ಕನ್ನಡಪ್ರಭ ವಾರ್ತೆ ಕೊರಟಗೆರೆ
ಜೆಡಿಎಸ್ ಮುಖಂಡ ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ, ಪ್ರತಿಯೊಂದು ಹಳ್ಳಿಯಲ್ಲಿರುವ ಸಿರಿವಂತರು ಹಾಗೂ ಅನುಕೂಲಸ್ಥರು ತಮ್ಮ ಕೈಲಾದ ರೀತಿಯಲ್ಲಿ ಗ್ರಾಮಗಳ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ದೇವಸ್ಥಾನಗಳು ನಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಪರಂಪರೆಯನ್ನು ಉಳಿಸುವ ಕೇಂದ್ರಗಳಾಗಿವೆ. ಇದೇ ರೀತಿಯಲ್ಲಿ ಪ್ರತಿಯೊಂದು ಗ್ರಾಮದಲ್ಲೂ ಉತ್ತಮ ಶಾಲೆಗಳು ಇರಬೇಕು. ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ, ಸಂಸ್ಕೃತಿ ಹಾಗೂ ಆಚಾರ-ವಿಚಾರಗಳ ಅರಿವು ಮೂಡಿಸುವ ಜವಾಬ್ದಾರಿ ಪೋಷಕರು ಮತ್ತು ಸಮಾಜದ ಮೇಲಿದೆ ಎಂದು ಹೇಳಿದರು.
ಪರ್ವ ಗ್ರೂಪ್ ಸಂಸ್ಥಾಪಕ ಉದ್ಯಮಿ ನೀಲೇಶ್ ಮಾತನಾಡಿ, ನಾವು ಎಲ್ಲೇ ಇದ್ದರೂ, ಹೇಗೆ ಇದ್ದರೂ ಹುಟ್ಟಿದ ಗ್ರಾಮವನ್ನು ಮರೆಯಬಾರದು. ನಮ್ಮ ಗ್ರಾಮಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮಗಳ ಅಭಿವೃದ್ಧಿಗೆ ಹಣದ ಜತೆಗೆ ಸಮಯ, ಶ್ರಮ ಮತ್ತು ಮಾರ್ಗದರ್ಶನ ನೀಡುವ ಮೂಲಕವೂ ಸೇವೆ ಸಲ್ಲಿಸಬಹುದು. ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವುದು ಎಲ್ಲರ ಜವಾಬ್ದಾರಿ ಎಂದರು.ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಕೇನಹಳ್ಳಿ, ಗೋಕುಲ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದಲೂ ಸಹಸ್ರಾರು ಭಕ್ತರು ಆಗಮಿಸಿ ಕುಬೇರ ಗಣಪತಿಯ ದರ್ಶನ ಪಡೆದು ಪುನೀತರಾದರು. ಭಕ್ತರ ಹೆಚ್ಚಿನ ಸಂಖ್ಯೆಯ ಆಗಮನದಿಂದ ಇಡೀ ಸಂಕೇನಹಳ್ಳಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ವೆಂಕಟೇಶ್‌ಮೂರ್ತಿ, ಜೆಡಿಎಸ್ ತಾ ಅಧ್ಯಕ್ಷ ಕಾಮರಾಜು, ಬಿಜೆಪಿ ತಾ.ಅಧ್ಯಕ್ಷ ರುದ್ರೇಶ್, ಸೀಗೇಪಾಳ್ಯ ನಾಗರಾಜು, ಮಾವತ್ತೂರು ಮಂಜು, ಕಾಂತಣ್ಣ, ಸದಾಶಿವಯ್ಯ, ನಾಗಭೂಷಣ್, ಚಂದ್ರಣ್ಣ, ಮಮತ, ಮಧುಕುಮಾರ್, ಚಂದ್ರಶೇಖರ್, ಕಾಮಣ್ಣ, ಸೇರಿದಂತೆ ಊರಿನ ಹಿರಿಯ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.