ಕನ್ನಡಪ್ರಭ ವಾರ್ತೆ ಅರಸೀಕೆರೆ
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.85 ಮತ್ತು ಅದಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದ ಭೋವಿ ಸಮಾಜದ ವಿದ್ಯಾರ್ಥಿಗಳಿಗೆ ತಾಲೂಕು ಭೋವಿ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಸಮಾಜದ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗುವಂತೆ ಮುಂದಾಗಬೇಕು. ಶಿಕ್ಷಣದ ಮೂಲಕವೇ ಸಮಾಜದ ಅಭಿವೃದ್ಧಿ ಮತ್ತು ಸಬಲೀಕರಣ ಸಾಧ್ಯವಾಗುತ್ತದೆ ಎಂಬ ಸಂದೇಶವನ್ನು ಯುವಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುವ ವಿದ್ಯಾರ್ಥಿಗಳು ಜಾತಿ ದೃಢೀಕರಣ ಪತ್ರ, ಎರಡು ಭಾವಚಿತ್ರಗಳು, ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ಪ್ರತಿಗಳನ್ನು 9845006931, 9742447794 ಅಥವಾ 9742498619 ಸಂಖ್ಯೆಗಳ ವಾಟ್ಸಪ್‌ಗೆ ಕಳುಹಿಸುವಂತೆ ಮನವಿ ಮಾಡಿದರು.
ಪ್ರತಿಭಾ ಪುರಸ್ಕಾರಕ್ಕಾಗಿ ಹೆಸರು ನೋಂದಾಯಿಸಲು ಜುಲೈ 10 ಕೊನೆಯ ದಿನಾಂಕವಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದರು.