ಹಾನಗಲ್ಲ: ಶಾಸಕ ಶ್ರೀನಿವಾಸ ಮಾನೆ ಅವರು ತಾಲೂಕಿನಲ್ಲಿ ನಿರುದ್ಯೋಗ ನಿವಾರಣೆಗೆ ಶ್ರಮ ವಹಿಸಿದ್ದು, ಉದ್ಯೋಗ ಸಮೃದ್ಧಿ ಕೇಂದ್ರದ ಮೂಲಕ ಇದುವರೆಗೆ 2 ಸಾವಿರಕ್ಕೂ ಹೆಚ್ಚು ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ನಿರಂತರವಾಗಿ ಸೂಕ್ತ ಮಾರ್ಗದರ್ಶನ ನೀಡಿ, ಅವಕಾಶ ಕಲ್ಪಿಸುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ತಾಪಂ ಕೆಡಿಪಿ ಸದಸ್ಯ ಮಹ್ಮದ್‌ಹನೀಫ್ ಬಂಕಾಪೂರ ತಿಳಿಸಿದರು.ಇಲ್ಲಿನ ಗುರುಭವನದಲ್ಲಿನ ಉದ್ಯೋಗ ಸಮೃದ್ಧಿ ಕೇಂದ್ರದಲ್ಲಿ ಬೆಂಗಳೂರಿವ ಬಿವಿಜಿ ಸಂಸ್ಥೆಯ ಆಶ್ರಯದಲ್ಲಿ ವಾಹನ ಚಾಲಕರಿಗಾಗಿ ಆಯೋಜಿಸಿದ್ದ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ವೀರಶೈವ ಲಿಂಗಾಯತ ಭವನಕ್ಕೆ ನಿವೇಶನ ನೀಡಲು ಆಗ್ರಹ
ಶಿಗ್ಗಾಂವಿ: ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ವಿವಿಧೋದ್ದೇಶಗಳಿಗಾಗಿ ಖಾಲಿ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ತಾಲೂಕು ಘಟಕದ ಪದಾಧಿಕಾರಿಗಳು ಪುರಸಭೆ ಅಧ್ಯಕ್ಷ ಸಿದ್ಧಾರ್ಥಗೌಡ ಪಾಟೀಲ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಂಸ್ಥೆಯು ವೀರಶೈವ ಲಿಂಗಾಯತ ಸಮುದಾಯದ ಪ್ರಾತಿನಿಧಿಕ ಸಂಸ್ಥೆಯಾಗಿದೆ. ೨ ಲಕ್ಷಕ್ಕೂ ಹೆಚ್ಚಿನ ಸದಸ್ಯ ಬಲ ಹೊಂದಿರುವ ಸಂಸ್ಥೆ ರಾಜ್ಯ ಘಟಕಗಳು, ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು ಸಮಾಜ ರಾಜ್ಯಗಳಲ್ಲಿದೆ. ಸಂಘಟನೆಯಲ್ಲಿ ಸಕ್ರಿಯವಾಗಿವೆ. ಪ್ರತಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ಭವನ ಮತ್ತು ವಿದ್ಯಾರ್ಥಿಗಳ ವಸತಿನಿಲಯ ನಿರ್ಮಿಸುವುದು ಮಹಾಸಭೆಯ ಗುರಿಯಾಗಿದೆ ಎಂದರು.ಮಹಾಸಭೆಯ ಶಿಗ್ಗಾಂವಿ ತಾಲೂಕು ಘಟಕವು ತಾಲೂಕಿನಲ್ಲಿ ವೀರಶೈವ ಲಿಂಗಾಯತ ಭವನ ಮತ್ತು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿ ಬೇಕಾಗಿರುವ ಉಚಿತ ವಸತಿನಿಲಯ, ಆಟದ ಮೈದಾನ, ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಭೂಮಿಯ ಅವಶ್ಯವಿದ್ದು, ಪುರಸಭೆ ವತಿಯಿಂದ ನಿವೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ರಾಗಿ, ಡಿ.ಎ. ಗೊಬ್ಬರ ಗುಪ್ಪಿ,ಮಾಲತೇಶ ಯಲಿಗಾರ, ಟಿ.ವಿ. ಸುರಗಿಮಠ, ಸಿದ್ದಣ್ಣ ಮೊರಬದ, ಉಮೇಶಗೌಡ ಪಾಟೀಲ, ಶಶಿಧರ ಸುರಗಿಮಠ, ಚಂದ್ರು ಜವಳಿ, ಜಿ.ಎನ್. ಯಲಿಗಾರ, ಪುರಸಭೆ ಸದಸ್ಯರು, ಮುಖ್ಯಾಧಿಕಾರಿ ಮಲ್ಲೇಶ ಆರ್. ಇದ್ದರು.