ಸಾಧನೆ ಮಾಡಲು ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿ

KannadaprabhaNewsNetwork | Published : Mar 9, 2025 1:48 AM

ಸಾರಾಂಶ

ಮಹಿಳೆಯರು ರಾಜಕೀಯ ಸೇರಿಂತೆ ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬರಲು ಆತ್ಮ ಸ್ಥೈರ್ಯ ತುಂಬಲು ಎಲ್ಲರೂ ಮುಂದಾಗಬೇಕೆಂದು ಪುರಸಭೆ ಅಧ್ಯಕ್ಷ ಎ. ಆರ್. ಅಶೋಕ್ ಹೇಳಿದರು. ಮಹಿಳೆ ಸ್ವಾವಲಾಂಬಿಯಾಗಿ ಬದುಕಲು ಸರ್ಕಾರ ಹಲವಾರು ಯೋಜನೆ ರೂಪಿಸಿದ್ದು ಸದುಪಯೋಗಪಡಿಸಿಕೊಳ್ಳಬೇಕು. ಮಹಿಳೆ ಒಂದು ಕ್ಷೇತ್ರಕ್ಕೆ ಸೀಮಿತರಾಗದೆ ಎಲ್ಲಾ ಕ್ಷೇತ್ರದಲ್ಲಿ ಪಾದಾರ್ಪಣೆ ಮಾಡಿ ಯಶಸ್ಸು ಪಡೆಯಬೇಕು. ಪ್ರತಿಯೊಬ್ಬರೂ ಮಹಿಳೆಯರಿಗೆ ಗೌರವ ಕೊಡಬೇಕು ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ಮಹಿಳೆಯರು ರಾಜಕೀಯ ಸೇರಿಂತೆ ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬರಲು ಆತ್ಮ ಸ್ಥೈರ್ಯ ತುಂಬಲು ಎಲ್ಲರೂ ಮುಂದಾಗಬೇಕೆಂದು ಪುರಸಭೆ ಅಧ್ಯಕ್ಷ ಎ. ಆರ್. ಅಶೋಕ್ ಹೇಳಿದರು.

ಒಕ್ಕಲಿಗ ಕಲ್ಯಾಣ ಮಂಟಪದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆ ಹಾಗೂ ಸಾವಿತ್ರಿಬಾಯಿ ಫುಲೆ ಸಾಧಕಿಯರ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆ ಸ್ವಾವಲಾಂಬಿಯಾಗಿ ಬದುಕಲು ಸರ್ಕಾರ ಹಲವಾರು ಯೋಜನೆ ರೂಪಿಸಿದ್ದು ಸದುಪಯೋಗಪಡಿಸಿಕೊಳ್ಳಬೇಕು. ಮಹಿಳೆ ಒಂದು ಕ್ಷೇತ್ರಕ್ಕೆ ಸೀಮಿತರಾಗದೆ ಎಲ್ಲಾ ಕ್ಷೇತ್ರದಲ್ಲಿ ಪಾದಾರ್ಪಣೆ ಮಾಡಿ ಯಶಸ್ಸು ಪಡೆಯಬೇಕು. ಪ್ರತಿಯೊಬ್ಬರೂ ಮಹಿಳೆಯರಿಗೆ ಗೌರವ ಕೊಡಬೇಕು ಎಂದರು.

ತಾಲೂಕು ಶಿಕ್ಷಣ ಕ್ಷೇತ್ರಾಧಿಕಾರಿ ರಾಜೇಗೌಡ ಮಾತನಾಡಿ, ಭವ್ಯ ಭಾರತದ ಮಹಿಳೆಯರ ಪಾತ್ರ ವಿದೇಶಗಳಲ್ಲೂ ಮೆಚ್ಚುಗೆ ಪಡೆದಿದೆ. ಹೆಣ್ಣು ಸಂಸಾರದ ಕಣ್ಣು, ಹೆಣ್ಣು ಮಕ್ಕಳನ್ನು ಪೂಜ್ಯ ರೀತಿಯಲ್ಲಿ ಗೌರವಿಸಬೇಕು. ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ ಎಂದರು.

ಪುರಸಭೆ ಉಪಾಧ್ಯಕ್ಷೆ ಉಷಾ ಸತೀಶ್ ಮಾತನಾಡಿ, ಲಿಂಗ ತಾರತಮ್ಯ ಬಿಡಬೇಕು, ಹೆಣ್ಣು ಸಂಸಾರದ ಕಣ್ಣು, ಮಹಿಳೆ ಇಲ್ಲದಿದ್ದರೆ ಸಂಸಾರ ಅಂಧಕಾರದಲ್ಲಿ ಮುಳುಗುತ್ತಿದ್ದು, ಅಂತಹ ಕುಟುಂಬ ಅಭಿವೃದ್ಧಿ ಹೊಂದಲು ಅಸಾಧ್ಯ, ಹೆಣ್ಣಿಗೆ ಗೌರವ ಕೊಟ್ಟರೆ ದೇವರಿಗೆ ಕೊಟ್ಟಂತೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ ವೈದ್ಯಧಿಕಾರಿಗೆ ಗೌರವ ಸಮರ್ಪಣೆ ಮಾಡಲಾಯಿತು. ವೇದಿಕೆಯಲ್ಲಿ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಸುಧಾ ಎಚ್. ಡಿ, ಕ್ಷೇತ್ರ ಸಮನ್ವಯಾಧಿಕಾರಿ ಶಿವ ಮರಿಯಪ್ಪ, ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ಅರೇಹಳ್ಳಿ ಡಾ. ಮಮತಾ, ಪ್ರೌಢ ಶಾಲಾ ಸಹ ಶಿಕ್ಷಕ ಸಂಘದ ಅಧ್ಯಕ್ಷ ರಾಜ ಮಲ್ಲನಾಯಕ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಪಾಲಾಕ್ಷ, ಶಿಕ್ಷಣ ಇಲಾಖೆ ಗಂಗಾಧರ್, ಸರೋಜ, ಮದುಮಾಲತಿ, ರಮೇಶ್, ಪಲ್ಲವಿ, ಇತರರು ಇದ್ದರು.

Share this article