಧ ಕಾಮಗಾರಿಗಳ ಪರಿಶೀಲನೆ: