ಗದಗ - ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಿ : ಜಿಲ್ಲಾಧಿಕಾರಿ ವೈಶಾಲಿ

KannadaprabhaNewsNetwork |  
Published : Apr 02, 2024, 01:10 AM ISTUpdated : Apr 02, 2024, 08:40 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಜರುಗುವ ಜಾತ್ರೆ, ಉತ್ಸವ, ಸಂತೆಗಳಲ್ಲಿಯೂ ಸಹ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಬೇಕು. ಒಟ್ಟಾರೆಯಾಗಿ ಎಲ್ಲ ಅರ್ಹ ಮತದಾರರೂ ಕಡ್ಡಾಯವಾಗಿ ಮತದಾನ ಮಾಡಲು ಕ್ರಮ

ಗದಗ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ ೭ರಂದು ಮತದಾನ ಜರುಗಲಿದ್ದು, ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಸ್ವೀಪ್ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಬಲಿಷ್ಠಗೊಳಿಸಲು ಮತದಾನವು ಪ್ರಮುಖ ಪಾತ್ರ ವಹಿಸಲಿದ್ದು, ಈ ನಿಟ್ಟಿನಲ್ಲಿ ಅರ್ಹ ಮತದಾರರು ಮತದಾನ ಮಾಡಲು ಹೆಚ್ಚಿನ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ರೇಲ್ವೆ, ಬ್ಯಾಂಕ್, ಆಸ್ಪತ್ರೆಗಳು ಸೇರಿದಂತೆ ವಿವಿಧ ಪ್ರಮುಖ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಮತದಾನದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಜರುಗುವ ಜಾತ್ರೆ, ಉತ್ಸವ, ಸಂತೆಗಳಲ್ಲಿಯೂ ಸಹ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಬೇಕು. ಒಟ್ಟಾರೆಯಾಗಿ ಎಲ್ಲ ಅರ್ಹ ಮತದಾರರೂ ಕಡ್ಡಾಯವಾಗಿ ಮತದಾನ ಮಾಡಲು ಕ್ರಮ ವಹಿಸಬೇಕೆಂದರು.

ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ, ಜಿಲ್ಲೆಯಿಂದ ವಲಸೆ ಹೋದವರ ಕುರಿತು ಮಾಹಿತಿ ಸಂಗ್ರಹಿಸಿ ಅವರು ಕೂಡ ಕಡ್ಡಾಯವಾಗಿ ಮತದಾನ ಮಾಡಲು ಅವರನ್ನು ಪ್ರೋತ್ಸಾಹಿಸಬೇಕೆಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್.ಎಸ್ ಮಾತನಾಡಿ, ಅರ್ಹರ ಪ್ರತಿಯೊಂದು ಮತವೂ ಅತ್ಯಮೂಲ್ಯವಾಗಿದ್ದು, ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಮತದಾನದ ಮಹತ್ವ ಕುರಿತು ಬ್ಯಾನರ್ ಅಳವಡಿಸುವುದು ಹಾಗೂ ವಾಹನಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡಲು ಕ್ರಮ ಕೈಗೊಳ್ಳಬೇಕೆಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ