ಕೃಷಿ ಪದ್ಧತಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆಗೆ ಒತ್ತು ನೀಡಲಿ: ಡಾ. ಹನುಮಂತಪ್ಪ

KannadaprabhaNewsNetwork |  
Published : Dec 21, 2025, 03:15 AM IST
ಬಳ್ಳಾರಿ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ 25ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯನ್ನು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಹನುಮಂತಪ್ಪ ಅವರು ಉದ್ಘಾಟಿಸಿದರು.  | Kannada Prabha

ಸಾರಾಂಶ

ರೈತರ ಆದಾಯ ಹೆಚ್ಚಿಸಲು ವಿಜ್ಞಾನಿಗಳು ಬಹುಬೆಳೆ ಪದ್ಧತಿಯ ತರಬೇತಿ ಕಾರ್ಯಕ್ರಮ ಆಯೋಜಿಸಿ, ಮಾಹಿತಿ ನೀಡಬೇಕು ಎಂದು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಹನುಮಂತಪ್ಪ ತಿಳಿಸಿದರು.

ಬಳ್ಳಾರಿ: ಜಿಲ್ಲೆಯಲ್ಲಿ ರೈತರ ಆದಾಯ ಹೆಚ್ಚಿಸಲು ವಿಜ್ಞಾನಿಗಳು ಬಹುಬೆಳೆ ಪದ್ಧತಿಯ ತರಬೇತಿ ಕಾರ್ಯಕ್ರಮ ಆಯೋಜಿಸಿ, ಮಾಹಿತಿ ನೀಡಬೇಕು ಎಂದು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಹನುಮಂತಪ್ಪ ತಿಳಿಸಿದರು.

ಬಳ್ಳಾರಿ ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ 25ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದರು.

ವಿಜ್ಞಾನಿಗಳು ಸ್ಥಳೀಯವಾಗಿ ಅಗತ್ಯವಿರುವ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅದರ ಆಧಾರದ ಮೇಲೆ ಮುಂದಿನ ವರ್ಷದ ಯೋಜನೆ ರೂಪಿಸಬೇಕು. ಈ ಉನ್ನತ ಮಟ್ಟದ ಸಭೆ ಜಿಲ್ಲೆಯ ಕಳೆದ ವರ್ಷದ ಕೃಷಿ ಪ್ರಗತಿಯನ್ನು ಪರಾಮರ್ಶಿಸಲು ಮತ್ತು ಮುಂಬರುವ ಬೆಳೆ ಹಂಗಾಮುಗಳ ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸಲು ಒಂದು ಕಾರ್ಯತಂತ್ರದ ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ಎ.ಆರ್. ಕುರುಬರ್ ಅವರು ಮಾತನಾಡಿ, ಪ್ರಯೋಗಾಲಯದ ಸಂಶೋಧನೆಗಳನ್ನು ಹೊಲಗದ್ದೆಗಳಿಗೆ ತಲುಪಿಸುವಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ನಿರ್ಣಾಯಕ ಪಾತ್ರ ವಹಿಸಬೇಕು.

ಬಳ್ಳಾರಿ ಭಾಗದ ರೈತರ ಆದಾಯ ಹೆಚ್ಚಿಸಲು ವಿಜ್ಞಾನಿಗಳು ರೈತರ ಹೊಲದ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು ಮತ್ತು ಆಧುನಿಕ ತಂತ್ರಜ್ಞಾನದ ಅಳವಡಿಕೆಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ್, ಬಳ್ಳಾರಿ ಜಿಲ್ಲೆಯಲ್ಲಿ 1.13 ಲಕ್ಷ ಹೆಕ್ಟೇರ್ ಪ್ರದೇಶ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಒಳಪಡುತ್ತದೆ. ಇಲ್ಲಿನ ರೈತರು ನಿಯಮಿತವಾಗಿ ಕೇವಲ ಭತ್ತವನ್ನು ಮಾತ್ರ ಬೆಳೆಯುತ್ತಿದ್ದಾರೆ. ಪ್ರಸ್ತುತದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳನ್ನು ಬಳಸುತ್ತಿದ್ದಾರೆ. ಈ ಗಂಭೀರ ಪರಿಸ್ಥಿತಿಯಲ್ಲಿ ರಾಸಾಯನಿಕಗಳ ಬಳಕೆಯನ್ನು ಕಡಿಮೆ ಮಾಡಬೇಕು. ರಾಸಾಯನಿಕ ಗೊಬ್ಬರ ಮತ್ತು ಜೈವಿಕ ಕೀಟನಾಶಕಗಳನ್ನು ಉತ್ತೇಜಿಸುವ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.

ಬಳ್ಳಾರಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಪಾಲಯ್ಯ ಪಿ. ಅವರು, ಪ್ರಸ್ತುತ ವರ್ಷದಲ್ಲಿ ಕೈಗೊಂಡ ಕಾರ್ಯಕ್ರಮಗಳ ವರದಿ ಮತ್ತು 2024-25ರ ಕೃಷಿ ವಿಜ್ಞಾನ ಕೇಂದ್ರದ ಚಟುವಟಿಕೆಗಳನ್ನು ಮಂಡಿಸಿದರು.

ಗೃಹ ವಿಜ್ಞಾನಿ ಡಾ. ರಾಜೇಶ್ವರಿ ಅವರು ಗಣ್ಯರನ್ನು ಸ್ವಾಗತಿಸಿದರು. ಮಣ್ಣು ವಿಜ್ಞಾನಿ ಡಾ.ರವಿ ಎಸ್. ಅವರು ವಂದಿಸಿದರು.

ಸಭೆಯಲ್ಲಿ ಹಗರಿ ಕೃಷಿ ಕಾಲೇಜಿನ ಪ್ರಭಾರ ಅಧಿಕಾರಿ ಡಾ. ರವಿ ಶಂಕರ್, ಪಶು ವೈದ್ಯಕೀಯ ಪ್ರಾಧ್ಯಾಪಕ ಡಾ. ರಮೇಶ್, ರಾಯಚೂರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಸಹ ಸಂಶೋಧಕ ಡಾ. ಜಯಪ್ರಕಾಶ್ ನಿಡುಗುಂದಿ, ನಬಾರ್ಡ್ ಅಧಿಕಾರಿ ಯುವರಾಜ್ ಸೇರಿದಂತೆ ತೋಟಗಾರಿಕೆ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗಳ ಅಧಿಕಾರಿಗಳು, ಸಭೆಯ ಸದಸ್ಯರು ಹಾಗೂ ಪ್ರಗತಿಪರ ರೈತರಾದ ಸಮುದ್ರರಾಜ್, ರವಿಕುಮಾರ್ ಹಾಗೂ ವಿವಿಧ ಇಲಾಖೆಗಳ ಪ್ರತಿನಿಧಿಗಳು, ರೈತರು ಮತ್ತು ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ