ಪುರುಷ-ಮಹಿಳೆ ಸಹಭಾಗಿತ್ವದಿಂದ ಸಬಲೀಕರಣ: ಶಾಂತಿ ರಾಜು

KannadaprabhaNewsNetwork |  
Published : Mar 15, 2024, 01:21 AM IST
ಸಾಧಕರಿಗೆ ಸನ್ಮಾನ ಸಂದರ್ಭ | Kannada Prabha

ಸಾರಾಂಶ

ಮಾದಪಟ್ಟಣ ಸಮುದಾಯ ಭವನದಲ್ಲಿ ಮಾದಾಪಟ್ಟಣ ದೇವಿ ಸ್ತ್ರೀ ಶಕ್ತಿ ಮತ್ತು ವಿನಾಯಕ ಶ್ರೀ ಶಕ್ತಿ ಗುಂಪುಗಳ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ ರಾಜು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರಮಹಿಳೆಯರು ಪುರುಷರ ಸಹಭಾಗಿತ್ವದೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರತಿಯೊಬ್ಬರ ಸಬಲೀಕರಣ ಸಾಧ್ಯ ಎಂದು ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ ರಾಜು ಹೇಳಿದ್ದಾರೆ.

ಮಾದಪಟ್ಟಣ ಸಮುದಾಯ ಭವನದಲ್ಲಿ ನಡೆದ ಮಾದಾಪಟ್ಟಣ ದೇವಿ ಸ್ತ್ರೀ ಶಕ್ತಿ ಮತ್ತು ವಿನಾಯಕ ಶ್ರೀ ಶಕ್ತಿ ಗುಂಪುಗಳ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯ ಯೋಜನೆಗಳು ಸೇರಿದಂತೆ ಪ್ರತಿಯೊಂದು ಇಲಾಖೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳ ಬೇಕು ಎಂದರು.ಕುಶಾಲನಗರ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಪ್ರಮುಖರಾದ ಲಲಿತಾ ಕುಮಾರಿ ಮಾತನಾಡಿ, ಮನಸ್ಸಿನ ಏಕಾಗ್ರತೆ, ಉತ್ತಮ ಚಿಂತನೆಗಳು, ಸಮಾಜದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಮಾಹಿತಿ ಒದಗಿಸಿದರು.

ಸಾಧನೆ ಮಾಡಿದ 10 ಮಂದಿ ಮಹಿಳೆಯರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.

ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಗಂಗಮ್ಮ, ಈಶ್ವರಿ ವಿಶ್ವವಿದ್ಯಾಲಯದ ಸುರೇಶ್, ದೇವಿ ಶ್ರೀ ಶಕ್ತಿ ಗುಂಪಿನ ಅಧ್ಯಕ್ಷೆ ನಾಗರತ್ನ, ವಿನಾಯಕ ಗುಂಪಿನ ಶೋಭಾ, ಮಾದಾಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಗುಲ್ ಶಿರ್ ಬಾನು, ಅಂಗನವಾಡಿ ಕಾರ್ಯಕರ್ತೆಯರಾದ ನಾಗಮಣಿ , ಭವ್ಯಕುಮಾರಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

ಪದಾಧಿಕಾರಿಗಳ ನೇಮಕ:

ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಂಬಂಧ ಕೊಡಗು ಜಿಲ್ಲೆಗೆ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಅವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಸಂಜಯ ಜೀವಿಜಯ, ಶಾರಿ ಗಿರೀಶ, ಭೀಮಯ್ಯ ಕೆ.ಸಿ., ನಾಸೀರ್ ಸಿ.ಎ., ಪಂಕಜ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದೆ. ಹಾಗೆಯೇ ಕೃಷ್ಣ ಕುಟ್ಟಂಡ, ಅಣ್ಣಯ್ಯ, ಅಬ್ದುಲ್ ರಹೀಮಾನ್(ಬಾಪು), ಸುಂದರ್, ಬಶೀರ್ ಕೆ.ಎಂ., ಮುಸ್ತಾಪ ನೆಲ್ಲಿಹುದಿಕೇರಿ, ಹರಿ ಪ್ರಸಾದ್, ಪಿ.ಎಲ್.ಸುರೇಶ್, ಧನ್ಯ, ಕೆ.ಜಿ.ಪೀಟರ್, ವಿ.ಪಿ.ಶಶಿಧರ ಕುಶಾಲನಗರ, ಕಾಂತರಾಜ್ ಸೋಮವಾರಪೇಟೆ, ಎಂ.ಜಿ.ಮೋಹನ್ ದಾಸ್ ಮಡಿಕೇರಿ, ಜಾನ್ಸನ್ ವಿರಾಜಪೇಟೆ, ಪ್ರಶಾಂತ್ ಕೆ.ಎ. ಪೊನ್ನಂಪೇಟೆ ಇವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿದೆ. ಸದಸ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ ಇವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಿದೆ.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಮತ್ತು ಯುವ ನಿಧಿ ಯೋಜನೆಗಳು ಈಗಾಗಲೇ ಜಾರಿಗೊಂಡಿದ್ದು, ಈ ಗ್ಯಾರಂಟಿ ಯೋಜನೆಯ ಲಾಭ ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುತ್ತಿದೆಯೇ ಎಂಬ ಬಗ್ಗೆ ಮೇಲ್ವಿಚಾರಣೆಗಾಗಿ ಸಾಂಸ್ಥಿಕ ಕಾರ್ಯ ವಿಧಾನಗಳನ್ನು ಜಾರಿಗೆ ತರಲು ಕೊಡಗು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿಯನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ