ಸ್ತ್ರೀಶಕ್ತಿ ಸಂಘಗಳನ್ನು ಆರ್ಥಿಕ ಸಬಲ ಮಾಡಿ: ಡಾ.ಅಂಶುಮಂತ್

KannadaprabhaNewsNetwork |  
Published : Jul 30, 2025, 12:45 AM IST
ನರಸಿಂಹರಾಜಪುರ ತಾಲೂಕು ಪಂಚಾಯಿತಿಯ ಸಾಮಾರ್ಥ್ಯ ಸೌಧದಲ್ಲಿ ಪಶು ಪಾಲನಾ ಇಲಾಖೆಯಿಂದ ನಡೆದ ರೈತರ ತರಬೇತಿ ಕಾರ್ಯಕ್ರಮದಲ್ಲಿ ಶಿವಮೊಗ್ಗ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿದರು. | Kannada Prabha

ಸಾರಾಂಶ

ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆಯಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ತರಬೇತಿ ನೀಡಿ ಮಹಿಳೆಯರನ್ನು ಬಲಪಡಿಸುವ ಕಾರ್ಯಕ್ರಮಗಳು ಅಗಬೇಕು ಎಂದು ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆಯಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ತರಬೇತಿ ನೀಡಿ ಮಹಿಳೆಯರನ್ನು ಬಲಪಡಿಸುವ ಕಾರ್ಯಕ್ರಮಗಳು ಅಗಬೇಕು ಎಂದು ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.

ಇಲ್ಲಿಯ ತಾಪಂ ಸಾಮರ್ಥ್ಯಸೌಧದಲ್ಲಿ ಪಶುಪಾಲನಾ ಮತ್ತು ಪಶು ವೈಧ್ಯಕೀಯ ಇಲಾಖೆ ಏರ್ಪಡಿಸಿದ್ದ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತರಬೇತಿ ಕಾರ್ಯಕ್ರಮಗಳು ರೈತರಿಗೆ ಅದರಲ್ಲೂ ಅತಿ ಮುಖ್ಯವಾಗಿ ಸ್ತ್ರೀ ಶಕ್ತಿ ಸಂಘಗಳನ್ನು ತಲುಪಬೇಕು. ಇದರಿಂದ ಅವರ ಕುಟುಂಬ ಮತ್ತು ಗ್ರಾಮದ ಅರ್ಥಿಕತೆ ಹಂತ, ಹಂತವಾಗಿ ಸುಧಾರಣೆಯಾಗುತ್ತದೆ. ಪ್ರಸ್ತುತ ದಿನಮಾನದಲ್ಲಿ ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ಯಂತಹ ರೋಗಗಳಿಂದ ರೈತರು ತೀವ್ರ ನಷ್ಟವನ್ನು ಅನುಭವಿಸುತ್ತಿದ್ದು ಲಾಭದಾಯಕ ಹೈನುಗಾರಿಕೆಯಂತಹ ಮುಂತಾದ ಪಶು ಪಾಲನಾ ಉದ್ಯಮಗಳ ಕುರಿತು ಅವರಿಗೆ ತರಬೇತಿ ಮತ್ತು ಉತ್ತೇಜನವನ್ನು ನೀಡಿ ಅವರನ್ನು ಅರ್ಥಿಕವಾಗಿ ಸಧೃಢರನ್ನಾಗಿಸಬೇಕು ಎಂದರು.

ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ಮಾತನಾಡಿ, ಇಲಾಖೆಯಿಂದ ರೈತರಿಗೆ ತರಬೇತಿ ನೀಡುತ್ತಿರುವುದು ಸ್ವಾಗತಾರ್ಹ. ಅನೇಕ ರೈತರಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೇಕೆ ಸಾಕಾಣಿಕೆಗೆ ಸಂಬಂಧಿಸಿದ ಮಾಹಿತಿಗಳು ಅಗತ್ಯವಾಗಿವೆ. ತರಬೇತಿ ಕಾರ್ಯಕ್ರಮಗಳು ಗ್ರಾಮ ಮಟ್ಟದಲ್ಲೂ ಆದರೆ ರೈತರಿಗೆ ಇನ್ನಷ್ಟು ಸಹಾಯವಾಗಲಿದೆ. ಇಲಾಖೆಯಿಂದ ರೈತರಿಗೆ ದೊರಕುವ ಸಹಾಯಧನದ ಬಗ್ಗೆ ಅರಿವನ್ನು ಮೂಡಿಸಬೇಕೆಂದರು.

ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪಶು ಇಲಾಖೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಎಸ್.ವಿ.ಪ್ರೀತಮ್ ಕುಮಾರ, ಪಶು ಇಲಾಖೆಯಿಂದ ಹೈನುಗಾರಿಕೆ ಸಂಬಂಧಿಸಿದಂತಹ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ರೈತರಿಗೆ ಉಪಯುಕ್ತವಾಗುವಂತಹ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ. ರೈತರು ಇಂತಹ ತರಬೇತಿಯಲ್ಲಿ ಪಾಲ್ಗೊಂಡು, ಹೈನುಗಾರಿಕೆ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದಲ್ಲಿ ಆರ್ಥಿಕವಾಗಿ ಸಧೃಢರಾಗಬಹುದಾಗಿದೆ ಎಂದರು.

ಬಸ್ರೀಕಟ್ಟೆ ಪಶು ವೈದ್ಯಾಧಿಕಾರಿ ಡಾ.ಸಿ.ಎಲ್.ಮಣಿಕಾಂತ ಶುದ್ಧ ಹಾಲು ಉತ್ಪಾದನೆ, ಗೋವಿನ ಪ್ರಸವ ಕಾಲದ ಮುಂಜಾಗೃತೆ ಬಗ್ಗೆ ಹಾಗೂ ಜಯಪುರ ಪಶು ವೈದ್ಯಾಧಿಕಾರಿ ಡಾ.ಬಿ.ಎಸ್.ಪವಿತ್ರ ಕರುಗಳ ಪಾಲನೆ, ಕೃತಕ ಗರ್ಭಧಾರಣೆ, ಮಲೆನಾಡು ಪ್ರದೇಶದಲ್ಲಿ ಜಾನುವಾರಿಗೆ ಸಾಮಾನ್ಯವಾಗಿ ಕಂಡುಬರುವ ರೋಗಗಳು ಮತ್ತು ಇಲಾಖೆಯ ಲಸಿಕಾ ಕಾರ್ಯಕ್ರಮಗಳ ಬಗ್ಗೆ ಹಾಗೂ ಬೇಲೂರು ಪಶು ವೈದ್ಯಾಧಿಕಾರಿ ಡಾ.ಎನ್.ಎಲ್.ಅಶೋಕ್ ಸುಧಾರಿತ ಕುರಿ ಮತ್ತು ಮೇಕೆ ಸಾಕಾಣಿಕೆ, ರಸಮೇವು ತಯಾರಿಕೆ ಮತ್ತು ಬಳಕೆ ಬಗ್ಗೆ ತರಬೇತಿಯನ್ನು ನೀಡಿದರು.

ಪಶು ಇಲಾಖೆಯ ಹಸು ಪರೀಕ್ಷಾಧಿಕಾರಿ ಶೇಷಾಚಲ ಹಾಗೂ ರೈತರು ಪಾಲ್ಗೊಂಡಿದ್ದರು.

PREV

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’