ಕನ್ನಡಪ್ರಭ ವಾರ್ತೆ ಕುಮಟಾ
ಕರ್ನಾಟಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇಲ್ಲಿನ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ೫೩೫ನೇ ವ್ಯಾಸಂಗ ವಿಸ್ತರಣ ಉಪನ್ಯಾಸ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕವಿವಿ ಪ್ರಸಾರಾಂಗದ ಸಹಾಯಕ ನಿರ್ದೇಶಕ ಡಾ. ಸಿದ್ದಪ್ಪ ಎನ್. ಮಾತನಾಡಿ, ಕವಿವಿ ಪ್ರಸಾರಾಂಗ ವಿಭಾಗವು ವಿದ್ಯಾರ್ಥಿಗಳಿಗೆ ಜ್ಞಾನ, ಕೌಶಲ್ಯ ಬಿತ್ತರಿಸಲು ಅನೇಕ ಸರಣಿ ಉಪನ್ಯಾಸಗಳನ್ನು ವಿವಿಧ ಕಾಲೇಜುಗಳಲ್ಲಿ ಆಯೋಜಿಸಿದೆ ಹಾಗೂ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಪ್ರಕಟಿಸುತ್ತಿದೆ. ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು.ಮುಖ್ಯ ಅತಿಥಿ ಕೆನರಾ ಕಾಲೇಜ್ ಸೊಸೈಟಿ ಸದಸ್ಯ ವಸಂತ ಪಿ. ಶಾನಭಾಗ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಪ್ರೀತಿ ಪಿ. ಭಂಡಾರಕರ್ ಮಾತನಾಡಿ, ಶಿಕ್ಷಕ ವಿದ್ಯಾರ್ಥಿಗಳು ಸದಾ ಅಧ್ಯಯನಮುಖಿಯಾಗಿರಬೇಕು. ಜ್ಞಾನ ಜಗತ್ತನ್ನು ಆಳುತ್ತಿದೆ. ಜ್ಞಾನದಿಂದ, ಸಾಮರ್ಥ್ಯದಿಂದ ಮತ್ತು ಕೌಶಲ್ಯದಿಂದ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಸಮಾಜದಲ್ಲಿ ಜ್ಞಾನವಂತರಾಗಿ ಎಂದರು.
ಸನತ್ ಸಂಗಡಿಗರು ಪ್ರಾರ್ಥಿಸಿದರು. ಉಪನ್ಯಾಸಕ ಸುಬ್ರಹ್ಮಣ್ಯ ಕೆ. ಭಟ್ ಸ್ವಾಗತಿಸಿ ಪರಿಚಯಿಸಿದರು. ಪ್ರಾಧ್ಯಾಪಕ ಉಮೇಶ ನಾಯ್ಕ ಎಸ್.ಜೆ. ವಂದಿಸಿದರು. ಶಿಕ್ಷಕ ವಿದ್ಯಾರ್ಥಿಗಳಾದ ಸ್ವಾತಿ ಹೆಗಡೆ, ಸಹನಾ ದೇವಳಿ ಕಾರ್ಯಕ್ರಮ ನಿರೂಪಿಸಿದರು.