ಮಕ್ಕಳ ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡಿ

KannadaprabhaNewsNetwork |  
Published : Nov 30, 2024, 12:48 AM IST
ಫೋಟೊ:೨೮ಕೆಪಿಸೊರಬ-೦೨ : ತಾಲೂಕಿನ ಯಲಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಗ್ರಾಮದ ಪ್ರಮುಖ ಶ್ರೀಪಾದ ಬಿಚ್ಚುಗತ್ತಿ ಉದ್ಘಾಟಿಸಿದರರು. | Kannada Prabha

ಸಾರಾಂಶ

ಯಲಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶ್ರೀಪಾದ ಬಿಚ್ಚುಗತ್ತಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಸೊರಬ

ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗೂ ಪ್ರೋತ್ಸಾಹ ನೀಡುವ ಮೂಲಕ ಅವರ ವಿಕಾಸಕ್ಕೆ ನೆರವಾಗಬೇಕು ಎಂದು ಮಲೆನಾಡು ಸಿರಿ ಸಂಸ್ಥೆಯ ಅಧ್ಯಕ್ಷ ರಾಜು ಹಿರಿಯಾವಲಿ ಹೇಳಿದರು.ಬುಧವಾರ ತಾಲೂಕಿನ ಯಲಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ತಾಲೂಕಿನ ಮೂಲೆ ಮೂಲೆಯಲ್ಲಿನ ಸರ್ಕಾರಿ ಶಾಲೆಗಳಿಗೆ ತೆರಳಿ ಅಲ್ಲಿನ ಕುಂದು ಕೊರತೆಗಳ ಬಗ್ಗೆ ವಿಚಾರಿಸುವ ಜತೆಗೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಮುಖೇನ ಅವರನ್ನು ಶಿಕ್ಷಣದತ್ತ ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ಸಹಕಾರವೂ ಗಮನಾರ್ಹವಾಗಿದೆ ಎಂದು ಹೇಳಿದರು.

ಮಲೆನಾಡು ಸಿರಿ ಸಂಸ್ಥೆಯ ರಾಮಚಂದ್ರ ಮಾತನಾಡಿ, ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜೊತೆಗೆ ನೈತಿಕ ಹೊಣೆಗಾರಿಕೆ ಜಾಗೃತಿ ಮೂಡಿಸಬೇಕು. ಗುರು ಹಿರಿಯರಿಗೆ ಗೌರವ ನೀಡುವ ಶಿಕ್ಷಣವೂ ಬೇಕಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಗ್ರಾಮದ ಪ್ರಮುಖ ಶ್ರೀಪಾದ ಬಿಚ್ಚುಗತ್ತಿ ಮಾತನಾಡಿ, ಕೇವಲ ಸರ್ಟಿಫಿಕೇಟ್ ಶಿಕ್ಷಣಕ್ಕಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆಯ ಪ್ರಮುಖ ಅಂಶಗಳನ್ನು ಮರೆತಿದ್ದೇವೆ. ಅವರಿಗೆ ಶುದ್ಧ ಗಾಳಿ, ನೀರು, ಆಹಾರ ಕೊಡುವಲ್ಲಿ ನಾವು ಸೋಲುತ್ತಿದ್ದೇವೆ ಎಂದು ವಿಷಾದಿಸಿದರು.

ಇದೇ ವೇಳೆ ಮಕ್ಕಳಿಗೆ ಪ್ಲಾಸ್ಟಿಕ್ ಮುಕ್ತ ಶಾಲೆಯನ್ನಾಗಿಸಲು ಪ್ರಮಾಣ ವಚನ ಬೋಧಿಸಲಾಯಿತು. ನಾಡುನುಡಿಯ ಬಿಂಬಿಸುವ ಚಿತ್ರ ರಚಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್, ಮಲೆನಾಡ ಸಿರಿ ಸದಸ್ಯರಾದ ರಾಮಚಂದ್ರ, ಪ್ರಮುಖರಾದ ಜಾನಕಪ್ಪ ವಡೆಯರ್, ಬುಕ್ಕೇಶ್, ಶಾಲಾ ಸಮಿತಿ ಸದಸ್ಯರು, ಪೋಷಕರು, ಮುಖ್ಯ ಶಿಕ್ಷಕ ನಾಗರಾಜ್, ಸಹ ಶಿಕ್ಷಕ ಸೋಮಶೇಖರ್ ಮುಂತಾದವರಿದ್ದರು.

PREV

Recommended Stories

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''