ಅಂಗನವಾಡಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿಕೊಪ್ಪಳ:
ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಿಕೆ ಟಾಟಾ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮದಡಿಯಲ್ಲಿ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾದ ಅಂಗನವಾಡಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನಡೆಯುತ್ತಿರುವ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮ ಮಾದರಿಯಾಗಿದ್ದು, ಪಠ್ಯ ಕ್ರಮದಂತೆ ಚಟುವಟಿಕೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ಕಾರ್ಯಕ್ರಮದ ವೀಕ್ಷಣೆಗಾಗಿ 6 ರಾಜ್ಯಗಳಿಂದ ಅಧಿಕಾರಿಗಳು ಬಂದಿದ್ದು, 2024-25ನೇ ಸಾಲಿನಲ್ಲಿ ರಾಷ್ಟ್ರೀಯ ನೆಕ್ಸಸ್ ಪ್ರಶಸ್ತಿ ಲಭಿಸಿದೆ. ಪೋಷಕರ ನಡೆ ಅಂಗನವಾಡಿಯ ಕಡೆ ಸಭೆಗಳು ಮತ್ತು ಹಲೋ ಪೋಷಕರೇ ಇಂತಹ ವಿನೂತನ ಕಾರ್ಯಕ್ರಮಗಳನ್ನು ಅಂಗನವಾಡಿ ಮಕ್ಕಳ ಪೋಷಕರಿಗಾಗಿ ಮಾಡಲಾಗುತ್ತಿದ್ದು, ಬಾಲ ಮೇಳ ಕಾರ್ಯಕ್ರಮ ಮಕ್ಕಳ ಕಲಿಕೆ ಮತ್ತು ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪಿ.ವೈ. ಶೆಟ್ಟಪ್ಪನವರ್ ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಾಲಾ ಪೂರ್ವ ಶಿಕ್ಷಣ ಸಹಕಾರಿಯಾಗಿದೆ. ಮಕ್ಕಳ ಆರೋಗ್ಯ ಹಾಗೂ ಪೌಷ್ಠಿಕ ಆಹಾರ ನೀಡುವುದು ಅತ್ಯವಶ್ಯಕವಾಗಿದೆ. ಚಟುವಟಿಕೆ ಮೂಲಕ ಶಿಕ್ಷಣ ನೀಡುವುದರಿಂದ ಮಕ್ಕಳ ಕಲಿಕೆ ಸುಲಭವಾಗುತ್ತದೆ ಎಂದರು.
ಅಂಗನವಾಡಿ ಮಕ್ಕಳ ಜೊತೆಗೆ ಜಿಲ್ಲಾಧಿಕಾರಿ ಶಾಲಾ ಪೂರ್ವ ಶಿಕ್ಷಣ ಸ್ಟಾಲ್ ಉದ್ಘಾಟನೆ ಮಾಡಿ, ಶಾಲಾಪೂರ್ವ ಶಿಕ್ಷಣದ ಚಟುವಟಿಕೆಗಳಾದ ಅಂಗನವಾಡಿಯ ನಿಯಮಗಳು, ಆಕಾರಗಳ ಪರಿಚಯ, ಬಣ್ಣಗಳ ಪರಿಚಯ, ಇಂದಿನ ಕ್ಯಾಲೆಂಡರ್ ಚಟುವಟಿಕೆಗಳ ಪ್ರದರ್ಶನ ವೀಕ್ಷಿಸಿದರು. ಬಳಿಕ ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ಮಕ್ಕಳೊಂದಿಗೆ ನಲಿನ್ ಅತುಲ್ ನೃತ್ಯ ಮಾಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ 10 ಅಂಗನವಾಡಿಗಳ 3ರಿಂದ 6 ವರ್ಷದ ಮಕ್ಕಳು ಹಾಗೂ ಮಕ್ಕಳ ತಂದೆ-ತಾಯಂದಿರು, ಸಾರ್ವಜನಿಕರು ಭಾಗವಹಿಸಿದ್ದರು.ಬಾಲಮೇಳ ಕಾರ್ಯಕ್ರಮದ ನಿಮಿತ್ತ ಪಾ;ಕರಿಗೆ ಆಟ ಆಡಿಸಲಾಯಿತು, ಶಾಲಾ ಪೂರ್ವ ಶಿಕ್ಷಣ ಸ್ಟಾಲ್, ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ವೇಷಭೂಷಣ ಹಾಗೂ ಮಕ್ಕಳು ಅಂಗನವಾಡಿಯಲ್ಲಿ ಕಲಿತ ಚಟುವಟಿಕೆಗಳನ್ನು ಪ್ರಸ್ತುತ ಪಡಿಸುವಿಕೆ ಸೇರಿದಂತೆ ಇತರ ಕಾರ್ಯಕ್ರಮಗಳು ನಡೆದವು.