ವಸತಿ ಶಾಲೆಗಳ ಕಾಯಂ ನೌಕರರ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಮನವಿ ಸಲ್ಲಿಕೆ

KannadaprabhaNewsNetwork |  
Published : Jun 03, 2025, 12:34 AM IST
ವಸತಿ ಶಾಲೆಗಳ ಖಾಯಂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಕ್ಕೆ ಮನವಿ | Kannada Prabha

ಸಾರಾಂಶ

ವಸತಿ ಶಾಲೆಗಳ ಕಾಯಂ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳ ನೌಕರರ ಸಂಘ ಕೊಡಗು ಜಿಲ್ಲಾ ಘಟಕದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಸತಿ ಶಾಲೆಗಳ ಕಾಯಂ ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳ ನೌಕರರ ಸಂಘ, ಕೊಡಗು ಜಿಲ್ಲಾ ಘಟಕದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಮಾತನಾಡಿದ ಸಂಘ ಅಧ್ಯಕ್ಷ ಅಲೋಕ್, ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧೀನದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ರಾಜ್ಯಾದ್ಯಂತ ೮೨೧ ವಸತಿ ಶಾಲೆ/ಕಾಲೇಜುಗಳು ಕಾರ್ಯನಿರ್ವಹಿಸುತ್ತಿದೆ. ೨ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವಸತಿಯುತ ಶಿಕ್ಷಣವನ್ನು ಉಚಿತವಾಗಿ ಪಡೆಯುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅದರಲ್ಲೂ ವಿಶೇಷವಾಗಿ ಪ.ಜಾತಿ, ಪ.ವರ್ಗ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ರಾಜ್ಯಾದ್ಯಂತ ಸುಮಾರು ೬೮೦೦ಕ್ಕಿಂತ ಅಧಿಕ ಕಾಯಂ ನೌಕರರು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಪ್ರತಿ ವರ್ಷವೂ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ವಸತಿ ಶಾಲೆ ವಿದ್ಯಾರ್ಥಿಗಳು ಮೇಲುಗೈ ಸಾಧಿಸುತ್ತಿದ್ದು, ರಾಜ್ಯಮಟ್ಟದಲ್ಲಿ ಪ್ರಥಮ, ದ್ವಿತೀಯ ರ್‍ಯಾಂಕ್‌ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇದರ ಹಿಂದೆ ಸಿಬ್ಬಂದಿಯ ಅವಿರತ ಪರಿಶ್ರಮವಿದೆ ಎಂದು ವಿವರಿಸಿದರು.

ಕಾಯಂ ಬೋಧಕ-ಬೋಧಕೇತರ ಸಿಬ್ಬಂದಿ ಶ್ರಮದಿಂದ ಪ್ರತಿ ಬಾರಿ ಉತ್ತಮ ಫಲಿತಾಂಶ ಬರುತ್ತಿದ್ದು, ನವೋದಯ ವಿದ್ಯಾಲಯ ಮತ್ತು ಶಿಕ್ಷಣ ಇಲಾಖೆಯ ಶಾಲೆಗಳ ಸಿಬ್ಬಂದಿಗೆ ದೊರೆಯುವ ಹಲವು ಸೌಲಭ್ಯಗಳು ಕ್ರೈಸ್ ಕಾಯಂ ನೌಕರರಿಗೆ ಸಿಗುತ್ತಿಲ್ಲ. ಕೂಡಲೇ ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್ಸಿ-ಎಸ್ಟಿ, ಬಿಸಿ ವಸತಿ ಶಾಲೆಗಳನ್ನು ಸಿಬ್ಬಂದಿಯೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು. ಕಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಟಾನಗೊಳಿಸಬೇಕು. ಮರಣ ಮತ್ತು ನಿವೃತ್ತಿ ಉಪಧಾನ ಸೌಲಭ್ಯ ಒದಗಿಸಬೇಕು. ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯತಿ ನೀಡಬೇಕು. ಕಾಯಂ ನೌಕರರಿಗೆ ಶೇ.೧೦ ವಿಶೇಷ ಭತ್ಯೆ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಳಚೆ ನೀರಲ್ಲಿ ತಟ್ಟೆ ತೊಳೆದ ಪ್ರಕರಣ; ಶಿಕ್ಷಕಿ ಅಮಾನತು
ಅಲೆಮಾರಿ ಜನಾಂಗದವರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ಪಲ್ಲವಿ