ಅಸಂಘಟಿತ ಕಾರ್ಮಿಕ ಕೂಡ ಆರ್ಥಿಕವಾಗಿ ಸಬಲರಾಗಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಜಾರಿಗೆ ತಂದಿದ್ದು, ಕೊಡಗಿನಲ್ಲೂ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮತ್ತು ವಿಶ್ವ ಕರ್ಮ ಯೋಜನೆಯ ರಾಜ್ಯ ಸಂಚಾಲಕ ಹಾಗೂ ಮಾಜಿ ಸಚಿವ ಎ. ರಾಮದಾಸ್ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಅಸಂಘಟಿತ ಕಾರ್ಮಿಕ ಕೂಡ ಆರ್ಥಿಕವಾಗಿ ಸಬಲರಾಗಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಜಾರಿಗೆ ತಂದಿದ್ದು, ಕೊಡಗಿನಲ್ಲೂ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮತ್ತು ವಿಶ್ವ ಕರ್ಮ ಯೋಜನೆಯ ರಾಜ್ಯ ಸಂಚಾಲಕ ಹಾಗೂ ಮಾಜಿ ಸಚಿವ ಎ. ರಾಮದಾಸ್ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವನಿಧಿ ಯೋಜನೆಯಡಿಯಲ್ಲಿ ಮೊದಲ ಹಂತವಾಗಿ 20 ಸಾವಿರ, ನಂತರ 50 ಸಾವಿರ ಹೀಗೆ ಹಂತ ಹಂತವಾಗಿ 10 ಲಕ್ಷ ರು.ವರೆಗೂ ಸಾಲ ಸೌಲಭ್ಯ ಸಿಗಲಿದೆ ಎಂದರು. ಈ ಯೋಜನೆಯನ್ನು ಬೀದಿಬದಿ ವ್ಯಾಪಾರಿಗಳು, ಪತ್ರಿಕಾ ವಿತರಕರು, ಡೆಲಿವರಿ ಬಾಯ್ಸ್, ಹೂ ಕಟ್ಟುವವರು, ಕೇಬಲ್ ಕೆಲಸಗಾರರು, ಡೆಕರೇಟರ್ಸ್, ಫೋಟೋ ಹಾಗೂ ವೀಡಿಯೋಗ್ರಾಫರ್ಸ್ ಸೇರಿದಂತೆ 23 ಬಗೆಯ ವೃತ್ತಿದಾರರು ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಫಲಾನುಭವಿಗಳ ಸರ್ವೇಗಾಗಿ ಸ್ಥಳೀಯ ಸಂಸ್ಥೆಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಮಡಿಕೇರಿ ನಗರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಆಧಾರ್ ಹಾಗೂ ಬ್ಯಾಂಕ್ ಪಾಸ್‌ಬುಕ್‌ಗಳೊಂದಿಗೆ ಫಲಾನುಭವಿಗಳು ನೋಂದಣಿ ಮಾಡಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ ಮತ್ತು ಹುಲ್ಲೂರಿಕೊಪ್ಪ ಮಾದಪ್ಪ ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.